Kannada News Technology IQOO has added a new smartphone to lineup this week its iQOO Neo 6 SE 80W fast charging speed
iQOO Neo 6 SE: 80W ಫ್ಲ್ಯಾಶ್ ಚಾರ್ಜ್: ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಮತ್ತೊಂದು ಪವರ್ಫುಲ್ ಫೋನ್ ಎಂಟ್ರಿ
ಐಕ್ಯೂ (iQOO) ಕಂಪನಿ ಹೊಸದಾಗಿ ಐಕ್ಯೂ ನಿಯೋ 6 ಎಸ್ಇ (iQOO Neo 6 SE) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನ್ ಆಗಿದ್ದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.
iQOO Neo 6 SE
Follow us on
ಸ್ಮಾರ್ಟ್‌ಫೋನ್ (Smartphone) ವಲಯದಲ್ಲಿ ಅತ್ಯಂತ ಪವರ್ ಫುಲ್ ಮೊಬೈಲ್ಗಳಿಗೆ ಹೆಸರುವಾಸಿಯಾಗಿರುವ ಪ್ರಸಿದ್ಧ ಐಕ್ಯೂ ಕಂಪನಿ ಈ ವರ್ಷ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್ಗಳನ್ನು ಪರಿಚಯಿಸುತ್ತಿದೆ. ಇದೀಗ ಐಕ್ಯೂ(iQOO) ಕಂಪನಿ ಹೊಸದಾಗಿ ಐಕ್ಯೂ ನಿಯೋ 6 ಎಸ್ಇ (iQOO Neo 6 SE) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನ್ ಆಗಿದ್ದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಸದ್ಯಕ್ಕೆ ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ ಚೀನಾ ಮಾರುಕಟ್ಟೆಯಲ್ಲಿ ರಿಲೀಸ್ ಆಗಿದ್ದು, ಕೆಲವೇ ತಿಂಗಳಲ್ಲಿ ಭಾರತಕ್ಕೂ ಕಾಲಿಡಲಿದೆ. ಹಾಗಾದ್ರೆ ಇದರ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇವೆ ಎಂಬುದನ್ನು ನೋಡೋಣ.
ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ ಬೇಸ್ ಮಾಡೆಲ್ 8GB + 128GB ಸ್ಟೋರೇಜ್ ಆಯ್ಕೆಗೆ CNY 1,999. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜಿ 23,00 0ರೂ. ಎನ್ನಬಹುದು. 8GB + 256GB ಮಾದರಿಯ ಆಯ್ಕೆಗೆ CNY 2,299 (ಸುಮಾರು 26,500ರೂ)ಬೆಲೆ ಪಡೆದುಕೊಂಡಿದೆ.
ಈ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಹೊಂದಿದೆ.
ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್ ಪ್ಲಸ್ GW1P ಸೆನ್ಸಾರ್ ಸಾಮರ್ಥ್ಯವನ್ನು ನೀಡಲಾಗಿದೆ.
ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಇದನ್ನೂ ಓದಿ
ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ OriginOS ಓಷನ್ ಕಸ್ಟಮ್ ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ನೀಡಲಾಗಿದೆ.