AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

iQoo Neo 6: ಭಾರತಕ್ಕೆ ಅಪ್ಪಳಿಸಲಿದೆ ವಿದೇಶದಲ್ಲಿ ಧೂಳೆಬ್ಬಿಸಿದ ಐಕ್ಯೂ ನಿಯೋ 6 5G: ಮೇ 31ಕ್ಕೆ ರಿಲೀಸ್

ಕಂಪನಿ ಭಾರತದಲ್ಲಿ ತನ್ನ ಹೊಸ ಐಕ್ಯೂ ನಿಯೋ 6 5G (iQoo Neo 6) ಸ್ಮಾರ್ಟ್‌ಫೋನ್ ಅನ್ನು ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಈಗಾಗಲೇ ವಿದೇಶದಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಿರುವ ಈ ಫೋನ್ ಇದೇ ಮೇ 31 ರಂದು ದೇಶದಲ್ಲಿ ಅನಾವರಣಗೊಳ್ಳಲಿದೆ.

iQoo Neo 6: ಭಾರತಕ್ಕೆ ಅಪ್ಪಳಿಸಲಿದೆ ವಿದೇಶದಲ್ಲಿ ಧೂಳೆಬ್ಬಿಸಿದ ಐಕ್ಯೂ ನಿಯೋ 6 5G: ಮೇ 31ಕ್ಕೆ ರಿಲೀಸ್
iQoo Neo 6
TV9 Web
| Updated By: Vinay Bhat|

Updated on: May 22, 2022 | 2:37 PM

Share

ಈಗಂತು ಮಾರುಕಟ್ಟೆಗೆ ದಿನಕ್ಕೊಂದರಂತೆ ಹೊಸ ಹೊಸ ಸ್ಮಾರ್ಟ್​​ಫೋನ್​ಗಳು (Smartphone) ಲಗ್ಗೆಯಿಡುತ್ತವೆ. ಪ್ರತಿ ಫೋನ್​ನಲ್ಲೂ ತನ್ನದೇ ಆದ ವಿಶೇಷ ಫೀಚರ್​ಗಳು ಒಳಗೊಂಡಿರುತ್ತವೆ. ಇವುಗಳ ನಡುವೆ ವಿಭಿನ್ನವಾಗಿ ನಿಲ್ಲುವುದು ಐಕ್ಯೂ (iQoo) ಕಂಪನಿ. ವಿಶೇಷ ಫೀಚರ್​ಗಳ ಜೊತೆ ಸ್ಟೈಲಿಶ್ ಸ್ಮಾರ್ಟ್​​ಫೋನನ್ನು ಮಾರುಕಟ್ಟೆಗೆ ಪರಿಚಯಿಸುವ ಈ ಬ್ರ್ಯಾಂಡ್ ಇದೀಗ ಭಾರತದಲ್ಲಿ ತನ್ನ ಹೊಸ ಐಕ್ಯೂ ನಿಯೋ 6 5G (iQoo Neo 6) ಸ್ಮಾರ್ಟ್‌ಫೋನ್ ಅನ್ನು ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಈಗಾಗಲೇ ವಿದೇಶದಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಿರುವ ಈ ಫೋನ್ ಇದೇ ಮೇ 31 ರಂದು ದೇಶದಲ್ಲಿ ಅನಾವರಣಗೊಳ್ಳಲಿದೆ. ಐಕ್ಯೂ ನಿಯೋ 6  ಅತ್ಯಂತ ಬಲಿಷ್ಠವಾದ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟಿರಬಹುದು?, ಏನು ವಿಶೇಷತೆ ಎಂಬುದನ್ನ ನೋಡೋಣ.

  1. ಐಕ್ಯೂ ನಿಯೋ 6 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
  2. ಬಲಿಷ್ಠವಾದ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ OriginOS ಓಷನ್ ಕಸ್ಟಮ್ ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ.
  3. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL ಪ್ಲಸ್‌ GW1P ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ.
  4. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  5. ಇದನ್ನೂ ಓದಿ
    Image
    ದಿ ಗ್ರೇಟ್ ಗಾಮಾರ 144ನೇ ಜನ್ಮದಿನ ಆಚರಿಸುತ್ತಿರುವ ಗೂಗಲ್ ಸರ್ಚ್ ಇಂಜಿನ್‌ನ ಡೂಡಲ್, ಯಾರು ಈ ದಿ ಗ್ರೇಟ್ ಗಾಮಾ ಇಲ್ಲಿದೆ ಮಾಹಿತಿ
    Image
    Tech Tips: ಈ ಆ್ಯಪ್ ಇನ್​ಸ್ಟಾಲ್ ಮಾಡಿದ್ರೆ ನಿಮ್ಮ ಫೋನ್ ಬ್ಯಾಟರಿ ಖಾಲಿ ಆಗೋದೆ ಇಲ್ಲ
    Image
    Vivo Y75: ಬಜೆಟ್ ಬೆಲೆಗೆ ಬಂಪರ್ ಫೋನ್: ಭಾರತದಲ್ಲಿ ವಿವೋ Y75 ಸ್ಮಾರ್ಟ್​​ಫೋನ್ ರಿಲೀಸ್
    Image
    ಭಾರತೀಯ ಮಾರುಕಟ್ಟೆಗೆ ಬಂದಿದೆ Vivo ಕಂಪನಿಯ ಹೊಸ ಮೊಬೈಲ್, Vivo X80 Pro
  6. ದೀರ್ಘ ಸಮಯ ಬಾಳಿಕೆ ಬರುವ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
  7. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಅಳವಡಿಸಲಾಗಿದೆ.
  8. ಐಕ್ಯೂ ನಿಯೋ 6 5G ಸ್ಮಾರ್ಟ್‌ಫೋನ್‌ ಒಟ್ಟು ಮೂರು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ವಿದೇಶದಲ್ಲಿ ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕಾಗಿ CNY 2,799 (ಭಾರತದಲ್ಲಿ ಇದರ ಬೆಲೆ ಅಂದಾಜು 33,500 ರೂ. ಎನ್ನಬಹುದು).
  9. ಹಾಗೆಯೇ 8GB RAM ಮತ್ತು 256GB ಮಾದರಿಯ ಆಯ್ಕೆಗೆ CNY 2,999 (ಸುಮಾರು 35,900ರೂ) ಬೆಲೆ ಹೊಂದಿದೆ. ಜೊತೆಗೆ ಟಾಪ್-ಎಂಡ್ 12GB RAM ಮತ್ತು 256GB ಆಯ್ಕೆ CNY 3,299 (ಸರಿಸುಮಾರು. 39,400ರೂ) ಬೆಲೆ ನಿಗದಿ ಮಾಡಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ