ಐಕ್ಯೂಯಿಂದ ದಿಢೀರ್ ನಿಯೋ 6 5G ಹೊಸ ವೇರಿಯೆಂಟ್ ಲಾಂಚ್: ಬೆಲೆ ಎಷ್ಟು?, ಏನು ವಿಶೇಷತೆ?

ಇದೀಗ ಮತ್ತೊಂದು ಹೊಸ ಮೆವರಿಕ್ ಆರೆಂಜ್ ಬಣ್ಣದಲ್ಲಿ ಐಕ್ಯೂ ನಿಯೋ 6 5G ಬಿಡುಗಡೆ ಆಗಿದೆ. ಇದು 12GB RAM ಮತ್ತು 256GB ಸ್ಟೋರೇಜ್ ಹೊಂದಿದ್ದು, ಇದರ ಬೆಲೆ 33,999 ರೂ. ಆಗಿದೆ.

ಐಕ್ಯೂಯಿಂದ ದಿಢೀರ್ ನಿಯೋ 6 5G ಹೊಸ ವೇರಿಯೆಂಟ್ ಲಾಂಚ್: ಬೆಲೆ ಎಷ್ಟು?, ಏನು ವಿಶೇಷತೆ?
iQoo Neo 6 5G
Follow us
TV9 Web
| Updated By: Vinay Bhat

Updated on: Jul 19, 2022 | 6:45 AM

ಈಗಂತು ಮಾರುಕಟ್ಟೆಗೆ ದಿನಕ್ಕೊಂದರಂತೆ ಹೊಸ ಹೊಸ ಸ್ಮಾರ್ಟ್​​ಫೋನ್​ಗಳು (Smartphone) ಲಗ್ಗೆಯಿಡುತ್ತವೆ. ಪ್ರತಿ ಫೋನ್​ನಲ್ಲೂ ತನ್ನದೇ ಆದ ವಿಶೇಷ ಫೀಚರ್​ಗಳು ಒಳಗೊಂಡಿರುತ್ತವೆ. ಇವುಗಳ ನಡುವೆ ವಿಭಿನ್ನವಾಗಿ ನಿಲ್ಲುವುದು ಐಕ್ಯೂ (iQoo) ಕಂಪನಿ. ಅತ್ಯುತ್ತಮ ಫೀಚರ್​ಗಳ ಜೊತೆ ಸ್ಟೈಲಿಶ್ ಸ್ಮಾರ್ಟ್​​ಫೋನನ್ನು ಮಾರುಕಟ್ಟೆಗೆ ಪರಿಚಯಿಸುವ ಈ ಬ್ರ್ಯಾಂಡ್ ಕಳೆದ ಮಾರ್ಚ್​​ನಲ್ಲಿ ತನ್ನ ಐಕ್ಯೂ ನಿಯೋ 6 5G (iQoo Neo 6) ಸ್ಮಾರ್ಟ್‌ಫೋನ್ ಅನ್ನು ಲಾಂಚ್‌ ಮಾಡಿತ್ತು. ಇದಕ್ಕೆ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ಕೂಡ ಕೇಳಿಬಂದಿದೆ. ಈ ಫೋನ್ ದೇಶದಲ್ಲಿ ಸೈಬರ್ ರೇಜ್ ಮತ್ತು ಡಾರ್ಕ್ ನೋವಾ ಕಲರ್​ನಲ್ಲಿ ಅನಾವರಣಗೊಂಡಿತ್ತು. ಇದೀಗ ಮತ್ತೊಂದು ಹೊಸ ಮೆವರಿಕ್ ಆರೆಂಜ್ ಬಣ್ಣದಲ್ಲಿ ಐಕ್ಯೂ ನಿಯೋ 6 5G ಬಿಡುಗಡೆ ಆಗಿದೆ. ಇದು 12GB RAM ಮತ್ತು 256GB ಸ್ಟೋರೇಜ್ ಹೊಂದಿದ್ದು, ಇದರ ಬೆಲೆ 33,999 ರೂ. ಆಗಿದೆ. ಅಮೆಜಾನ್​ನಲ್ಲಿ ಜುಲೈ 23 ರಿಂದ ಖರೀದಿಗೆ ಸಿಗಲಿದೆ.

  1. ಐಕ್ಯೂ ನಿಯೋ 6 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಈ ಹಿಂದೆ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಇದರ 8GB RAM ಮತ್ತು 128GB ಮಾದರಿಯ ಆಯ್ಕೆಗೆ 29,999 ರೂ. ಜೊತೆಗೆ ಟಾಪ್-ಎಂಡ್ 12GB RAM ಮತ್ತು 256GB ಆಯ್ಕೆಗೆ 33,999 ರೂ. ಇದೆ.
  2. ಈ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
  3. ಬಲಿಷ್ಠವಾದ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ OriginOS ಓಷನ್ ಕಸ್ಟಮ್ ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ.
  4. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL ಪ್ಲಸ್‌ GW1P ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ.
  5. ಇದನ್ನೂ ಓದಿ
    Image
    Tecno Spark 9: ಬೆಲೆ ಕೇವಲ 9,499 ರೂ.: ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?
    Image
    Apple iPhone: ಬುಲೆಟ್ ತಾಗಿದ್ದು ಕಿಸೆಯಲ್ಲಿದ್ದ ಐಫೋನ್​ಗೆ: ಸೈನಿಕನ ಪ್ರಾಣ ಉಳಿಸಿದ ಐಫೋನ್ 11 ಪ್ರೊ
    Image
    Best Smart Tv: 30,000 ರೂ. ಒಳಗೆ ಸಿಗುತ್ತಿರುವ 43 ಇಂಚಿನ ಬೆಸ್ಟ್ ಸ್ಮಾರ್ಟ್ ಟಿವಿಗಳು ಇಲ್ಲಿದೆ ನೋಡಿ
    Image
    Dangerous Apps: 8 ಅಪಾಯಕಾರಿ ಆ್ಯಪ್ ಪತ್ತೆ: ನಿಮ್ಮ ಸ್ಮಾರ್ಟ್​​ಫೋನ್​ನಲ್ಲಿದ್ದರೆ ತಕ್ಷಣ ಡಿಲೀಟ್ ಮಾಡಿ
  6. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆ್ಯಂಗಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  7. ದೀರ್ಘ ಸಮಯ ಬಾಳಿಕೆ ಬರುವ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
  8. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಅಳವಡಿಸಲಾಗಿದೆ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ