10 ನಿಮಿಷ-ಶೇ. 50 ರಷ್ಟು ಚಾರ್ಜ್: ಐಕ್ಯೂ ನಿಯೋ 7 ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ

iQOO Neo 7 India price reduced: ಐಕ್ಯೂ ಕಂಪನಿ ಕಳೆದ ಫೆಬ್ರವರಿಯಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿದ್ದ ಐಕ್ಯೂ ನಿಯೋ 7 ಫೋನಿನ ಬೆಲೆಯಲ್ಲಿ ಇಳಿಕೆ ಮಾಡಿದೆ. ಭಾರತೀಯ ಗ್ರಾಹಕರಿಗೆ ಈ ಫೋನಿನ ಬೆಲೆಯಲ್ಲಿ 2,000 ರೂ. ಕಡಿಮೆ ಮಾಡಿ ಮಾರಾಟ ಮಾಡುತ್ತಿದೆ.

10 ನಿಮಿಷ-ಶೇ. 50 ರಷ್ಟು ಚಾರ್ಜ್: ಐಕ್ಯೂ ನಿಯೋ 7 ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ
iQOO Neo 7
Follow us
|

Updated on: Sep 07, 2023 | 1:58 PM

ವಿವೋ ಒಡೆತನದ ಪ್ರಸಿದ್ಧ ಸ್ಮಾರ್ಟ್​ಫೋನ್ ಬ್ರ್ಯಾಂಡ್ ಐಕ್ಯೂ ಕಂಪನಿಯ ಫೋನುಗಳಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಹೀಗಾಗಿ ಒಂದರ ಹಿಂದೆ ಒಂದರಂತೆ ದೇಶದಲ್ಲಿ ಅತ್ಯುತ್ತಮ ಮೊಬೈಲ್​ಗಳನ್ನು ಪರಿಚಯಿಸುತ್ತಿದೆ. ಕಳೆದ ವಾರವಷ್ಟೆ ಐಕ್ಯೂ Z7 ಪ್ರೊ 5G ಫೋನನ್ನು ರಿಲೀಸ್ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಕಂಪನಿ ಕಳೆದ ಫೆಬ್ರವರಿಯಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿದ್ದ ಐಕ್ಯೂ ನಿಯೋ 7 (iQOO Neo 7 5G) ಫೋನಿನ ದರದಲ್ಲಿ ಇಳಿಕೆ ಮಾಡಿದೆ. ಭಾರತೀಯ ಗ್ರಾಹಕರಿಗೆ ಈ ಫೋನಿನ ಬೆಲೆಯಲ್ಲಿ 2,000 ರೂ. ಕಡಿಮೆ ಮಾಡಿ ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಐಕ್ಯೂ ನಿಯೋ 7 ನೂತನ ಬೆಲೆ:

ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್‌ನಲ್ಲಿ, ಐಕ್ಯೂ ನಿಯೋ 7 ಫೋನಿನ 8GB+128GB ರೂಪಾಂತರವು 27,999 ರೂ. ಮತ್ತು 12GB+256GB ಮಾದರಿಗೆ 31,999 ರೂ. ಆಗಿದೆ. ಇದು ಬಿಡುಗಡೆಯ ಬೆಲೆಯಿಂದ 2,000 ರೂ. ಕಡಿತ ಮಾಡಲಾಗಿದೆ. ಈ ಹಿಂದೆ ಈ ಫೋನಿನ ಬೆಲೆ ಕ್ರಮವಾಗಿ 29,999 ರೂ. ಮತ್ತು 33,999 ರೂ. ಇತ್ತು. ಇನ್ನು ICICI ಮತ್ತು HDFC ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ 1,000 ರೂಪಾಯಿಗಳ ತ್ವರಿತ ರಿಯಾಯಿತಿಯೂ ಇದೆ.

ರಿಲಯನ್ಸ್ ಜಿಯೋ 7ನೇ ವಾರ್ಷಿಕೋತ್ಸವ: ಬಳಕೆದಾರರಿಗೆ ಹಿಂದೆಂದೂ ನೀಡದ ಕೊಡುಗೆ

ಇದನ್ನೂ ಓದಿ
Image
ಆಂಡ್ರಾಯ್ಡ್-ಐಒಎಸ್ ಬಳಕೆದಾರರಿಗೆ ಹೊಸ ಆಯ್ಕೆ: ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ
Image
ಭಾರತದಲ್ಲಿ ರಿಯಲ್ ಮಿ ನಾರ್ಜೊ 60x ಸ್ಮಾರ್ಟ್​ಫೋನ್ ಬಿಡುಗಡೆ
Image
ವಿವೋ V29e ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ: ಬೆಲೆ ಎಷ್ಟು?
Image
ಬಜೆಟ್ ಪ್ರಿಯರು ಕಾದು ಕುಳಿತ ರಿಯಲ್ ಮಿ C51 ಫೋನಿನ ಮಾರಾಟ ಆರಂಭ

ಐಕ್ಯೂ ನಿಯೋ 7 ಫೀಚರ್ಸ್ ಏನು?:

  • ಐಕ್ಯೂ ನಿಯೋ 7 ಫೋನ್ 1080*2400 ಪಿಕ್ಸೆಲ್ ರೆಸಲೂಷನ್ ಸಾಮರ್ಥ್ಯದ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ.
  • ಮೀಡಿಯಾ ಟೆಕ್ ಡೈಮೆನ್ಸಿಟಿ 8200+ SoC ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಪ್ರಮುಖ SoC 4nm ಪ್ರಕ್ರಿಯೆಯನ್ನು ಆಧರಿಸಿದ್ದು, ಅತ್ಯಂತ ವೇಗವನ್ನು ಪಡೆದುಕೊಂಡಿರುವುದರಿಂದ ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ.
  • ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್​ನ OIS ಕ್ಯಾಮೆರಾ ನೀಡಲಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೊ ಲೆನ್ಸ್ ಇದೆ. 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ.
  • ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 120W ಫ್ಲ್ಯಾಶ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕೇವಲ 10 ನಿಮಿಷಗಳಲ್ಲಿ ಶೇ. 50 ರಷ್ಟು ಚಾರ್ಜ್ ಫುಲ್ ಆಗುತ್ತದೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ