iQoo Neo 7 Pro: ಗೇಮಿಂಗ್ ಪ್ರಿಯರು ಸಿದ್ಧರಾಗಿ: ಬರುತ್ತಿದೆ ಬಲಿಷ್ಠ ಪ್ರೊಸೆಸರ್​ನ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್

ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಹೊಸ ಐಕ್ಯೂ ನಿಯೋ 7 ಪ್ರೊ ಫೋನ್​ನಲ್ಲಿ ಸ್ನಾಪ್​ಡ್ರಾಗನ್ 8+ ಜೆನ್‌ 1 ಪ್ರೊಸೆಸರ್ ಅಳವಡಿಸಲಾಗಿದೆ. ಜೊತೆಗೆ ಆಕರ್ಷಕ ಕ್ಯಾಮೆರಾ ಕೂಡ ನೀಡಲಾಗಿದೆ.

iQoo Neo 7 Pro: ಗೇಮಿಂಗ್ ಪ್ರಿಯರು ಸಿದ್ಧರಾಗಿ: ಬರುತ್ತಿದೆ ಬಲಿಷ್ಠ ಪ್ರೊಸೆಸರ್​ನ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್
iQoo Neo 7 Pro
Follow us
|

Updated on: Jun 18, 2023 | 6:55 AM

ವಿವೋ ಒಡೆತನದ ಐಕ್ಯೂ ಕಂಪನಿ ಸ್ಮಾರ್ಟ್​​ಫೋನ್ (Smartphone) ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿದೆ. ಅಪರೂಪಕ್ಕೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ವಿವೋ ಇದೀಗ ಹೊಸ ಐಕ್ಯೂ ನಿಯೋ 7 ಪ್ರೊ (iQOO Neo) ಸ್ಮಾರ್ಟ್​ಫೋನ್ ಅನ್ನು ರಿಲೀಸ್ ಮಾಡಲು ಮುಂದಾಗಿದೆ. ಇದು ಕಳೆದ ವರ್ಷ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ (iQOO Neo 7 Series) ಮುಂದುವರೆದ ಭಾಗ. ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಹೊಸ ಫೋನ್​ನಲ್ಲಿ ಸ್ನಾಪ್​ಡ್ರಾಗನ್ 8+ ಜೆನ್‌ 1 ಪ್ರೊಸೆಸರ್ ಅಳವಡಿಸಲಾಗಿದೆ. ಜೊತೆಗೆ ಆಕರ್ಷಕ ಕ್ಯಾಮೆರಾ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಪೀಚರ್ಸ್ ಇದೆ? ಎಂಬುದನ್ನು ನೋಡೋಣ.

ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗುವುದು ಖಚಿತವಾಗಿದೆ. ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್‌ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್‌ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ ಎಂದು ಹೇಳಲಾಗಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಇದು ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ.

Oppo Reno 9A: ರೆನೋ ಸರಣಿಯಲ್ಲಿ ಬಂತು ಮತ್ತೊಂದು ಸೂಪರ್ ಫೋನ್

ಇದನ್ನೂ ಓದಿ
Image
Realme 11 Pro+ 5G: 60,000 ಮೊಬೈಲ್​ಗಳು ಸೇಲ್: ಮೊದಲ ದಿನವೇ ದಾಖಲೆ ಬರೆದ 200MP ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಸ್ಮಾರ್ಟ್​ಫೋನ್
Image
Best Smartphones: ಮಾರುಕಟ್ಟೆಯಲ್ಲಿ 10,000 ರೂ. ಒಳಗೆ ಸಿಗುತ್ತಿರುವ ಬೆಸ್ಟ್ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ
Image
Galaxy M34 5G: ಬಿಡುಗಡೆಗೆ ಸಿದ್ದವಾದ ಸ್ಯಾಮ್​ಸಂಗ್​ನ 6,000mAh ಬ್ಯಾಟರಿಯ ಹೊಸ ಸ್ಮಾರ್ಟ್​ಫೋನ್
Image
Nothing Phone 2: ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿಸಲು ಬರುತ್ತಿದೆ ನಥಿಂಗ್‌ ಫೋನ್‌ (2)

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿ ಜೊತೆಗೆ ಸ್ಯಾಮ್‌ಸಂಗ್‌ GN5 ಸೆನ್ಸರ್‌ ಆಯ್ಕೆಯ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾವನ್ನು ಹೊಂದಿರಲಿದೆ ಎಂಬ ಮಾತಿದೆ. ಇದರೊಂದಿಗೆ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಹೊಂದಿರಲಿದೆಯೋ ಅಥವಾ ಟ್ರಿಪಲ್‌ ಕ್ಯಾಮೆರಾ ಹೊಂದಿರಲಿದೆಯೋ ಎಂಬ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ.

120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAhಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ ಎಂದು ಹೇಳಲಾಗುತ್ತಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ. ಉಳಿದಂತೆ 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್