iQOO Neo 7 Pro: ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ವೇದಿಕೆ ಸಜ್ಜು: ಭಾರತದಲ್ಲಿ ಯಾವಾಗ ರಿಲೀಸ್?

|

Updated on: Jun 09, 2023 | 1:18 PM

ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗುವುದು ಖಚಿತವಾಗಿದೆ. ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್‌ ಆಗಿವೆ.

iQOO Neo 7 Pro: ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ವೇದಿಕೆ ಸಜ್ಜು: ಭಾರತದಲ್ಲಿ ಯಾವಾಗ ರಿಲೀಸ್?
iqoo neo 7 pro
Follow us on

ಸ್ಮಾರ್ಟ್​​ಫೋನ್ (Smartphone) ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ಇದೀಗ ಹೊಸ ಫೋನ್​ನೊಂದಿಗೆ ಮತ್ತೆ ಬಂದಿದೆ. ಕಳೆದ ವರ್ಷ ಐಕ್ಯೂ ನಿಯೋ 7 ಸರಣಿ (iQOO Neo 7 Series) ಫೋನನ್ನು ಬಿಡುಗಡೆ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಇದೇ ಸರಣಿಯ ಮುಂದುವರೆದ ಭಾಗವಾಗಿ ಐಕ್ಯೂ ನಿಯೋ 7 ಪ್ರೊ (iQOO Neo) ಸ್ಮಾರ್ಟ್​ಫೋನ್ ಅನ್ನು ರಿಲೀಸ್ ಮಾಡಲು ಮುಂದಾಗಿದೆ. ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಫೋನ್​ನಲ್ಲಿ ಬಲಿಷ್ಠವಾದ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಪೀಚರ್ಸ್ ಇದೆ? ಎಂಬುದನ್ನು ನೋಡೋಣ.

ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗುವುದು ಖಚಿತವಾಗಿದೆ. ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್‌ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್‌ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ ಎಂದು ಹೇಳಲಾಗಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಎರಡು ವೇರಿಯಂಟ್‌ನಲ್ಲಿ ಈ ಫೋನ್‌ ಕಾಣಿಸಿಕೊಳ್ಳಲಿದೆ.

Redmi 12: ಭಾರತದ ಗ್ಯಾಜೆಟ್ ಪ್ರಿಯರಿಗಾಗಿ ಬರುತ್ತಿದೆ ಆಕರ್ಷಕ ಶಓಮಿ ಫೋನ್

ಇದನ್ನೂ ಓದಿ
Tech Tips: ತಪ್ಪಿ ಬೇರೆಯವರ ನಂಬರ್​ಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ ಪಡೆಯುವುದು ಹೇಗೆ?
Nokia C300: ಮಾರುಕಟ್ಟೆಗೆ ಬಂತು ಹೊಸ ನೋಕಿಯಾ ಮೊಬೈಲ್
JioTag: ಆ್ಯಪಲ್​ ಏರ್​ಟ್ಯಾಗ್​ಗೆ ಸೆಡ್ಡು ಹೊಡೆದ ಜಿಯೋ; ಕಡಿಮೆ ಬೆಲೆಯ ಜಿಯೋಟ್ಯಾಗ್ ಬಿಡುಗಡೆ
Vivo V29 Lite 5G: ಸ್ನ್ಯಾಪ್​ಡ್ರ್ಯಾಗನ್ ಪ್ರೊಸೆಸರ್, 64 MP ಕ್ಯಾಮೆರಾ ಕ್ರೇಜಿ ಫೋನ್

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿ ಜೊತೆಗೆ ಸ್ಯಾಮ್‌ಸಂಗ್‌ GN5 ಸೆನ್ಸರ್‌ ಆಯ್ಕೆಯ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾವನ್ನು ಹೊಂದಿರಲಿದೆ ಎಂಬ ಮಾತಿದೆ. ಇದರೊಂದಿಗೆ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಹೊಂದಿರಲಿದೆಯೋ ಅಥವಾ ಟ್ರಿಪಲ್‌ ಕ್ಯಾಮೆರಾ ಹೊಂದಿರಲಿದೆಯೋ ಎಂಬ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ.

120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAhಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ ಎಂದು ಹೇಳಲಾಗುತ್ತಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ. ಉಳಿದಂತೆ 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ