AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IQOO Z5: ಶವೋಮಿಗೆ ಬಿಗ್ ಶಾಕ್: ವಿದೇಶದಲ್ಲಿ ಧೂಳೆಬ್ಬಿಸಿದ ಐಕ್ಯೂ Z5 5G ಸ್ಮಾರ್ಟ್​ಫೋನ್ ಭಾರತದಲ್ಲಿ ಬಿಡುಗಡೆ

IQOO Z5 launched: ಐಕ್ಯೂ Z5 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಮಾದರಿಗಳಲ್ಲಿ ಬಿಡುಗಡೆ ಆಗಿದ್ದು, ಬಜೆಟ್ ಬೆಲೆಗೆ ಲಭ್ಯವಿರುವುದು ವಿಶೇಷ.

IQOO Z5: ಶವೋಮಿಗೆ ಬಿಗ್ ಶಾಕ್: ವಿದೇಶದಲ್ಲಿ ಧೂಳೆಬ್ಬಿಸಿದ ಐಕ್ಯೂ Z5 5G ಸ್ಮಾರ್ಟ್​ಫೋನ್ ಭಾರತದಲ್ಲಿ ಬಿಡುಗಡೆ
iQOO Z5
TV9 Web
| Updated By: Vinay Bhat|

Updated on: Sep 27, 2021 | 1:58 PM

Share

ವಿಶ್ವದ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ರಾಜನಂತೆ ಮೆರೆಯುತ್ತಿರುವ ಶವೋಮಿ ಕಂಪನಿಗೆ ಈಗ ನಡುಕ ಶುರುವಾಗಿದೆ. ಪವರ್ಫುಲ್ ಸ್ಮಾರ್ಟ್‌ಫೋನ್‌ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಐಕ್ಯೂ (iQoo) ಕಂಪನಿಯ ನೂತನ 5g ಸ್ಮಾರ್ಟ್‌ಫೋನ್‌ ‘ಐಕ್ಯೂ ಝೆಡ್5’ (iQoo Z5) ಭಾರತದಲ್ಲಿ ಅನಾವರಣಗೊಂಡಿದೆ. ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲ, ಸೆಲ್ಫಿ ಸ್ನ್ಯಾಪರ್‌ಗಾಗಿ ಪಂಚ್-ಹೋಲ್ ಕ್ಯಾಮೆರಾ ನಾಚ್ ಸೇರಿದಂತೆ ಅನೇಕ ಅದ್ಭುತ ಫೀಚರ್​ಗಳನ್ನು ಒಳಗೊಂಡಿರುವ ಈ ಸ್ಮಾರ್ಟ್​ಫೋನ್ ಇತ್ತೀಚೆಗಷ್ಟೆ ಚೀನಾದಲ್ಲಿ ಬಿಡುಗಡೆ ಆಗಿ ಧೂಳೆಬ್ಬಿಸಿತ್ತು. ಸದ್ಯ ಐಕ್ಯೂ Z5 ಭಾರತಕ್ಕೆ ಲಗ್ಗೆಯಿಟ್ಟಿದ್ದು ಬಜೆಟ್ ಬೆಲೆಗೆ ಲಭ್ಯವಿರುವುದು ವಿಶೇಷ.

ಐಕ್ಯೂ Z5 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಮಾದರಿಗಳಲ್ಲಿ ಬಿಡುಗಡೆ ಆಗಿದೆ. 8GB RAM ಮತ್ತು 128GB ಶೇಖರಣಾ ರೂಪಾಂತರಕ್ಕೆ 23,990 ಬೆಲೆಗಳನ್ನು ಹೊಂದಿದೆ. ಹಾಗೆಯೇ, 12GB RAM ಮತ್ತು 256GB ಸ್ಟೋರೆಜ್ ಸಾಮರ್ಥ್ಯಕ್ಕೆ 26,990 ರೂ. ನಿಗದಿ ಮಾಡಲಾಗಿದೆ. ಇಂದಿನಿಂದಲೇ ಈ ಸ್ಮಾರ್ಟ್​ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಐಕ್ಯೂ ಕಂಪನಿಯ ಅಧಿಕೃತ ವೆಬ್​ಸೈಟ್​ನಲ್ಲಿ ಖರೀದಿಗೆ ಸಿಗುತ್ತಿದೆ.

ಐಕ್ಯೂ Z5 ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್-ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11. ಆಧಾರಿತ ಒರಿಜಿನ್ ಓಎಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸರ್ f/2.2 ಅಪರ್ಚರ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಇನ್ನೂ 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G , ಟ್ರೈ-ಬ್ಯಾಂಡ್ ವೈ-ಫೈ, ಬ್ಲೂಟೂತ್ v5.2, USB ಟೈಪ್-ಸಿ, USB OTG , ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಇತ್ತೀಚೆಗಿನ ಆಯ್ಕೆಗಳನ್ನು ಹೊಂದಿದೆ.

WhatsApp: ಈ ಆಂಡ್ರಾಯ್ಡ್, ಐಫೋನ್​ಗಳಲ್ಲಿ ನ. 1ರ ಬಳಿಕ ವಾಟ್ಸ್​ಆ್ಯಪ್ ಸ್ಥಗಿತ: ನಿಮ್ಮ ಫೋನ್ ಇದೆಯೇ?, ಇಲ್ಲಿ ನೋಡಿ

Computer Tips Part 2: ಕಂಪ್ಯೂಟರ್ ಓವರ್ ಹೀಟ್, ಸ್ಲೋ ಆಗುತ್ತಾ?: ಕೆಲ ವಿಚಾರಗಳು ನಿಮ್ಮ ಗಮನದಲ್ಲಿರಲಿ

(IQOO Z5 has been launched in India at a starting price of Rs 23990)