AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

iQOO Z5: ಭಾರತದಲ್ಲಿ ಐಕ್ಯೂ ಝೆಡ್ 5 ಭರ್ಜರಿ ಸೇಲ್: ನೂತನ ಆವೃತ್ತಿ ಬಿಡುಗಡೆ, ಬೆಲೆ ಎಷ್ಟು?

ಐಕ್ಯೂ Z5 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM ಮತ್ತು 128GB ಸ್ಟೋರೇಜ್‌ಗಾಗಿ 23,990 ರೂ. ಮತ್ತು 12GB RAM ಮತ್ತು 256GB ಸ್ಟೋರೇಜ್ ಆಯ್ಕೆಗಳಿಗಾಗಿ 26,990 ರೂ. ಬೆಲೆಯನ್ನು ನಿಗದಿ ಮಾಡಲಾಗಿದೆ.

iQOO Z5: ಭಾರತದಲ್ಲಿ ಐಕ್ಯೂ ಝೆಡ್ 5 ಭರ್ಜರಿ ಸೇಲ್: ನೂತನ ಆವೃತ್ತಿ ಬಿಡುಗಡೆ, ಬೆಲೆ ಎಷ್ಟು?
iQOO Z5
TV9 Web
| Updated By: Vinay Bhat|

Updated on: Nov 16, 2021 | 2:45 PM

Share

ಬಲಿಷ್ಠ ಫೋನ್​ಗಳನ್ನು ಪರಿಚಯಿಸಿ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿರುವ ಐಕ್ಯೂ (iQoo) ಕಂಪನಿ ಇತ್ತೀಚಿಗಷ್ಟೆ ಭಾರತದಲ್ಲಿ ಐಕ್ಯೂ ಝೆಡ್ 5 (iQOO Z5) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿತ್ತು. ದೇಶದಲ್ಲಿ ಈ ಸ್ಮಾರ್ಟ್​ಫೋನ್​ಗೆ (Smartphone) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ನೂತನ ಆವೃತ್ತಿಯಲ್ಲಿ ಐಕ್ಯೂ Z5 ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಹೌದು, ಭಾರತದಲ್ಲಿ ಸೈಬರ್ ಗ್ರೀಡ್ (Cyber Grid) ಬಣ್ಣ ವೇರಿಯಂಟ್​ನಲ್ಲಿ ಐಕ್ಯೂ Z5 ಫೋನ್‌ ಲಾಂಚ್ ಆಗಿದೆ.

ಐಕ್ಯೂ Z5 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM ಮತ್ತು 128GB ಸ್ಟೋರೇಜ್‌ಗಾಗಿ 23,990 ರೂ. ಮತ್ತು 12GB RAM ಮತ್ತು 256GB ಸ್ಟೋರೇಜ್ ಆಯ್ಕೆಗಳಿಗಾಗಿ 26,990 ರೂ. ಬೆಲೆಯನ್ನು ನಿಗದಿ ಮಾಡಲಾಗಿದೆ. ಇದು ಆರ್ಕ್ಟಿಕ್ ಡಾನ್ ಮತ್ತು ಮಿಸ್ಟಿಕ್ ಸ್ಪೇಸ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಫೋನ್ ಐಕ್ಯೂ ಕಂಪನಿಯ ಅಧಿಕೃತ iQoo.com ಮತ್ತು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಸೇಲ್ ಕಾಣುತ್ತಿದೆ.

ಈ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಐಕ್ಯೂ Z5 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡ್ಯುಯಲ್ ವ್ಯೂ ವೀಡಿಯೋ, ಸೂಪರ್ ನೈಟ್ ಮೋಡ್, ಪೋರ್ಟ್ರೇಟ್ ಮೋಡ್ ಅನ್ನು ಹೊಂದಿವೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ v5.2, ಯುಎಸ್‌ಬಿ ಒಟಿಜಿ, ಟ್ರೈ-ಬ್ಯಾಂಡ್ ವೈ-ಫೈ 2.4GHz, 5.1GHz, ಮತ್ತು 5.8GHz ಬ್ಯಾಂಡ್‌ಗಳು, GPS ಮತ್ತು 3.5mm ಆಡಿಯೋ ಜ್ಯಾಕ್ ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆ ಸೇರಿಸಲಾಗಿದೆ.

Redmi Note 11T 5G: ರೆಡ್ಮಿ ನೋಟ್ 11ಟಿ 5G ನ. 30ಕ್ಕೆ ಬಿಡುಗಡೆ: ಈ ಸ್ಮಾರ್ಟ್​​ಫೋನ್ ಖರೀದಿಗೆ ಕ್ಯೂ ಗ್ಯಾರಂಟಿ

Samsung Galaxy S21 FE: ಮಾರುಕಟ್ಟೆಯಲ್ಲಿ ಗ್ಯಾಲಕ್ಸಿ S20 FE ಹವಾ ತಗ್ಗುವ ಮುನ್ನವೇ ಗ್ಯಾಲಕ್ಸಿ S21 FE ರಿಲೀಸ್​ಗೆ ಸ್ಯಾಮ್​ಸಂಗ್ ಸಜ್ಜು

(iQOO Z5 has launched a new variant called Cyber Grid that comes in a unique colour)

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ