ಬಲಿಷ್ಠ ಫೋನ್ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿರುವ ಐಕ್ಯೂ (iQoo) ಕಂಪನಿ ಇತ್ತೀಚಿಗಷ್ಟೆ ಭಾರತದಲ್ಲಿ ಐಕ್ಯೂ ಝೆಡ್ 5 (iQOO Z5) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತ್ತು. ದೇಶದಲ್ಲಿ ಈ ಸ್ಮಾರ್ಟ್ಫೋನ್ಗೆ (Smartphone) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ನೂತನ ಆವೃತ್ತಿಯಲ್ಲಿ ಐಕ್ಯೂ Z5 ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಹೌದು, ಭಾರತದಲ್ಲಿ ಸೈಬರ್ ಗ್ರೀಡ್ (Cyber Grid) ಬಣ್ಣ ವೇರಿಯಂಟ್ನಲ್ಲಿ ಐಕ್ಯೂ Z5 ಫೋನ್ ಲಾಂಚ್ ಆಗಿದೆ.
ಐಕ್ಯೂ Z5 ಸ್ಮಾರ್ಟ್‌ಫೋನ್ ಭಾರತದಲ್ಲಿ 8GB RAM ಮತ್ತು 128GB ಸ್ಟೋರೇಜ್‌ಗಾಗಿ 23,990 ರೂ. ಮತ್ತು 12GB RAM ಮತ್ತು 256GB ಸ್ಟೋರೇಜ್ ಆಯ್ಕೆಗಳಿಗಾಗಿ 26,990 ರೂ. ಬೆಲೆಯನ್ನು ನಿಗದಿ ಮಾಡಲಾಗಿದೆ. ಇದು ಆರ್ಕ್ಟಿಕ್ ಡಾನ್ ಮತ್ತು ಮಿಸ್ಟಿಕ್ ಸ್ಪೇಸ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಫೋನ್ ಐಕ್ಯೂ ಕಂಪನಿಯ ಅಧಿಕೃತ iQoo.com ಮತ್ತು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಸೇಲ್ ಕಾಣುತ್ತಿದೆ.
ಈ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಐಕ್ಯೂ Z5 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡ್ಯುಯಲ್ ವ್ಯೂ ವೀಡಿಯೋ, ಸೂಪರ್ ನೈಟ್ ಮೋಡ್, ಪೋರ್ಟ್ರೇಟ್ ಮೋಡ್ ಅನ್ನು ಹೊಂದಿವೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ v5.2, ಯುಎಸ್‌ಬಿ ಒಟಿಜಿ, ಟ್ರೈ-ಬ್ಯಾಂಡ್ ವೈ-ಫೈ 2.4GHz, 5.1GHz, ಮತ್ತು 5.8GHz ಬ್ಯಾಂಡ್‌ಗಳು, GPS ಮತ್ತು 3.5mm ಆಡಿಯೋ ಜ್ಯಾಕ್ ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆ ಸೇರಿಸಲಾಗಿದೆ.
Redmi Note 11T 5G: ರೆಡ್ಮಿ ನೋಟ್ 11ಟಿ 5G ನ. 30ಕ್ಕೆ ಬಿಡುಗಡೆ: ಈ ಸ್ಮಾರ್ಟ್‌ಫೋನ್ ಖರೀದಿಗೆ ಕ್ಯೂ ಗ್ಯಾರಂಟಿ
(iQOO Z5 has launched a new variant called Cyber Grid that comes in a unique colour)