iQoo Z5: 44W ಫ್ಲ್ಯಾಶ್ ಚಾರ್ಜ್, 64MP ಕ್ಯಾಮೆರಾ: ಐಕ್ಯೂ ಕಂಪನಿಯ ಹೊಸ Z5 ಸ್ಮಾರ್ಟ್‌ಫೋನ್ ಬಿಡುಗಡೆ
ಐಕ್ಯೂ Z5 ಸ್ಮಾರ್ಟ್‌ಫೋನ್ 5,000mAh ಬಲಿಷ್ಠ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪವರ್ಫುಲ್ ಫೋನ್ಗಳನ್ನು ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ಐಕ್ಯೂ (iQoo) ಕಂಪನಿ ಇದೀಗ ತನ್ನ ಹೊಸ ಐಕ್ಯೂ Z5 (iQoo Z5) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲ, ಬಲಿಷ್ಠ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳನ್ನು ಒಳಗೊಂಡಿದೆ.
ಐಕ್ಯೂ Z5 ಸ್ಮಾರ್ಟ್‌ಫೋನ್ ಒಟ್ಟು ಮೂರು ಮಾದರಿಯಲ್ಲಿ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. 8GB RAM + 128GB ಶೇಖರಣಾ ರೂಪಾಂತರಕ್ಕೆ CNY 1,899. ಇದರ ಬೆಲೆ ಭಾರತದಲ್ಲಿ ಅಂದಾಜು 21,600 ರೂ. ಇರಬಹುದು. 8GB RAM + 256GB ಶೇಖರಣಾ ರೂಪಾಂತರಕ್ಕೆ CNY 2,099 (ಸುಮಾರು 23,900ರೂ) , ಮತ್ತು 12GB RAM + 256 GB ಸ್ಟೋರೇಜ್ ರೂಪಾಂತರಕ್ಕಾಗಿ CNY 2,299 (ಸರಿಸುಮಾರು ರೂ. 26,200) ಬೆಲೆ ಹೊಂದಿದೆ.
ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿರುವ ಸ್ಮಾರ್ಟ್ಫೋನ್ಗಳ ಪಟ್ಟಿಯಲ್ಲಿ ಐಕ್ಯೂ Z5 ಕೂಡ ಇದೆ. ಹೀಗಾಗಿ ಮುಂದಿನ ತಿಂಗಳು ಇದು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡುವ ಸಾಧ್ಯತೆ ಇದೆ.
ಐಕ್ಯೂ Z5 ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್-ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11. ಆಧಾರಿತ ಒರಿಜಿನ್ ಓಎಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸರ್ f/2.2 ಅಪರ್ಚರ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಇನ್ನು 5,000mAh ಬಲಿಷ್ಠ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G , ಟ್ರೈ-ಬ್ಯಾಂಡ್ ವೈ-ಫೈ, ಬ್ಲೂಟೂತ್ v5.2, USB ಟೈಪ್-ಸಿ, USB OTG , ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಇತ್ತೀಚೆಗಿನ ಆಯ್ಕೆಗಳನ್ನು ಹೊಂದಿದೆ.
USB type-C: ಆ್ಯಪಲ್ ಸೇರಿ ಎಲ್ಲಾ ಮೊಬೈಲ್‍ಗಳಿಗೆ ಒಂದೇ ವಿಧದ ಚಾರ್ಜರ್: ಯುರೋಪಿಯನ್ ಯೂನಿಯನ್ ಆದೇಶ
iPhone 13: ಇಂದು ಐಫೋನ್ 13 ಮೊದಲ ಸೇಲ್: ಖರೀದಿಸುವ ಮುನ್ನ ಈ ಡಿಸ್ಕೌಂಟ್ ಆಫರ್ ಬಗ್ಗೆ ತಿಳಿದುಕೊಳ್ಳಿ
(iQoo Z5 With Snapdragon 778G SoC 44W Flash Charge Launched Price Specifications)