iQOO Z6 Pro 5G: ಭರ್ಜರಿ ಕ್ಯಾಮೆರಾ, ಬೊಂಬಾಟ್ ಬ್ಯಾಟರಿ: ದೇಶದಲ್ಲಿ ಐಕ್ಯೂ Z6 ಪ್ರೊ 5G, ಐಕ್ಯೂ Z6 4G ಫೋನ್ ಬಿಡುಗಡೆ
iQOO Z6 4G: ಐಕ್ಯೂ ಕಂಪನಿ ಇದೀಗ ಭಾರತದಲ್ಲಿ ಐಕ್ಯೂ Z ಸರಣಿಯಲ್ಲಿ ತನ್ನ ಬಹುನಿರೀಕ್ಷಿತ ಐಕ್ಯೂ Z6 ಪ್ರೊ 5G ಮತ್ತು ಐಕ್ಯೂ Z6 4G ಸ್ಮಾರ್ಟ್ಫೋನ್ಗಳನ್ನು ಅನಾವರಣ ಮಾಡಿದೆ. ಬಿಡುಗಡೆಗೂ ಮುನ್ನ ಸಾಕಷ್ಟು ಸದ್ದು ಮಾಡಿದ್ದ ಈ ಎರಡೂ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ.
ಪವರ್ ಫುಲ್ ಸ್ಮಾರ್ಟ್ಫೋನ್ಗಳಿಗೆ (Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಐಕ್ಯೂ ಕಂಪನಿ ಇದೀಗ ಭಾರತದಲ್ಲಿ ಐಕ್ಯೂ Z ಸರಣಿಯಲ್ಲಿ ತನ್ನ ಬಹುನಿರೀಕ್ಷಿತ ಐಕ್ಯೂ ಝೆಡ್6 ಪ್ರೊ 5ಜಿ (iQOO Z6 Pro 5G) ಮತ್ತು ಐಕ್ಯೂ ಝೆಡ್6 4ಜಿ (iQOO Z6 4G) ಸ್ಮಾರ್ಟ್ಫೋನ್ಗಳನ್ನು ಅನಾವರಣ ಮಾಡಿದೆ. ಬಿಡುಗಡೆಗೂ ಮುನ್ನ ಸಾಕಷ್ಟು ಸದ್ದು ಮಾಡಿದ್ದ ಈ ಎರಡೂ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಐಕ್ಯೂ Z6 ಪ್ರೊ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದೆ. ಆದರೆ ಐಕ್ಯೂ Z6 4G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಹಾಗಾದ್ರೆ ಈ ಫೋನುಗಳ ಬೆಲೆ ಎಷ್ಟು?, ಇತರೆ ವಿಶೇಷತೆಗಳು ಏನು? ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಐಕ್ಯೂ Z6 ಪ್ರೊ 5G:
ಅತ್ಯಂತ ಬಲಿಷ್ಠವಾಗಿರುವ ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್ 1,080×2,404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಕೂಡ ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಒಳಗೊಂಡಿದೆ. ಇನ್ನು ಈ ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ಬೆಂಬಲಿಸಲಿದೆ.
ಐಕ್ಯೂ Z6 4G:
ಐಕ್ಯೂ Z6 4G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್ OS 12 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಅದರಂತೆ ಇದುಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬೊಕೆ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್‌ಚಾರ್ಜ್ ಅನ್ನು ಬೆಂಬಲಿಸುತ್ತದೆ.
ಬೆಲೆ ಎಷ್ಟು?:
ಭಾರತದಲ್ಲಿ ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್ ಒಟ್ಟು ಮೂರು ಸ್ಟೋರೆಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 6GB + 128GB ಸ್ಟೋರೇಜ್ ರೂಪಾಂತರಕ್ಕೆ 23,999ರೂ. ಬೆಲೆ ನಿಗದಿ ಮಾಡಲಾಗಿದೆ. 8GB + 128GB ರೂಪಾಂತರದ ಬೆಲೆ 24,999 ರೂ. ಆಗಿದೆ. ಹಾಗೆಯೆ ಇದರ ಟಾಪ್-ಆಫ್-ಲೈನ್ 12GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ 28,999 ರೂ. ಇದೆ. ಇನ್ನು ಐಕ್ಯೂ Z6 4G ಸ್ಮಾರ್ಟ್‌ಫೋನ್ 4GB + 128GB ಮಾದರಿಗೆ 14,499 ರೂ. ಬೆಲೆ ಹೊಂದಿದೆ. ಇದರ 6GB + 128GB ರೂಪಾಂತರದ ಆಯ್ಕೆಗೆ 15,999 ರೂ. ಮತ್ತು 8GB + 128GB ಮಾದರಿಯ ಬೆಲೆ 16,999 ರೂ. ನಿಗದಿ ಮಾಡಿದ್ದಾರೆ. ಈ ಎರಡೂ ಸ್ಮಾರ್ಟ್‌ಫೋನ್ ಅಮೆಜಾನ್ ಸಮ್ಮರ್ ಸೇಲ್‌ನಲ್ಲಿ ಅಮೆಜಾನ್ ಮತ್ತು ಐಕ್ಯೂ ಇಂಡಿಯಾ ಇ-ಸ್ಟೋರ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.
Realme GT 2: ಇಂದು ರಿಯಲ್ ಮಿ GT 2 ಮಾರಾಟ: ಮೊದಲ ಸೇಲ್‌ನಲ್ಲಿ ಬರೋಬ್ಬರಿ 5,000 ರೂ. ಡಿಸ್ಕೌಂಟ್
Amazon Summer Sale: ಭರ್ಜರಿ ಆಫರ್ನೊಂದಿಗೆ ಮತ್ತೆ ಬರಲಿದೆ ಅಮೆಜಾನ್ ಸಮ್ಮರ್ ಸೇಲ್