ISRO: ಇಸ್ರೋದಿಂದ ಓಷನ್​ಸ್ಯಾಟ್- 3 ಸೇರಿದಂತೆ 9 ಉಪಗ್ರಹ ಉಡಾವಣೆ

ಓಷನ್‌ಸ್ಯಾಟ್‌ 3 ಹಾಗೂ ಆನಂದ್ ಉಪಗ್ರಹಗಳು ಸೇರಿದಂತೆ ಒಟ್ಟು 9 ಉಪಗ್ರಹಗಳು ಕಕ್ಷೆ ಸೇರಲಿವೆ. ಈ ಪೈಕಿ ಪಿಕ್ಸ್‌ಕ್ಷೆಲ್‌ನ ಭೂತಾನ್‌ಸ್ಯಾಟ್‌, ಅಮೆರಿಕದ ಸ್ಪೇಸ್‌ಫ್ಲೈಟ್‌ನ ನಾಲ್ಕು ಆ್ಯಸ್ಟ್ರೋಕಾಸ್ಟ್‌ ಉಪಗ್ರಹಗಳು ಕೂಡ ಸೇರಿವೆ.

ISRO: ಇಸ್ರೋದಿಂದ ಓಷನ್​ಸ್ಯಾಟ್- 3 ಸೇರಿದಂತೆ 9 ಉಪಗ್ರಹ ಉಡಾವಣೆ
ISRO launch 9 satellites Including Oceansat from Sriharikota PSLV's XL version
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 26, 2022 | 12:23 PM

ಶ್ರೀಹರಿಕೋಟ: ‘ಓಷನ್​ಸ್ಯಾಟ್ 3’(Oceansat-3) ಸೇರಿದಂತೆ 9 ಉಪಗ್ರಹಗಳನ್ನು ಒಳಗೊಂಡ ‘ಪಿಎಸ್​ಎಲ್​ವಿ-ಸಿ 54 (PSLV C 54)’ ರಾಕೆಟ್ ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಿದೆ. ಉಪಗ್ರಹಗಳ ಉಡಾವಣೆಗೆ ಶುಕ್ರವಾರವೇ ಆರಂಭವಾಗಿತ್ತು. ಶನಿವಾರ ಬೆಳಿಗ್ಗೆ 11.56ಕ್ಕೆ  ಯಶಸ್ವಿಯಾಗಿ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

ಪಿಎಸ್​ಎಲ್​ವಿ ಎಕ್ಸ್​ಎಲ್​ ವರ್ಷನ್​ನ ರಾಕೆಟ್​ ಉಡಾವಣೆಯಾದ 2 ಗಂಟೆ 20 ನಿಮಿಗಳಲ್ಲಿ ಉಪಗ್ರಹಗಳನ್ನು ಸನ್-ಸಿಂಕ್ರೋನಸ್ ಧ್ರುವೀಯ ಕಕ್ಷೆಯಲ್ಲಿ ನೆಲೆಗೊಳಿಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಓಷನ್‌ಸ್ಯಾಟ್‌ 3 ಹಾಗೂ ಆನಂದ್ ಉಪಗ್ರಹಗಳು ಸೇರಿದಂತೆ ಇತರ 8 ನ್ಯಾನೊ ಉಪಗ್ರಹಗಳು ಕಕ್ಷೆ ಸೇರಲಿವೆ. ಈ ಪೈಕಿ ಪಿಕ್ಸ್‌ಕ್ಷೆಲ್‌ನ ಭೂತಾನ್‌ಸ್ಯಾಟ್‌, ಅಮೆರಿಕದ ಸ್ಪೇಸ್‌ಫ್ಲೈಟ್‌ನ ನಾಲ್ಕು ಆ್ಯಸ್ಟ್ರೋಕಾಸ್ಟ್‌ ಉಪಗ್ರಹಗಳು ಕೂಡ ಸೇರಿವೆ. ಸಾಗರ ವೀಕ್ಷಣೆ, ಭೂ ವೀಕ್ಷಣೆ, ಇಂಡೊ-ಫ್ರೆಂಚ್ ಸಹಭಾಗಿತ್ವ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಉಪಗ್ರಹಗಳೂ ಇದರಲ್ಲಿ ಸೇರಿವೆ ಎಂದು ಇಸ್ರೋದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆನಂದ್ ನ್ಯಾನೊ ಉಪಗ್ರಹ ಭೂಮಿಯ ಕೆಳ ಕಕ್ಷೆಯಲ್ಲಿ ಮೈಕ್ರೋಸ್ಯಾಟಲೈಟ್ ಬಳಸಿಕೊಂಡು ಭೂಮಿಯ ವೀಕ್ಷಣೆ ನಡೆಸಲಿದೆ. ಥೈಬೋಲ್ಟ್ ಉಪಗ್ರಹವು ಸಂವಹನಕ್ಕೆ ಸಂಬಂಧಿಸಿದ್ದಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 am, Sat, 26 November 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್