Itel S23: 50MP ಕ್ಯಾಮೆರಾ, 5000mAh ಬ್ಯಾಟರಿ: ಕೇವಲ 8,799 ರೂ. ಗೆ ಬಿಡುಗಡೆ ಆಯಿತು ಹೊಸ ಸ್ಮಾರ್ಟ್​​ಫೋನ್

|

Updated on: Jun 10, 2023 | 3:08 PM

ಐಟೆಲ್‌ S23 ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 8,799ರೂ. ನಿಗದಿ ಮಾಡಲಾಗಿದೆ.

Itel S23: 50MP ಕ್ಯಾಮೆರಾ, 5000mAh ಬ್ಯಾಟರಿ: ಕೇವಲ 8,799 ರೂ. ಗೆ ಬಿಡುಗಡೆ ಆಯಿತು ಹೊಸ ಸ್ಮಾರ್ಟ್​​ಫೋನ್
Itel S23
Follow us on

ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ಐಟೆಲ್ (Itel) ಸಂಸ್ಥೆ ಇದೀಗ ಭಾರತದಲ್ಲಿ ಕೇವಲ 8,799 ರೂಪಾಯಿಗೆ ಹೊಸ ಫೋನೊಂದನ್ನು ಅನಾವರಣ ಮಾಡಿದೆ. ಅದುವೆ ಐಟೆಲ್‌ ಎಸ್23 (itel S23). ಡೀಸೆಂಟ್ ಕ್ಯಾಮೆರಾ, ಉತ್ತಮ ಬ್ಯಾಟರಿ ಸೇರಿದಂತೆ ಈ ಸ್ಮಾರ್ಟ್‌ಫೋನ್‌ (Smartphone) ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಜೊತೆಗೆ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಐಟೆಲ್‌ S23 ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 8,799ರೂ. ನಿಗದಿ ಮಾಡಲಾಗಿದೆ. ಇದು ಜೂನ್ 14 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್‌ ಮೂಲಕ ಸೇಲ್ ಕಾಣಲಿದೆ. ಅಂತೆಯೆ ಇದರ 4GB RAM + 128GB ರೂಪಾಂತರದ ಆಯ್ಕೆಯ ಬೆಲೆ ಇನ್ನಷ್ಟೆ ಬಹಿರಂಗ ಪಡಿಸಬೇಕಿದೆ. ಈ ಸ್ಮಾರ್ಟ್‌ಫೋನ್‌ ಮಿಸ್ಟರಿ ವೈಟ್ ಮತ್ತು ಸ್ಟಾರಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ.

ಇದನ್ನೂ ಓದಿ
Flipkart Big Saving Days sale: ಫ್ಲಿಪ್​ಕಾರ್ಟ್​ನಲ್ಲಿ ಶುರುವಾಗಿದೆ​ ಬಿಗ್‌ ಸೇವಿಂಗ್‌ ಡೇಸ್‌: ಈ ಬಾರಿ ಕೂಡ ಬಂಪರ್ ಆಫರ್ಸ್
Asus Zenfone 10: ಗೇಮಿಂಗ್ ಪ್ರಿಯರಿಗೆ ಸಂತಸದ ಸುದ್ದಿ: ಬರುತ್ತಿದೆ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್​​ನ ಹೊಸ ಫೋನ್
OnePlus Nord N30 5G: 108MP ಕ್ಯಾಮೆರಾ ಹೊಂದಿರುವ ಒನ್​ಪ್ಲಸ್ ಫೋನ್ ಬಿಡುಗಡೆ
Infinix InBook X2 Slim: ಆಕರ್ಷಕ ವಿನ್ಯಾಸದಲ್ಲಿ ಹೊಸ ಲ್ಯಾಪ್​ಟಾಪ್ ಪರಿಚಯಿಸಿದ ಇನ್ಫಿನಿಕ್ಸ್

Samsung OLED TV: ಸ್ಯಾಮ್​ಸಂಗ್ ಹೊಸ ಮೇಡ್ ಇನ್ ಇಂಡಿಯಾ ಒಎಲ್‌ಇಡಿ ಟಿವಿ ಬಿಡುಗಡೆ

ಫೀಚರ್ಸ್ ಏನಿದೆ?:

ಐಟೆಲ್‌ S23 ಸ್ಮಾರ್ಟ್‌ಫೋನ್‌ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ HD+ ಐಪಿಎಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ದರದಿಂದ ಕೂಡಿದೆ. ಆಕ್ಟಾ-ಕೋರ್ 12nm ಯುನಿಸೊಕ್ T606 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ವರ್ಚುವಲ್ RAM ಆಯ್ಕೆ ನೀಡಿದ್ದು, ಇದರಿಂದ ಆನ್‌ಬೋರ್ಡ್ ಮೆಮೊರಿಯನ್ನು 16GB ವರೆಗೆ ಹೆಚ್ಚಿಸಬಹುದು.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿರುವುದು ವಿಶೇಷ. ಜೊತೆಗೆ LED ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಐಟೆಲ್‌ S23 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಕಂಪನಿ ಹೇಳುವ ಪ್ರಕಾರ ಇದು ಸಿಂಗಲ್‌ ಚಾರ್ಜ್‌ನಲ್ಲಿ 15 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ