AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಕಡಿಮೆ ಬೆಲೆ: ಒಂದೇ ದಿನ ಎರಡು ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ಐಟೆಲ್

Itel S23+, itel P55 Power 5G: ಐಟೆಲ್ S23+ ಫೋನಿನ 8GB + 256GB ಸ್ಟೋರೇಜ್ ಆಯ್ಕೆಗೆ 13,999 ರೂ. ನಿಗದಿ ಮಾಡಲಾಗಿದೆ. ಇದು ಅಕ್ಟೋಬರ್ 6 ರಿಂದ ಅಮೆಜಾನ್ ಇಂಡಿಯಾ ಮೂಲಕ ಆನ್‌ಲೈನ್ ಖರೀದಿಗೆ ಲಭ್ಯವಿರುತ್ತದೆ. ಮತ್ತೊಂದೆಡೆ, ಐಟೆಲ್ P55 Power 5G ಅನ್ನು ಎರಡು ಶೇಖರಣಾ ರೂಪಾಂತರಗಳಲ್ಲಿ ಅನಾವರಣಗೊಳಿಸಲಾಗಿದೆ. 4GB + 64GB ಮಾದರಿಯ ರೂಪಾಂತರವನ್ನು ಆಫ್‌ಲೈನ್ ಸ್ಟೋರ್‌ಗಳಲ್ಲಿ ರೂ. 9,699 ಕ್ಕೆ ನಿಮ್ಮದಾಗಿಸಬಹುದು.

ಅತಿ ಕಡಿಮೆ ಬೆಲೆ: ಒಂದೇ ದಿನ ಎರಡು ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ಐಟೆಲ್
Itel S23 plus and itel P55 Power 5G
Vinay Bhat
|

Updated on: Sep 28, 2023 | 1:58 PM

Share

ಐಟೆಲ್ ಕಂಪನಿ ಭಾರತದಲ್ಲಿ ಎರಡು ಹೊಸ ಕೈಗೆಟುಕುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದು ಐಟೆಲ್ S23+ (Itel S23+) ಮತ್ತು ಐಟೆಲ್ P55 ಪವರ್ 5G ಫೋನ್ ಆಗಿದೆ. ಈ ಫೋನ್ 6-ಇಂಚಿನ ಡಿಸ್ ಪ್ಲೇ ಹೊಂದಿದ್ದು, 50 ಮೆಗಾ ಪಿಕ್ಸೆಲ್ AI ಕ್ಯಾಮೆರಾ ಸೆಟಪ್, ಯುಸಿನಕ್ ಟೈಗರ್ T616 ಮತ್ತು ಮೀಡಿಯಾಟೆಕ್ ಡೈಮನ್ಸಿಟಿ 6080 ಪ್ರೊಸೆಸರ್ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಐಟೆಲ್ S23+ ಮತ್ತು ಐಟೆಲ್ P55 ಪವರ್ 5G ಫೋನಿನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಐಟೆಲ್ S23+, ಐಟೆಲ್ P55 ಪವರ್ 5G ಬೆಲೆ, ಲಭ್ಯತೆ:

ಐಟೆಲ್ S23+ ಫೋನಿನ 8GB + 256GB ಸ್ಟೋರೇಜ್ ಆಯ್ಕೆಗೆ 13,999 ರೂ. ನಿಗದಿ ಮಾಡಲಾಗಿದೆ. ಇದು ಅಕ್ಟೋಬರ್ 6 ರಿಂದ ಅಮೆಜಾನ್ ಇಂಡಿಯಾ ಮೂಲಕ ಆನ್‌ಲೈನ್ ಖರೀದಿಗೆ ಲಭ್ಯವಿರುತ್ತದೆ. ಆದರೆ, ಇದೇ ತಿಂಗಳ ಕೊನೆಯ ವಾರದಲ್ಲಿ ಈ ಫೋನ್ ಚಿಲ್ಲರೆ ಅಂಗಡಿಗಳಲ್ಲಿ ಮಾರಾಟ ಕಾಣಲಿದೆ.

ಬಿಡುಗಡೆ ಆಯಿತು ಭಾರತದ ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?

ಇದನ್ನೂ ಓದಿ
Image
25,000 ರೂ. ಗಿಂತ ಕಡಿಮೆ ಬೆಲೆಗೆ ನಥಿಂಗ್ ಫೋನ್: ಊಹಿಸಲಾಗದ ಆಫರ್
Image
15 ನಿಮಿಷದಲ್ಲಿ ಶೇ.50 ಚಾರ್ಜ್: ಮೋಟೋ ಎಡ್ಜ್ 40 ನಿಯೋ ಖರೀದಿಗೆ ಲಭ್ಯ
Image
6ಜಿ ತಂತ್ರಜ್ಞಾನ; ಭಾರತದ ಪ್ರಸ್ತಾವನೆ ಅಂಗೀಕರಿಸಿದ ವಿಶ್ವಸಂಸ್ಥೆ
Image
ಗೂಗಲ್ ಎಡವಿದ ಹೆಜ್ಜೆಗಳು; ಉತ್ಪನ್ನಗಳ ವೈಫಲ್ಯಕ್ಕೆ ಕಾರಣಗಳು

ಮತ್ತೊಂದೆಡೆ, ಐಟೆಲ್ P55 ಪವರ್ 5G ಅನ್ನು ಎರಡು ಶೇಖರಣಾ ರೂಪಾಂತರಗಳಲ್ಲಿ ಅನಾವರಣಗೊಳಿಸಲಾಗಿದೆ. 4GB + 64GB ಮಾದರಿಯ ರೂಪಾಂತರವನ್ನು ಆಫ್‌ಲೈನ್ ಸ್ಟೋರ್‌ಗಳಲ್ಲಿ ರೂ. 9,699 ಕ್ಕೆ ನಿಮ್ಮದಾಗಿಸಬಹುದು. 6GB + 128GB ಸಂಗ್ರಹಣೆಗೆ 9,999 ರೂ, ನಿಗದಿ ಮಾಡಲಾಗಿದ್ದು, ಇದು ಅಕ್ಟೋಬರ್ 4 ರಿಂದ ಅಮೆಜಾನ್​ನಲ್ಲಿ ಲಭ್ಯವಿರುತ್ತದೆ.

ಐಟೆಲ್ S23+ ಫೀಚರ್ಸ್:

ಐಟೆಲ್ S23+ 6.78-ಇಂಚಿನ FHD+ AMOLED ಡಿಸ್ ಪ್ಲೇಯೊಂದಿಗೆ ಬರುತ್ತದೆ. ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್ ಮೂಲಕ ರನ್ ಆಗುತ್ತದೆ. ಈ ಸ್ಮಾರ್ಟ್​ಫೋನ್ 8GB + 256GB ಆಂತರಿಕ ಸಂಗ್ರಹಣೆಯನ್ನು ಪ್ಯಾಕ್ ಮಾಡುತ್ತದೆ. ಮೈಕ್ರೊ SD ಕಾರ್ಡ್ ಮೂಲಕ ಸ್ಟೋರೇಜ್ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸಬಹುದು. ಐಟೆಲ್ S23+ 50MP ಮುಖ್ಯ ಕ್ಯಾಮೆರಾ ಮತ್ತು 32MP ಸೆಲ್ಫಿ ಶೂಟರ್ ಅನ್ನು ಹೊಂದಿದೆ. ಈ ಸ್ಮಾರ್ಟ್​ಫೋನ್ 5000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.

ಐಟೆಲ್ P55 ಪವರ್ ಫೀಚರ್ಸ್:

ಐಟೆಲ್ P55 ಪವರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಚಿಪ್‌ಸೆಟ್ ಅನ್ನು 6GB RAM ನೊಂದಿಗೆ ಜೋಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ 128GB ಇಂಟರ್ನಲ್ ಸ್ಟೋರೇಜ್ ಅನ್ನು ನೀಡುತ್ತದೆ. ಇದನ್ನು ಮೈಕ್ರೊ SD ಕಾರ್ಡ್ ಮೂಲಕ ಮತ್ತಷ್ಟು ವಿಸ್ತರಿಸಬಹುದು. 50MP ಡ್ಯುಯಲ್ ರಿಯರ್ ಕ್ಯಾಮೆರಾ ಮತ್ತು 8MP ಫ್ರಂಟ್ ಶೂಟರ್ ಅನ್ನು ಹೊಂದಿದೆ. ಈ ಫೋನ್ 6.6-ಇಂಚಿನ HD+ ಡಿಸ್ ಪ್ಲೇಯನ್ನು ಹೊಂದಿದೆ ಮತ್ತು 18W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ