Reliance Jio: ಅಮೆಜಾನ್, ನೆಟ್‌ಫ್ಲಿಕ್ಸ್ ಫ್ರೀ ಆಗಿ ನೋಡಬೇಕಾ?: ಜಿಯೋದಲ್ಲಿದೆ ಧಮಾಕ ಪ್ಲಾನ್
Netflix subscription: ಪ್ರಿಪೇಯ್ಡ್ ಯೋಜನೆಗಳಿಗೆ ಹೋಲಿಸಿಕೊಂಡರೆ ಪೋಸ್ಟ್‌ಪೇಯ್ಡ್ (Postpaid) ಚಂದಾದಾರರಿಗೆ ಅತ್ಯುತ್ತಮ ಕೊಡುಗೆಗಳನ್ನು ಜಿಯೋ ಒದಗಿಸುತ್ತಿದೆ. ಈ ಪ್ರಯೋಜನಗಳು ಹೆಚ್ಚಿನ ವೇಗದ ಡೇಟಾ ಮತ್ತು ವಿವಿಧ ಒಟಿಟಿ (OTT) ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ಒಳಗೊಂಡಿವೆ.
ದೇಶದ ನಂಬರ್ ಒನ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ (Reliance JIO) ತನ್ನ ಗ್ರಾಹಕರನ್ನು ಸೆಳೆಯಲು ಈಗಾಗಲೇ ಸಾಕಷ್ಟು ಅಗ್ಗದ ಪ್ಲಾನ್ಗಳನ್ನು ಜಾರಿಗೆ ತಂದಿದೆ. ಜಿಯೋ ಟೆಲಿಕಾಂ ಕ್ಷೇತ್ರಕ್ಕೆ ಬಂದಾಗಿನಿಂದ ಬೆಲೆ ಯುದ್ಧ ನಡೆಯುತ್ತಲೇ ಇದ್ದು, ಈಗಲೂ ಟೆಲಿಕಾಂ ಕಂಪನಿಗಳ ಮಧ್ಯೆ ಸ್ಪರ್ಧೆ ಮುಂದುವರೆದಿದೆ. ಪ್ರಮುಖವಾಗಿ ಜಿಯೋ ಬಳಿ ನೆಟ್‌ಫ್ಲಿಕ್ಸ್, ಅಮೆಜಾನ್, ಡಿಸ್ನಿ+ಹಾಟ್‌ಸ್ಟಾರ್ ಪ್ಯಾಕೇಜ್‌ಗಳೊಂದಿಗೆ ಡೇಟಾವನ್ನು ನೀಡುವ ಅಗ್ಗದ ಯೋಜನೆಗಳಿವೆ. ಪ್ರಿಪೇಯ್ಡ್ ಯೋಜನೆಗಳಿಗೆ ಹೋಲಿಸಿಕೊಂಡರೆ ಪೋಸ್ಟ್‌ಪೇಯ್ಡ್ (Postpaid) ಚಂದಾದಾರರಿಗೆ ಅತ್ಯುತ್ತಮ ಕೊಡುಗೆಗಳನ್ನು ಜಿಯೋ ಒದಗಿಸುತ್ತಿದೆ. ಈ ಪ್ರಯೋಜನಗಳು ಹೆಚ್ಚಿನ ವೇಗದ ಡೇಟಾ ಮತ್ತು ವಿವಿಧ ಒಟಿಟಿ (OTT) ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ಒಳಗೊಂಡಿವೆ. ಹಾಗಾದರೆ ಜನಪ್ರಿಯ ಜಿಯೋ ಪೋಸ್ಟ್‌ಪೇಯ್ಡ್ ಯೋಜನೆಗಳ ಪಟ್ಟಿ ಇಲ್ಲಿದೆ.
ಜಿಯೋ ಪೋಸ್ಟ್ ಪೇಯ್ಡ್ ಪ್ಲಾನ್ನಲ್ಲಿ 399 ರೂಪಾಯಿ ಅಗ್ಗದ ಯೋಜನೆಯಾಗಿದೆ. ಈ ಯೋಜನೆಯಲ್ಲಿ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಂ ಉಚಿತವಾಗಿ ಸಿಗುತ್ತದೆ. ಈ ಯೋಜನೆಯು 75GB ಡೇಟಾದೊಂದಿಗೆ 200GB ಗರಿಷ್ಠ ಡೇಟಾ ರೋಲ್ಓವರ್ ನೀಡುತ್ತದೆ. 75GB ಡೇಟಾ ಮಿತಿ ದಾಟಿದ ನಂತರ, ಬಳಕೆದಾರರು 10 ರೂಪಾಯಿ GB ದರದಲ್ಲಿ ಡೇಟಾವನ್ನು ಖರೀದಿಸಬೇಕಾಗುತ್ತದೆ. ಅಲ್ಲದೆ ಈ ಯೋಜನೆಯು ಅನಿಯಮಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 ಎಸ್ಎಂಎಸ್ ನೀಡುತ್ತದೆ.
Gaming Smartphones: ಕಡಿಮೆ ಬೆಲೆಗೆ ಗೇಮಿಂಗ್ ಸ್ಮಾರ್ಟ್‌ಫೋನ್ ಬೇಕೇ?: ಇಲ್ಲಿದೆ 30,000 ರೂ. ಒಳಗಿನ ಬೆಸ್ಟ್ ಫೋನ್
ಇನ್ನು 599 ರೂ. ಪೋಸ್ಟ್ ಪೇಯ್ಡ್ ಯೋಜಯುನೆ ಬಿಲ್ಲಿಂಗ್ ಸೈಕಲ್‌ನಲ್ಲಿ ಗರಿಷ್ಠ 100GB ಡೇಟಾವನ್ನು ಮತ್ತು 200GB ಯ ಗರಿಷ್ಠ ಡೇಟಾ ರೋಲ್‌ಓವರ್ ಅನ್ನು ನೀಡುತ್ತದೆ. ನೀಡಿರುವ ಮಿತಿಯು ಮುಗಿದ ನಂತರ ಬಳಕೆದಾರರಿಗೆ ಪ್ರತಿ GB ಗೆ 10 ರೂ. ಶುಲ್ಕ ವಿಧಿಸಲಾಗುತ್ತದೆ. ಇದಲ್ಲದೆ, JioPostpaid ಸಂಪರ್ಕವನ್ನು ಬಳಸಿಕೊಂಡು ಹೆಚ್ಚುವರಿ ಕುಟುಂಬದ ಸದಸ್ಯರೊಂದಿಗೆ (ಒಬ್ಬರು) ಯೋಜನೆಯನ್ನು ಹಂಚಿಕೊಳ್ಳಬಹುದು. ಈ ಯೋಜನೆ ಕೂಡ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಂ ಸ್ಟ್ರೀಮಿಂಗ್ ಸೇವೆಗಳಿಗೆ ಚಂದಾದಾರಿಕೆಯನ್ನು ಒದಗಿಸುತ್ತದೆ.
799 ರೂ. ಯೋಜನೆಯು ಪ್ರತಿ ಬಿಲ್ಲಿಂಗ್ ಸೈಕಲ್‌ಗೆ ಗರಿಷ್ಠ 150GB ಡೇಟಾವನ್ನು ಒದಗಿಸುತ್ತದೆ ಮತ್ತು 200GB ಡೇಟಾ ರೋಲ್‌ಓವರ್ ಅನ್ನು ಸಹ ಒದಗಿಸುತ್ತದೆ. ಯೋಜನೆಯ ಪ್ರಯೋಜನಗಳನ್ನು ಕುಟುಂಬ ಯೋಜನೆಯ ಅಡಿಯಲ್ಲಿ 2 ಹೆಚ್ಚುವರಿ ಪೋಸ್ಟ್‌ಪೇಯ್ಡ್ ಸಂಪರ್ಕಗಳೊಂದಿಗೆ ಹಂಚಿಕೊಳ್ಳಬಹುದು. ಈ ಯೋಜನೆ ಕೂಡ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಂ ಸ್ಟ್ರೀಮಿಂಗ್ ಸೇವೆಗಳಿಗೆ ಚಂದಾದಾರಿಕೆಯನ್ನು ಒದಗಿಸುತ್ತದೆ.
ಕೊನೆಯದಾಗಿ 999 ರೂ. ಯೋಜನೆಯು ಪ್ರತಿ ಬಿಲ್ಲಿಂಗ್ ಸೈಕಲ್‌ಗೆ ಗರಿಷ್ಠ 200GB ನೀಡುತ್ತದೆ ಮತ್ತು ಕುಟುಂಬ ಯೋಜನೆಯಡಿಯಲ್ಲಿ 3 ಹೆಚ್ಚುವರಿ ಸಿಮ್ ಕಾರ್ಡ್‌ಗಳನ್ನು ನೀಡುತ್ತದೆ. ಗರಿಷ್ಠ ಡೇಟಾ ರೋಲ್‌ಓವರ್ 500GB ಆಗಿದೆ.ಈ ಯೋಜನೆ ಕೂಡ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಂ ಸ್ಟ್ರೀಮಿಂಗ್ ಸೇವೆಗಳಿಗೆ ಚಂದಾದಾರಿಕೆಯನ್ನು ನೀಡುತ್ತದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ