AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jio True 5G: ಭರ್ಜರಿ ವೆಲ್‌ಕಮ್ ಆಫರ್​ನೊಂದಿಗೆ ಜಿಯೋ ಟ್ರೂ 5G ಸೇವೆ ಬೆಂಗಳೂರು, ಹೈದರಾಬಾದ್‌ನಲ್ಲಿ ಆರಂಭ

ಜಿಯೋ ಟ್ರೂ 5G ಸೇವೆ ಬೆಂಗಳೂರು, ಹೈದರಾಬಾದ್‌ನಲ್ಲಿ ಆರಂಭವಾಗಿದ್ದು, ಗ್ರಾಹಕರಿಗೆ ಭರ್ಜರಿಯಾಗಿ ವೆಲ್‌ಕಮ್ ಆಫರ್​ ನೀಡಿದೆ.

Jio True 5G: ಭರ್ಜರಿ ವೆಲ್‌ಕಮ್ ಆಫರ್​ನೊಂದಿಗೆ ಜಿಯೋ ಟ್ರೂ 5G ಸೇವೆ ಬೆಂಗಳೂರು, ಹೈದರಾಬಾದ್‌ನಲ್ಲಿ ಆರಂಭ
Jio True 5G
TV9 Web
| Edited By: |

Updated on: Nov 10, 2022 | 9:22 PM

Share

ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ವಾರಾಣಸಿ ಮತ್ತು ನಾಥದ್ವಾರ- ಹೀಗೆ ಆರು ನಗರಗಳಲ್ಲಿ ಜಿಯೋ ಟ್ರೂ- 5G ಸೇವೆಗಳ ಯಶಸ್ವಿ ಬೀಟಾ-ಅನಾವರಣ ಆದ ನಂತರ ಇದೀಗ 1 ಜಿಬಿಪಿಎಸ್+ ವೇಗದಲ್ಲಿ ಜಿಯೋ ಟ್ರೂ 5ಜಿ (Jio True 5G) ಸೇವೆ ಬೆಂಗಳೂರು (Bengaluru) ಹಾಗೂ ಹೈದರಾಬಾದ್‌ನಲ್ಲಿ (Hyderabad) ಇಂದಿನಿಂದ (ನವೆಂಬರ್ 10) ಆರಂಭವಾಗಿದೆ.

Airtel 5G: ಭಾರತದಲ್ಲಿ ಮೊಟ್ಟ ಮೊದಲ 5G ಸೇವೆ ಆರಂಭಿಸಿದ ಏರ್ಟೆಲ್: ಎಲ್ಲೆಲ್ಲಿ ಲಭ್ಯ, ಬೆಲೆ ಎಷ್ಟು?, ಇಲ್ಲಿದೆ ಮಾಹಿತಿ

ಹೆಚ್ಚಿನ ನಗರಗಳಲ್ಲಿ ಜಿಯೋ ಟ್ರೂ- 5G ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಬೆಂಗಳೂರು ಮತ್ತು ಹೈದರಾಬಾದ್‌ಗೂ ಈಗ ಜಿಯೋ ಟ್ರೂ 5G ದೊರೆಯುತ್ತದೆ. ಜಿಯೋ ಟ್ರೂ 5Gಯು ಈ ಎರಡೂ ತಂತ್ರಜ್ಞಾನ ಕೇಂದ್ರಿತ ನಗರಗಳಲ್ಲಿ ಮಾನವೀಯತೆಗೆ ಸೇವೆ ಸಲ್ಲಿಸುವ ಮತ್ತು ಭಾರತೀಯರ ಜೀವನದ ಗುಣಮಟ್ಟ ಸುಧಾರಿಸುವ ಕೆಲವು ಇತ್ತೀಚಿನ ತಂತ್ರಜ್ಞಾನಗಳ ನಿಜವಾದ ಸಾಮರ್ಥ್ಯವನ್ನು ಅರಿಯುವುದಕ್ಕೆ ಸಹಾಯ ಮಾಡುತ್ತದೆ.

ಅತ್ಯುತ್ತಮ ಗ್ರಾಹಕ ಅನುಭವ ಖಚಿತ ಮಾಡಿಕೊಳ್ಳಲು ಜಿಯೋದಿಂದ ಸುಧಾರಿತ ಟ್ರೂ 5G ಸೇವೆಗಳನ್ನು ಹಂತ-ಹಂತವಾಗಿ ಹೊರತರುತ್ತಿದೆ. ಜಿಯೋ ಟ್ರೂ 5G ಅನುಭವವನ್ನು ಈಗಾಗಲೇ ಆರು ನಗರಗಳಲ್ಲಿ ಲಕ್ಷಗಟ್ಟಲೆ ಬಳಕೆದಾರರು ಪಡೆಯುತ್ತಿದ್ದಾರೆ. ಇದಕ್ಕೆ ದೊರೆಯುತ್ತಿರುವ ಪ್ರತಿಕ್ರಿಯೆ ಅತ್ಯಂತ ಧನಾತ್ಮಕವಾಗಿದೆ ಮತ್ತು ಭರವಸೆ ನೀಡುತ್ತದೆ. ಜಿಯೋ ಜಾಗತಿಕವಾಗಿ ಅತ್ಯಾಧುನಿಕ 5G ನೆಟ್‌ವರ್ಕ್ ಅನ್ನು ರೂಪಿಸುವುದಕ್ಕೆ ಗ್ರಾಹಕರ ಒಳನೋಟಗಳು ಮತ್ತು ಪ್ರತಿಕ್ರಿಯೆಯು ಸಹಾಯ ಮಾಡುತ್ತಿದೆ.

ಜಿಯೋ ಬಳಕೆದಾರರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ 500 ಎಂಬಿಪಿಎಸ್‌ (Mbps)ನಿಂದ 1 ಜಿಬಿಪಿಎಸ್ (Gbps)ವರೆಗೆ ಎಲ್ಲಿಯಾದರೂ ವೇಗದ ಅನುಭವವನ್ನು ಪಡೆಯುತ್ತಿದ್ದಾರೆ ಹಾಗೂ ಅತಿ ಹೆಚ್ಚು ಪ್ರಮಾಣದಲ್ಲಿ ಡೇಟಾ ಬಳಸುತ್ತಿದ್ದಾರೆ. ಇದಕ್ಕೆ ಕಾರಣ ಆಗಿರುವುದು ಜಿಯೋ ಟ್ರೂ- 5Gಯ ಮೂರು ಪಟ್ಟು ಅನುಕೂಲಗಳು, ಆದ್ದರಿಂದಲೇ ಇದು ಭಾರತದಲ್ಲಿನ ಏಕೈಕ ನಿಜವಾದ 5G ನೆಟ್‌ವರ್ಕ್ ಆಗಿದೆ.

1. 4G ನೆಟ್‌ವರ್ಕ್‌ನ ಮೇಲೆ ಯಾವುದೇ ಅವಲಂಬನೆ ಇಲ್ಲದೆ ಸುಧಾರಿತ 5G ನೆಟ್‌ವರ್ಕ್‌ನೊಂದಿಗೆ ಅದ್ವಿತೀಯ 5G ಆರ್ಕಿಟೆಕ್ಚರ್.

2. 700 MHz, 3500 MHz, ಮತ್ತು 26 GHz ಬ್ಯಾಂಡ್‌ಗಳಾದ್ಯಂತ 5G ಸ್ಪೆಕ್ಟ್ರಮ್‌ನ ದೊಡ್ಡ ಮತ್ತು ಉತ್ತಮ ಮಿಶ್ರಣ.

3. ಕ್ಯಾರಿಯರ್ ಅಗ್ರಿಗೇಷನ್ ಎಂಬ ಸುಧಾರಿತ ತಂತ್ರಜ್ಞಾನ ಬಳಸಿಕೊಂಡು ಈ 5G ಫ್ರೀಕ್ವೆನ್ಸಿಗಳನ್ನು ಏಕರೂಪದ “ಡೇಟಾ ಹೈವೇ” ಆಗಿ ಯಾವುದೇ ಅಡೆತಡೆ ಇಲ್ಲದೆ ಸಂಯೋಜಿಸುತ್ತದೆ.

ನವೆಂಬರ್ 10ರಿಂದ ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ. ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಈ ಮೂಲಕ ಪಡೆಯಬಹುದಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ