Koo App: ಬಳಕೆದಾರರಿಗೆ ವಿಶೇಷ ಅನುಭವ ನೀಡಲು ಕೂ ಆ್ಯಪ್​ನಿಂದ ಸ್ವಯಂ-ಪರಿಶೀಲನ ಫೀಚರ್

ಬಳಕೆದಾರರು ತಮ್ಮ ಸರ್ಕಾರೀ ಗುರುತಿನ ಚೀಟಿಯ  ಸಂಖ್ಯೆಯನ್ನು ನಮೂದಿಸಿ, ಓಟಿಪಿ ಯನ್ನು ನಮೂದಿಸಿ ಮತ್ತು ಯಶಸ್ವಿ ದೃಢೀಕರಣದ ನಂತರ, ತಮ್ಮ ಪ್ರೊಫೈಲ್‌ನಲ್ಲಿ ಹಸಿರು ಟಿಕ್‌ನೊಂದಿಗೆ ಸ್ವಯಂ-ಪರಿಶೀಲನೆಯನ್ನು ಪಡೆಯುತ್ತಾರೆ.

Koo App: ಬಳಕೆದಾರರಿಗೆ ವಿಶೇಷ ಅನುಭವ ನೀಡಲು ಕೂ ಆ್ಯಪ್​ನಿಂದ ಸ್ವಯಂ-ಪರಿಶೀಲನ ಫೀಚರ್
Koo App
Follow us
TV9 Web
| Updated By: Vinay Bhat

Updated on: Apr 07, 2022 | 1:32 PM

ಸ್ವಪ್ರೇರಿತವಾಗಿ ತಮ್ಮ ಖಾತೆಯನ್ನು ಪರಿಶೀಲಿಸಿಕೊಳ್ಳಬಹುದಾದ ಒಂದು ವಿಶಿಷ್ಟ ಫೀಚರ್ (Feature) ಅನ್ನು ಕೂ ಅಪ್ಲಿಕೇಶನ್ (Koo App)  ಪರಿಚಯಿಸುತ್ತಿದ್ದು, ಈ ವೈಶಿಷ್ಟ್ಯವಿರುವ ವಿಶ್ವದ ಮೊದಲ ಸಾಮಾಜಿಕ ಮಾಧ್ಯಮ ವೇದಿಕೆ ಎನಿಸಿಕೊಂಡಿದೆ. ಯಾವುದೇ ಬಳಕೆದಾರ ಸರ್ಕಾರದಿಂದ ಅನುಮೋದಿಸಲ್ಪಟ್ಟ ಯಾವುದೇ ಗುರುತಿನ ಚೀಟಿ ಮೂಲಕ ಕೆಲವೇ ಕ್ಷಣಗಳಲ್ಲಿ ತಮ್ಮ ಪ್ರೊಫೈಲನ್ನು ಸ್ವಯಂ ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಹೆಜ್ಜೆಯು ಬಳಕೆದಾರರು ತಮ್ಮ ಖಾತೆಗಳ ದೃಡೀಕರಣವನ್ನು ಸಾಬೀತು ಪಡಿಸಲು ಬಲ ತುಂಬುತ್ತದೆ. ಅವರು ಹಂಚಿಕೊಳ್ಳುವ ಅಭಿಪ್ರಾಯ, ಆಲೋಚನೆಗಳಿಗೆ ವಿಶ್ವಾಸಾರ್ಹತೆಯನ್ನು ನೀಡುತ್ತದೆ. ಖಾತೆಯು ಸ್ವಯಂ ಪರಿಶೀಲನೆಯಾಗಿದೆ ಎಂಬುದನ್ನು ಹಸಿರು ಟಿಕ್ ದೃಢಪಡಿಸುತ್ತದೆ. ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ರ ನಿಯಮ 4(7) ಕ್ಕೆ ಅನುಗುಣವಾಗಿ ಈ ವೈಶಿಷ್ಟ್ಯವನ್ನು ಸಕ್ರಿಯಗೊಳಿಸಿದ ಮೊದಲ ಮಹತ್ವದ ಸಾಮಾಜಿಕ ಮಾಧ್ಯಮ (Social Media) ಮಧ್ಯವರ್ತಿ ಕೂ ಆಗಿದೆ.

ಬಳಕೆದಾರರು ತಮ್ಮ ಸರ್ಕಾರೀ ಗುರುತಿನ ಚೀಟಿಯ  ಸಂಖ್ಯೆಯನ್ನು ನಮೂದಿಸಿ, ಓಟಿಪಿ ಯನ್ನು ನಮೂದಿಸಿ ಮತ್ತು ಯಶಸ್ವಿ ದೃಢೀಕರಣದ ನಂತರ, ತಮ್ಮ ಪ್ರೊಫೈಲ್‌ನಲ್ಲಿ ಹಸಿರು ಟಿಕ್‌ನೊಂದಿಗೆ ಸ್ವಯಂ-ಪರಿಶೀಲನೆಯನ್ನು ಪಡೆಯುತ್ತಾರೆ. ಇಡೀ ಪ್ರಕ್ರಿಯೆಯು ಕೆಲವೇ ಸೆಕೆಂಡುಗಳಲ್ಲಿ ಪೂರ್ಣಗೊಳ್ಳುತ್ತದೆ. ಈ ದೃಢೀಕರಣ ಪ್ರಕ್ರಿಯೆಯನ್ನು ಸರ್ಕಾರದಿಂದ ಅಧಿಕೃತಗೊಂಡ ಮೂರನೇ ವ್ಯಕ್ತಿಗಳು ನಡೆಸುತ್ತಾರೆ. ಈ ಪ್ರಕ್ರಿಯೆಯ ಸಮಯದಲ್ಲಿ ಕೂ ಯಾವುದೇ ಮಾಹಿತಿಯನ್ನು ಸಂಗ್ರಹಿಸುವುದಿಲ್ಲವಂತೆ.

ಈ ಬಗ್ಗೆ ಕೂ ಸಹ ಸಂಸ್ಥಾಪಕ ಮತ್ತು ಸಿಇಒ ಅಪ್ರಮೇಯ ರಾಧಾಕೃಷ್ಣ ಅವರು ಮಾತನಾಡಿ, “ಕೂ ಸಾಮಾಜಿಕ ಮಾಧ್ಯಮದಲ್ಲಿ ನಂಬಿಕೆ ಮತ್ತು ಸುರಕ್ಷತೆಯನ್ನು ಉತ್ತೇಜಸಿಸುವಲ್ಲಿ ಮುಂಚೂಣಿಯಲ್ಲಿದೆ. ಸ್ವಯಂ ಪರಿಶೀಲನಾ ವ್ಯವಸ್ಥೆಯನ್ನು ಪ್ರಾರಂಭಿಸುವ ವಿಶ್ವದ ಮೊದಲ ಸಾಮಾಜಿಕ ಮಾಧ್ಯಮ ವೇದಿಕೆಯಾಗಿ ನಾವು ತುಂಬಾ ಹೆಮ್ಮೆ ಪಡುತ್ತೇವೆ. ನಮ್ಮ ಸುರಕ್ಷಿತವಾದ ಪರಿಶೀಲನಾ ಪ್ರಕ್ರಿಯೆಯ ಮೂಲಕ ಬಳಕೆದಾರರು ಕೆಲವೇ ಕ್ಷಣಗಳಲ್ಲಿ ಸ್ವಯಂ ಪರಿಶೀಲಿಸಲ್ಪಡಬಹುದು. ಇದು ಬಳಕೆದಾರರಿಗೆ ಹೆಚ್ಚಿನ ದೃಡೀಕರಣವನ್ನು ನೀಡುವ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ವೇದಿಕೆಯಲ್ಲಿ ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿದೆ. ಹೆಚ್ಚಿನ ಸಾಮಾಜಿಕ ಮಾಧ್ಯಮಗಳು ಕೆಲವು ಖಾತೆಗಳಿಗೆ ಮಾತ್ರ ಈ ಅಧಿಕಾರವನ್ನು ನೀಡುತ್ತವೆ, ಆದರೆ ಕೂ ಪ್ರತಿಯೊಬ್ಬರಿಗೂ ಒಂದೇ ರೀತಿಯ ಸವಲತ್ತು ಹೊಂದಲು ಪ್ರತಿಯೊಬ್ಬ ಬಳಕೆದಾರರಿಗೂ ಅವಕಾಶ ನೀಡಿದ ಮೊದಲ ವೇದಿಕೆಯಾಗಿದೆ.” ಎಂದು ಹೇಳಿದ್ದಾರೆ.

ಕೂ ಬಹು-ಭಾಷಾ, ಮೈಕ್ರೋ-ಬ್ಲಾಗಿಂಗ್ ವೇದಿಕೆಯನ್ನು ಮಾರ್ಚ್ 2020 ರಲ್ಲಿ ಭಾರತೀಯರು ತಮ್ಮ ಮಾತೃಭಾಷೆಯಲ್ಲಿಯೇ ಆನ್‌ಲೈನ್‌ನಲ್ಲಿ ತಮ್ಮ ಮನದಾಳವನ್ನು ವ್ಯಕ್ತಪಡಿಸುವ ಸಲುವಾಗಿ ಪ್ರಾರಂಭಿಸಲಾಯಿತು. ಕೂ ಅಪ್ಲಿಕೇಶನ್‌ನ ಸ್ಮಾರ್ಟ್ ವೈಶಿಷ್ಟ್ಯಗಳು ಪ್ರಸ್ತುತ 10 ಭಾಷೆಗಳಲ್ಲಿ ಲಭ್ಯವಿದೆ – ಹಿಂದಿ, ಮರಾಠಿ, ಗುಜರಾತಿ, ಪಂಜಾಬಿ, ಕನ್ನಡ, ತಮಿಳು, ತೆಲುಗು, ಅಸ್ಸಾಮಿ, ಬೆಂಗಾಲಿ ಮತ್ತು ಇಂಗ್ಲಿಷ್.

Realme C31: ಕೇವಲ 8,999 ರೂ.: ಇಂದು ಮೊದಲ ಸೇಲ್ ಕಾಣುತ್ತಿದೆ ರಿಯಲ್ ಮಿ C31 ಸ್ಮಾರ್ಟ್​ಫೋನ್

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ