ಸ್ವದೇಶಿ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಲಾವಾದಿಂದ ಬಂದಿದೆ ಹೊಸ ಲಾವಾ ಸ್ಟೋರ್ಮ್ 5G: ಹೇಗಿದೆ ಗೊತ್ತೇ?

Lava Storm 5G Launched: ಸ್ವದೇಶಿ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಇದೀಗ ಭಾರತದಲ್ಲಿ ಹೊಸ ಲಾವಾ ಸ್ಟೋರ್ಮ್ 5G ಅನ್ನು ರಿಲೀಸ್ ಮಾಡಿದೆ. ಹೊಸದಾಗಿ ಬಿಡುಗಡೆಯಾದ ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿದ್ದರೂ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ.

ಸ್ವದೇಶಿ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಲಾವಾದಿಂದ ಬಂದಿದೆ ಹೊಸ ಲಾವಾ ಸ್ಟೋರ್ಮ್ 5G: ಹೇಗಿದೆ ಗೊತ್ತೇ?
Lava Storm 5G
Follow us
Vinay Bhat
|

Updated on: Dec 23, 2023 | 6:55 AM

ದೇಶೀಯ ಪ್ರಸಿದ್ಧ ಸ್ಮಾರ್ಟ್​ಫೋನ್ ಸಂಸ್ಥೆ ಲಾವಾ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್​ಗಳನ್ನು ಅನಾವರಣ ಮಾಡುತ್ತಿದೆ. ಇತ್ತೀಚೆಗಷ್ಟೆ ಲಾವಾ ಯುವ 3 ಪ್ರೊ ಮತ್ತು ಲಾವಾ ಬ್ಲೇಜ್ ಪ್ರೊ 5G ಅನ್ನು ಬಿಡುಗಡೆ ಮಾಡಿದ ನಂತರ, ಸ್ವದೇಶಿ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಇದೀಗ ಭಾರತದಲ್ಲಿ ಹೊಸ ಲಾವಾ ಸ್ಟೋರ್ಮ್ 5G (Lava Storm 5G) ಅನ್ನು ರಿಲೀಸ್ ಮಾಡಿದೆ. ಹೊಸದಾಗಿ ಬಿಡುಗಡೆಯಾದ ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿದ್ದರೂ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಹಾಗಾದರೆ ಈ ಫೋನಿನ ಬೆಲೆ, ಲಭ್ಯತೆ ಮತ್ತು ವೈಶಿಷ್ಟ್ಯಗಳ ಬಗ್ಗೆ ನೋಡೋಣ.

ಭಾರತದಲ್ಲಿ ಲಾವಾ ಸ್ಟೋರ್ಮ್ 5G ಬೆಲೆ, ಲಭ್ಯತೆ:

ಹೊಸ ಲಾವಾ ಸ್ಟೋರ್ಮ್ 5G ಅನ್ನು ಆಯ್ದ ಬ್ಯಾಂಕ್ ಕೊಡುಗೆಗಳೊಂದಿಗೆ 11,999 ರೂ. ಗಳಿಗೆ ಖರೀದಿಸಬಹುದು. ಇದರ ಮೂಲ ಬೆಲೆ 13,499 ರೂ. ಆಗಿದೆ. ಆಸಕ್ತ ಬಳಕೆದಾರರು ಭಾರತದಲ್ಲಿ ಡಿಸೆಂಬರ್ 28 ರಿಂದ ಲಾವಾದ ಅಧಿಕೃತ ಸ್ಟೋರ್ ಮತ್ತು ಇ ಕಾಮರ್ಸ್ ತಾಣವಾದ ಅಮೆಜಾನ್ ಮೂಲಕ ಖರೀದಿಸಬಹುದು. ಲಾವಾ ಸ್ಟೋರ್ಮ್ 5G ಸ್ಮಾರ್ಟ್‌ಫೋನ್ ಅನ್ನು ಗೇಲ್ ಗ್ರೀನ್ ಮತ್ತು ಥಂಡರ್ ಬ್ಲ್ಯಾಕ್ ಎಂಬ ಎರಡು ಆಕರ್ಷಕ ಬಣ್ಣ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗಿದೆ.

WhatsApp Tricks: ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್ ಯಾರು ಬೇಕಾದ್ರೂ ನೋಡಬಹುದು: ಹೇಗೆ ಗೊತ್ತೇ?

ಇದನ್ನೂ ಓದಿ
Image
ಜಾಗತಿಕವಾಗಿ ಎಕ್ಸ್​​ ಡೌನ್: ವರದಿ ಮಾಡಿದ ಸಾವಿರಾರು X ಬಳಕೆದಾರರು
Image
ಅಮೆರಿಕದಲ್ಲಿ ಆ್ಯಪಲ್ ಸ್ಮಾರ್ಟ್​ವಾಚ್​ಗೆ ನಿಷೇಧ ಸಾಧ್ಯತೆ; ಏನು ಕಾರಣ?
Image
ಹಾನರ್​ನಿಂದ ಬಜೆಟ್ ಬೆಲೆಗೆ 108MP ಕ್ಯಾಮೆರಾದ ಹಾನರ್ X8b ಬಿಡುಗಡೆ
Image
ಬಜೆಟ್ ಪ್ರಿಯರ ಬಹುನಿರೀಕ್ಷಿತ ಫೋನ್ ಪೋಕೋ C65 ಇಂದಿನಿಂದ ಖರೀದಿಗೆ ಲಭ್ಯ

ಲಾವಾ ಸ್ಟಾರ್ಮ್ 5G ಫೀಚರ್ಸ್:

ಡಿಸ್‌ಪ್ಲೇ: ಲಾವಾ ಸ್ಟಾರ್ಮ್ 5G 120Hz ರಿಫ್ರೆಶ್ ರೇಟ್‌ನೊಂದಿಗೆ 6.78-ಇಂಚಿನ FHD+ IPS ಡಿಸ್‌ಪ್ಲೇಯನ್ನು ಹೊಂದಿದೆ.

ಪ್ರೊಸೆಸರ್: ಹೊಸ ಲಾವಾ ಸ್ಟಾರ್ಮ್ 5G ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಚಿಪ್‌ಸೆಟ್‌ನಿಂದ ಚಾಲಿತವಾಗಿದೆ.

ಹಿಂದಿನ ಕ್ಯಾಮೆರಾಗಳು: ಈ ಸ್ಮಾರ್ಟ್​ಫೋನ್​ನಲ್ಲಿ 50MP ಪ್ರಾಥಮಿಕ ಕ್ಯಾಮೆರಾ ಮತ್ತು 8MP ಅಲ್ಟ್ರಾ-ವೈಡ್ ಸಂವೇದಕವನ್ನು ನೀಡಲಾಗಿದೆ.

ಸೆಲ್ಫಿ ಕ್ಯಾಮೆರಾ: ಲಾವಾ ಸ್ಟಾರ್ಮ್ 5G ಯಲ್ಲಿ 16MP ಮುಂಭಾಗದ ಕ್ಯಾಮೆರಾ ಇದೆ.

ಮೆಮೊರಿ: 8GB RAM ಮತ್ತು 128GB ಆಂತರಿಕ ಸಂಗ್ರಹಣೆಯೊಂದಿಗೆ ಬರುತ್ತದೆ. ಹೆಚ್ಚುವರಿಯಾಗಿ, ಇದು 8GB ವರ್ಚುವಲ್ RAM ಅನ್ನು ಹೊಂದಿದೆ.

OS: ಈ ಫೋನ್ ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಬ್ಯಾಟರಿ: ಲಾವಾ ಸ್ಟಾರ್ಮ್ 5ಜಿ 33W ವೇಗದ ಚಾರ್ಜಿಂಗ್ ತಂತ್ರಜ್ಞಾನದೊಂದಿಗೆ 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.

ಇತರೆ ವೈಶಿಷ್ಟ್ಯಗಳು: ಸೈಡ್-ಮೌಂಟೆಡ್ ಅಲ್ಟ್ರಾ-ಫಾಸ್ಟ್ ಫಿಂಗರ್‌ಪ್ರಿಂಟ್ ಗುರುತಿಸುವಿಕೆ ಮತ್ತು ಫೇಸ್ ಅನ್‌ಲಾಕ್ ವೈಶಿಷ್ಟ್ಯವನ್ನು ಹೊಂದಿದೆ.

ಹೊಸ ಲಾವಾ ಸ್ಟಾರ್ಮ್ 5ಜಿ ಸ್ಮಾರ್ಟ್​ಫೋನ್ ಇತ್ತೀಚೆಗೆ ಬಿಡುಗಡೆ ಆದ ರಿಯಲ್ ಮಿ C67 5G ಮತ್ತು ರೆಡ್ಮಿ 13C 5G ಫೋನಿಗೆ ಕಠಿಣ ಪೈಪೋಟಿ ನೀಡುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ