Lava Agni 5G: ವಿದೇಶಿ ಕಂಪನಿಗಳ ಹುಟ್ಟಡಗಿಸಿದ ಲಾವಾ ಅಗ್ನಿ 5G ಫೋನ್ ಖರೀದಿಗೆ ಲಭ್ಯ: ಮೊದಲ ದಿನವೇ ಭರ್ಜರಿ ಸೇಲ್

Lava's first 5G phone Lava Agni: ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಬೆಲೆಗೆ ಅತ್ಯುತ್ತಮ 5ಜಿ ಸ್ಮಾರ್ಟ್​ಫೋನ್ ಭಾರತದಲ್ಲಿ  ಮಾರಾಟವಾಗುತ್ತಿದ್ದು, ಇಂದು ಮಧ್ಯಾಹ್ನ 12:00 ಗಂಟೆಯಿಂದ ಲಾವಾ ಅಗ್ನಿ 5ಜಿ ಖರೀದಿಗೆ ಸಿಗುತ್ತಿದೆ.

Lava Agni 5G: ವಿದೇಶಿ ಕಂಪನಿಗಳ ಹುಟ್ಟಡಗಿಸಿದ ಲಾವಾ ಅಗ್ನಿ 5G ಫೋನ್ ಖರೀದಿಗೆ ಲಭ್ಯ: ಮೊದಲ ದಿನವೇ ಭರ್ಜರಿ ಸೇಲ್
Lava Agni 5G

ಚೀನೀ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳಿಗೆ ನಡುಕ ಹುಟ್ಟಿಸಿರುವ ದೇಶೀಯ ಲಾವಾ (Lava) ಕಂಪನಿಯ ಹೊಸ ಲಾವಾ ಅಗ್ನಿ 5ಜಿ (Lava Agni 5G) ಸ್ಮಾರ್ಟ್​ಫೋನ್ ಇಂದಿನಿಂದ ಮಾರುಕಟ್ಟೆಯಲ್ಲಿ ಮತ್ತು ಇ ಕಾಮರ್ಸ್​ ತಾಣಗಳಲ್ಲಿ ಖರೀದಿಗೆ ಸಿಗುತ್ತಿದೆ. ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಬೆಲೆಗೆ ಅತ್ಯುತ್ತಮ 5ಜಿ ಸ್ಮಾರ್ಟ್​ಫೋನ್ (5G Smartphone) ಭಾರತದಲ್ಲಿ  ಮಾರಾಟವಾಗುತ್ತಿದ್ದು, ಇಂದು ಮಧ್ಯಾಹ್ನ 12:00 ಗಂಟೆಯಿಂದ ಖರೀದಿಗೆ ಸಿಗುತ್ತಿದೆ. ಇದು ಲಾವಾ ಕಂಪನಿಯ ಚೊಚ್ಚಲ 5ಜಿ ಸ್ಮಾರ್ಟ್​ಫೋನ್ ಆಗಿದೆ. ಇದು ಟ್ರಿಪಲ್ ಕ್ಯಾಮೆರಾ ಸೆನ್ಸಾರ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು ಬಜೆಟ್ ಪ್ರಿಯರಿಗೆ (Budget Smartphone) ಹೇಳಿ ಮಾಡಿಸಿದಂತಿದೆ.

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗುತ್ತಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ದರವು ಕೇವಲ 19,999 ರೂ. ಆಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣಗಳಾದ ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ರೀಟೇಲ್ ಸ್ಟೋರ್‌ಗಳ ಮೂಲಕ ದೇಶದಲ್ಲಿ ಮಾರಾಟವಾಗುತ್ತಿದೆ.

ಇದು ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಅತ್ಯಂತ ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ವಿಶೇಷವಾಗಿ ಈ ಸ್ಮಾರ್ಟ್​ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ನಾಲ್ಕನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಅದೇ ರೀತಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸಾರ್ ನೀಡಲಾಗಿದೆ.

ಬ್ಯಾಟರಿ ಕೂಡ ಬೊಂಬಾಟ್ ಆಗಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಇದು 90 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡುತ್ತದೆ ಎಂದು ಕಂಪನಿ ಹೇಳಿದೆ.

Moto G Power 2022: 5000mAh ಬ್ಯಾಟರಿ, ಪವರ್​ಫುಲ್ ಚಾರ್ಜರ್: ಮೋಟೋ G ಪವರ್‌ 2022 ಸ್ಮಾರ್ಟ್‌ಫೋನ್‌ ಬಿಡುಗಡೆ

(Lava Agni 5G Indias 5G smartphone Lava Agni 5G sales started price and features here)

Click on your DTH Provider to Add TV9 Kannada