Lava Blaze 5G: ಭಾರತದ ಅತಿ ಅಗ್ಗದ 5ಜಿ ಸ್ಮಾರ್ಟ್​ಫೋನ್ ಲಾವಾ ಬ್ಲೇಜ್‌ ಇಂದಿನಿಂದ ಖರೀಗೆ ಲಭ್ಯ

| Updated By: Vinay Bhat

Updated on: Nov 15, 2022 | 6:44 AM

ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿರುವ ಲಾವಾ ಬ್ಲೆಂಜ್‌ 5ಜಿ (Lava Blaze 5G) ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್‌ ಮೂಲಕ ಮಾರಾಟ ಪ್ರಾರಂಭಿಸಲಿದೆ ಎಂದು ಲಾವಾ ಹೇಳಿಕೆ ನೀಡಿದೆ.

Lava Blaze 5G: ಭಾರತದ ಅತಿ ಅಗ್ಗದ 5ಜಿ ಸ್ಮಾರ್ಟ್​ಫೋನ್ ಲಾವಾ ಬ್ಲೇಜ್‌ ಇಂದಿನಿಂದ ಖರೀಗೆ ಲಭ್ಯ
lava blaze 5g
Follow us on

ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು (Smartphones) ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ (Lava) ಕಂಪನಿ ದೇಶದಲ್ಲಿ ಊಹಿಸಲಾಗದ ಬೆಲೆಗೆ ಲಾವಾ ಬ್ಲೆಂಜ್‌ (Lava Blaze 5G) ಎಂಬ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿತ್ತು. ಕಳೆದ ತಿಂಗಳು ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 (India Mobile Congress-2022) ಸಮಾವೇಶದಲ್ಲಿ ಕಂಪನಿಯು ಈ ಫೋನ್ ಅನ್ನು ಅನಾವರಣ ಮಾಡಿತ್ತು. ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿರುವ ಈ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್‌ ಮೂಲಕ ಮಾರಾಟ ಪ್ರಾರಂಭಿಸಲಿದೆ ಎಂದು ಲಾವಾ ಹೇಳಿಕೆ ನೀಡಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಕೇವಲ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗಲಿದೆ. ಇದರ 4GB RAM + 128GB ಸ್ಟೋರೇಜ್ ಮಾದರಿಗೆ ಕೇವಲ 9,999ರೂ. ಬೆಲೆಯನ್ನು ನಿಗದಿ ಮಾಡಲಾಗಿದೆ. ನವೆಂಬರ್ 15  ಇಂದಿನಿಂದ ಅಮೆಜಾನ್‌ನಲ್ಲಿ ಮೊದಲ ಸೇಲ್ ಶುರು ಮಾಡಲಿದೆ. ಇದು ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.

ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ ದರಕ್ಕೆ ಬೆಂಬಲಿಸುತ್ತದೆ. ವೈಡ್‌ವೈನ್‌ L1 ಬೆಂಬಲವನ್ನು ಕೂಡ ಪಡೆದುಕೊಂಡಿದೆ. 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಇದನ್ನೂ ಓದಿ
Cyber Crime: ಸೈಬರ್ ಕ್ರೈಮ್ ಜಾಲಕ್ಕೆ ಬಿದ್ದು ಹಣ ಕಳೆದುಕೊಂಡರೆ ತಕ್ಷಣ ಏನು ಮಾಡಬೇಕು?: ಇಲ್ಲಿದೆ ಫುಲ್ ಡಿಟೇಲ್ಸ್
Tech Tips: ಎಚ್ಚರ: ಮನೆಯೊಳಗೆ ತಪ್ಪಿಯೂ ಈ ಅಪಾಯಕಾರಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಇಡಬೇಡಿ
WhatsApp Update: ಎರಡು ಮೊಬೈಲ್​ಗಳಲ್ಲಿ ಒಂದೇ ಅಕೌಂಟ್: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಊಹಿಸಲಾಗದ ಫೀಚರ್
Best Smartphone: ಇಲ್ಲಿದೆ ನೋಡಿ 20,000 ರೂ. ಒಳಗೆ ಸಿಗುತ್ತಿರುವ 108MP ಕ್ಯಾಮೆರಾದ ಬೆಸ್ಟ್ ಸ್ಮಾರ್ಟ್​​ಫೋನ್ಸ್

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರಲ್ಲಿರುವ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.