Lava Blaze 5G: ವಿದೇಶಿ ಮೊಬೈಲ್ ಕಂಪನಿಗಳ ಹುಟ್ಟಡಗಿಸಿದ ಭಾರತದ ಲಾವಾ ಬ್ಲೇಜ್ ಹೊಸ ಸ್ಟೋರೇಜ್​ನಲ್ಲಿ ಬಿಡುಗಡೆ

ಲಾವಾ ಬ್ಲೆಜ್‌ 5ಜಿ (Lava Blaze 5G) ಕಳೆದ ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ಸಮಾವೇಶದಲ್ಲಿ ಅನಾವರಣಗೊಂಡಿತ್ತು. ಇದೀಗ ಲಾವಾ ಈ ಫೋನಿನ ಮತ್ತೊಂದು ಸ್ಟೋರೇಜ್ ಆಯ್ಕೆ ಬಿಡುಗಡೆ ಮಾಡಿದೆ.

Lava Blaze 5G: ವಿದೇಶಿ ಮೊಬೈಲ್ ಕಂಪನಿಗಳ ಹುಟ್ಟಡಗಿಸಿದ ಭಾರತದ ಲಾವಾ ಬ್ಲೇಜ್ ಹೊಸ ಸ್ಟೋರೇಜ್​ನಲ್ಲಿ ಬಿಡುಗಡೆ
lava blaze 5g
Follow us
| Updated By: Vinay Bhat

Updated on: Feb 11, 2023 | 6:53 AM

ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು (Smartphones) ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ (Lava) ಕಂಪನಿ ಕಳೆದ ವರ್ಷ ನವೆಂಬರ್​ನಲ್ಲಿ ದೇಶದಲ್ಲಿ ಊಹಿಸಲಾಗದ ಬೆಲೆಗೆ ಆಕರ್ಷಕ 5ಜಿ ಫೋನನ್ನು ಪರಿಚಿಯಿಸಿತ್ತು. ಇದರ ಹೆಸರು ಲಾವಾ ಬ್ಲೆಜ್‌ 5ಜಿ (Lava Blaze 5G). ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ಸಮಾವೇಶದಲ್ಲಿ ಕಂಪನಿಯು ಈ ಫೋನ್ ಅನ್ನು ಅನಾವರಣ ಮಾಡಿತ್ತು. ಈ ಸ್ಮಾರ್ಟ್​ಫೋನ್ ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿದೆ. ಈ ಮೂಲಕ ವಿದೇಶಿ ಸ್ಮಾರ್ಟ್​ಫೋನ್​ಗಳಿಗೆ ನಡುಕ ಹುಟ್ಟಿಸಿತ್ತು. ಇದೀಗ ಲಾವಾ ಈ ಫೋನಿನ ಮತ್ತೊಂದು ಸ್ಟೋರೇಜ್ ಆಯ್ಕೆ ಬಿಡುಗಡೆ ಮಾಡಿದೆ.

  • ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಈಗ ಎರಡು ಮಾದರಿಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 4GB RAM + 128GB ಸ್ಟೋರೇಜ್ ಮಾದರಿಗೆ 9,999ರೂ. ಬೆಲೆ ಇದೆ.
  • ಹೊಸದಾಗಿ ಬಿಡುಗಡೆ ಆಗಿರುವ 6GB RAM + 128GB ಸ್ಟೋರೇಜ್ ಸಾಮರ್ಥ್ಯಕ್ಕೆ 11,999 ರೂ. ನಿಗದಿ ಮಾಡಲಾಗಿದೆ.
  • ಇದನ್ನೂ ಓದಿ
    Image
    Realme 10 Pro Coca-Cola: ಭಾರತದಲ್ಲಿ ಕೋಕಾ-ಕೋಲಾ ಸಂಸ್ಥೆಯ ಚೊಚ್ಚಲ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?
    Image
    Realme GT Neo 5: 240W ಫಾಸ್ಟ್ ಚಾರ್ಜಿಂಗ್‌: ಸ್ಮಾರ್ಟ್​ಫೋನ್ ಮಾರುಕಟ್ಟೆಯನ್ನು ದಂಗಾಗಿಸಿದ ರಿಯಲ್ GT ನಿಯೋ 5
    Image
    Tech Tips: ಮೊಬೈಲ್​ನಲ್ಲಿ ನಂಬರ್ ಸೇವ್ ಮಾಡದೆ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಕಳುಹಿಸುವುದು ಹೇಗೆ?: ಇಲ್ಲಿದೆ ಟ್ರಿಕ್
    Image
    Oppo Reno 8T 5G: ಇಂದಿನಿಂದ 108MP ಕ್ಯಾಮೆರಾದ ಒಪ್ಪೋ ರೆನೋ 8T 5G ಸ್ಮಾರ್ಟ್​ಫೋನ್ ಮಾರಾಟ ಆರಂಭ: ಬೆಲೆ ಎಷ್ಟು?
  • ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಫೆಬ್ರವರಿ 15 ರಿಂದ ಖರೀದಿಗೆ ಸಿಗುತ್ತದೆ.
  • ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ ದರಕ್ಕೆ ಬೆಂಬಲಿಸುತ್ತದೆ. ವೈಡ್‌ವೈನ್‌ L1 ಬೆಂಬಲವನ್ನು ಕೂಡ ಪಡೆದುಕೊಂಡಿದೆ.
  • 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ.
  • ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.
  • ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರಲ್ಲಿರುವ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.
  • ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ