AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರುತ್ತಿದೆ ಭಾರತದ ಸ್ಮಾರ್ಟ್​ಫೋನ್: ರೋಚಕತೆ ಸೃಷ್ಟಿಸಿದ ಲಾವಾ ಬ್ಲೇಜ್ ಪ್ರೊ 5G

Lava Blaze Pro 5G Launching Soon: ಲಾವಾ ಇಂಟರ್‌ನ್ಯಾಶನಲ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಹಾರ ಮುಖ್ಯಸ್ಥ ಸುನಿಲ್ ರೈನಾ, ಲಾವಾ ಬ್ಲೇಜ್ ಪ್ರೊ 5 ಜಿ ಬಿಡುಗಡೆಯನ್ನು ಖಚಿತಪಡಿಸಿದ್ದಾರೆ. ಭಾರತದಲ್ಲಿ ಮುಂಬರುವ ಹಬ್ಬದ ದಿನ ಬ್ಲೇಜ್ ಪ್ರೊ 5G ಅನ್ನು ಬಹಿರಂಗಪಡಿಸಲು ನಿರ್ಧರಿಸಲಾಗಿದೆ ಎಂದು ಕಾರ್ಯನಿರ್ವಾಹಕರು ತಿಳಿಸಿದ್ದಾರೆ.

ಬರುತ್ತಿದೆ ಭಾರತದ ಸ್ಮಾರ್ಟ್​ಫೋನ್: ರೋಚಕತೆ ಸೃಷ್ಟಿಸಿದ ಲಾವಾ ಬ್ಲೇಜ್ ಪ್ರೊ 5G
lava blaze pro 5g
Vinay Bhat
|

Updated on: Sep 16, 2023 | 6:55 AM

Share

ಭಾರತದ ಪ್ರಸಿದ್ಧ ಸ್ಮಾರ್ಟ್​ಫೋನ್ ತಯಾರಿಕ ಕಂಪನಿ ಲಾವಾ ಇದೀಗ ಹೊಸ ಸ್ಮಾರ್ಟ್​ಫೋನ್ ಒಂದನ್ನು ಬಿಡುಗಡೆ ಮಾಡುವ ಬಗ್ಗೆ ಘೋಷೆಣೆ ಮಾಡಿದೆ. ಕಳೆದ ವರ್ಷ ದೇಶದಲ್ಲಿ ಲಾವಾ ಬ್ಲೇಜ್ 5G ಅನ್ನು ಅನಾವರಣ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಲಾವಾ ಬ್ಲೇಜ್ ಪ್ರೊ 5G (Lava Blaze Pro 5G) ಫೋನ್‌ನ ಶೀಘ್ರದಲ್ಲೇ ರಿಲೀಸ್ ಮಾಡಲು ತಯಾರಿ ನಡೆಸುತ್ತಿದೆ. ಲಾವಾ ಬ್ಲೇಜ್ ಪ್ರೊ 5G ಕೆಲವೇ ದಿನಗಳಲ್ಲಿ ದೇಶದಲ್ಲಿ ಅನಾವರಣಗೊಳ್ಳಲಿದೆ ಎಂದು ಕಂಪನಿಯ ಉನ್ನತ ಕಾರ್ಯನಿರ್ವಾಹಕರು ದೃಢಪಡಿಸಿದ್ದಾರೆ.

ಲಾವಾ ಬ್ಲೇಜ್ ಪ್ರೊ 5Gಬಿಡುಗಡೆ ವಿವರ:

ಎಕ್ಸ್‌ನಲ್ಲಿ (ಹಿಂದೆ ಟ್ವಿಟರ್), ಲಾವಾ ಇಂಟರ್‌ನ್ಯಾಶನಲ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಹಾರ ಮುಖ್ಯಸ್ಥ ಸುನಿಲ್ ರೈನಾ, ಲಾವಾ ಬ್ಲೇಜ್ ಪ್ರೊ 5 ಜಿ ಬಿಡುಗಡೆಯನ್ನು ಖಚಿತಪಡಿಸಿದ್ದಾರೆ. ಭಾರತದಲ್ಲಿ ಮುಂಬರುವ ಹಬ್ಬದ ದಿನ ಬ್ಲೇಜ್ ಪ್ರೊ 5G ಅನ್ನು ಬಹಿರಂಗಪಡಿಸಲು ನಿರ್ಧರಿಸಲಾಗಿದೆ ಎಂದು ಕಾರ್ಯನಿರ್ವಾಹಕರು ತಿಳಿಸಿದ್ದಾರೆ. ಆದಾಗ್ಯೂ, ಈ 5G ಫೋನಿನ ಬಿಡುಗಡೆ ದಿನಾಂಕವನ್ನು ಅವರು ತಿಳಿಸಿಲ್ಲ.

ಇದನ್ನೂ ಓದಿ
Image
ಭಾರತದಲ್ಲಿ ಮೋಟೋ ಎಡ್ಜ್ 40 ನಿಯೋ ಫೋನಿನ ಬೆಲೆ ಸೋರಿಕೆ
Image
ಹೊಸ ಇನ್ಫಿನಿಕ್ಸ್ ನೋಟ್ 30 VIP ರೇಸಿಂಗ್ ಆವೃತ್ತಿ ಬಿಡುಗಡೆ
Image
10,000 ರೂ. ಹೆಚ್ಚು ಕೊಟ್ಟು ಐಫೋನ್ 15 ಖರೀದಿಸಬಹುದೇ?
Image
iPhone 15 Pro Max 1TB ಆವೃತ್ತಿ ದರ ದೇಶದಲ್ಲಿ ₹1,99,900

ಲಾವಾ ಬ್ಲೇಜ್ ಪ್ರೊ 5 ಜಿ ಬಿಡುಗಡೆ ಕುರಿತು ಸುನಿಲ್ ರೈನಾ ಮಾಡಿರುವ ಟ್ವೀಟ್:

ಮೀಡಿಯಾ ಟೆಕ್ ಡೈಮೆನ್ಸಿಟಿ 6020 ಚಿಪ್‌ಸೆಟ್‌ನೊಂದಿಗೆ 5G-ಸಕ್ರಿಯಗೊಳಿಸಿದ ಈ ಹೊಸ ಲಾವಾ ಫೋನ್ ಸೆಪ್ಟೆಂಬರ್ ಅಂತ್ಯದ ವೇಳೆಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಟಿಪ್‌ಸ್ಟರ್ ಅಭಿಷೇಕ್ ಯಾದವ್ ಹೇಳಿದ್ದಾರೆ. ಟಿಪ್‌ಸ್ಟರ್ ಮುಂಬರುವ ಲಾವಾ ಸ್ಮಾರ್ಟ್‌ಫೋನ್‌ನ ಹಿಂದಿನ ಪ್ಯಾನೆಲ್‌ನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಇದರ ಬೆಲೆ 15,000 ರೂ. ಗಿಂತ ಕಡಿಮೆ ಇರುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಭಾರತದಲ್ಲಿ ಇಂದಿನಿಂದ ನೋಕಿಯಾದ ಈ ಸ್ಟೈಲಿಶ್ ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯ: ಬೆಲೆ ಎಷ್ಟು?

ಗಮನಿಸಬೇಕಾದ ಅಂಶವೆಂದರೆ, ಲಾವಾ ಬ್ಲೇಜ್ 5G ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಆಗಿತ್ತು. ಇದರ 4GB RAM ರೂಪಾಂತರದ ಬೆಲೆ 10,499 ರೂ., 6GB RAM ರೂಪಾಂತರ 11,999 ರೂ. ಮತ್ತು 8GB RAM ರೂಪಾಂತರವು 128GB ಆಂತರಿಕ ಸಂಗ್ರಹಣೆ 12,999 ರೂ. ಬೆಲೆಗೆ ಲಭ್ಯವಿದೆ.

ಇನ್ನು ಈ ವಾರದ ಆರಂಭದಲ್ಲಿ ಲಾವಾ ಕಂಪನಿ ಬ್ಲೇಜ್ ಪ್ರೊ 4ಜಿ ಆವೃತ್ತಿಯನ್ನು ಪರಿಚಯಿಸಿತ್ತು. ಇದು 6.5-ಇಂಚಿನ IPS LCD ಡಿಸ್ ಪ್ಲೇ ಜೊತೆಗೆ 2.5D ಕರ್ವ್ಡ್ ಸ್ಕ್ರೀನ್ ಮತ್ತು 90Hz ರಿಫ್ರೆಶ್ ದರವನ್ನು ಹೊಂದಿದೆ. ಆಕ್ಟಾ-ಕೋರ್ ಯುನಿಸಾಕ್ T616 ಪ್ರೊಸೆಸರ್ ಮೂಲಕ ರನ್ ಆಗುತ್ತದೆ. ಫೋನಿನ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಇದೆ. ಇದು 50-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಡ್ಯುಯಲ್ 2-ಮೆಗಾಪಿಕ್ಸೆಲ್ ಕ್ಯಾಮೆರಾ ಸಂವೇದಕಗಳಿಂದ ಕೂಡಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗ 8-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಲಾವಾ ಬ್ಲೇಜ್ ಪ್ರೊ 4ಜಿ 18W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿ ಶಕ್ತಿಯನ್ನು ಪಡೆದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!