ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ: ಕರ್ನಾಟಕ ಸರ್ಕಾರದಿಂದ ಹೊಸ ಆ್ಯಪ್ ಬಿಡುಗಡೆ
KSP Application: ನಿಮ್ಮ ಸ್ಮಾರ್ಟ್ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್ ಅನ್ನು ಬ್ಲಾಕ್ ಮಾಡಲು ಕರ್ನಾಟಕ ಪೊಲೀಸ್ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್( KSP Application ) ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆ್ಯಪ್ ಅನ್ನು ಇನ್ಸ್ಟಾಲ್ ಮಾಡಿ ಬ್ಲಾಕ್ ಮಾಡಿ ದೂರು ದಾಖಲಿಸಬಹುದು.
ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್ಫೋನ್ (Smartphone) ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ. ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ.
ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್ ಅನ್ನು ಬ್ಲಾಕ್ ಮಾಡಲು ಕರ್ನಾಟಕ ಪೊಲೀಸ್ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್( KSP Application ) ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆ್ಯಪ್ ಅನ್ನು ಇನ್ಸ್ಟಾಲ್ ಮಾಡಿ ಬ್ಲಾಕ್ ಮಾಡಿ ದೂರು ದಾಖಲಿಸಬಹುದು.
Jio Airfiber Plans: ಬೆಂಗಳೂರು ಸೇರಿ 8 ನಗರಗಳಲ್ಲಿ ಜಿಯೋ ಏರ್ಫೈಬರ್ ಚಾಲನೆ; ಇಲ್ಲಿದೆ ಅದರ ವಿವಿಧ ಪ್ಲಾನ್ಗಳ ಬೆಲೆ
ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.
ಬೆಂಗಳೂರು ನಗರ ಪೊಲೀಸರು ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:
Lost your phone? Secure it with KSP app! Follow these steps to block your lost phone.
ನಿಮ್ಮ ಫೋನ್ ಕಳೆದುಹೋಗಿದೆಯೇ? ಹಾಗಿದ್ದಲ್ಲಿ, KSP ಅಪ್ಲಿಕೇಶನ್ ನಲ್ಲಿ ನಿಮ್ಮ ಕಳೆದುಹೋದ ಫೋನ್ ಅನ್ನು ಬ್ಲಾಕ್ ಮಾಡಲು ಈ ಕೆಳಕಂಡ ವಿಧಾನಗಳನ್ನು ಅನುಸರಿಸಿ.#WeServeWeProtect #CyberSafe pic.twitter.com/SJDjzZojx5
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) September 21, 2023
- ಮೊದಲಿಗೆ ನಿಮ್ಮ ಸ್ಮಾರ್ಟ್ಫೋನ್ನಲ್ಲಿರುವ ಗೂಗಲ್ ಪ್ಲೇ ಸ್ಟೋರ್‌ನಿಂದ KSP Application ಡೌನ್ಲೋಡ್ ಮಾಡಿಕೊಂಡು ನಿಮ್ಮ ಹೆಸರನ್ನು ರಿಜಿಸ್ಟರ್ ಮಾಡಿಕೊಳ್ಳಬೇಕು.
- ಮೊಬೈಲ್ ದೂರನ್ನು E-Lost ನಲ್ಲಿ ವರದಿ ಮಾಡಲು KSP Application ಅನ್ನು ಓಪನ್ ಮಾಡಿಕೊಳ್ಳಿ. ಅಲ್ಲಿಂದ E-Lost ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಳ್ಳಿ.
- ಈಗ E-Lost ವರದಿಯನ್ನು ನೊಂದಾಯಿಸಿಕೊಂಡು ಈ ಆಪ್ಶನ್ ಅನ್ನು ಆಯ್ಕೆ ಮಾಡಿರಿ.
- ಬಳಿಕ ನಿಮ್ಮ ಹೆಸರು, ವಿಳಾಸ, ಜಿಲ್ಲೆ, ಮೊಬೈಲ್ ನಂಬರ್ ಹಾಗೂ ಇ-ಮೇಲ್ ಐಡಿ ನೊಂದಾಯಿಸಿರಿ. ನಂತರ ಮುಂದಿನ ಆಪ್ಶನ್ ಆಯ್ಕೆ ಮಾಡಿಕೊಳ್ಳಿ.
- ನಿಮ್ಮ ಮೊಬೈಲ್‌ನ ಬಿಲ್ ಇದ್ದರೆ ಅದನ್ನು ಅಪ್‌ಲೋಡ್ ಮಾಡಿ ನಂತರ ನೆಕ್ಸ್ಟ್ ಒತ್ತಿರಿ
- ಇದಾದ ಬಳಿಕ ಮೊಬೈಲ್ ಆಪ್ಶನ್ ಆಯ್ಕೆ ಮಾಡಿಕೊಳ್ಳಿ
- ಮೊಬೈಲ್ ಮಾಹಿತಿಯನ್ನು ನೋಂದಾಯಿಸಿ. ಬಳಿಕ ಆಡ್ ಆಪ್ಶನ್ ಅನ್ನು ಆಯ್ಕೆ ಮಾಡಿಕೊಳ್ಳಿರಿ
- ಕೊನೆಯಲ್ಲಿ ಮೊಬೈಲ್ ಕಳೆದು ಹೋದ ದಿನಾಂಕ, ಸಮಯ, ಸ್ಥಳದ ಮಾಹಿತಿಯನ್ನು ನೀಡಿ ಸಬ್ಮಿಟ್ ಆಪ್ಶನ್ ಆಯ್ಕೆ ಮಾಡಿಕೊಳ್ಳಿ. ನಿಮಗೆ ಅದರಲ್ಲಿಯೇ ರಶೀದಿಯೂ ಸಿಗಲಿದೆ. ಅದನ್ನು ಡೌನ್ ಲೋನ್ ಮಾಡಿ ಇಟ್ಟುಕೊಳ್ಳಿರಿ.
ಸಂಚಾರ್ ಸಾಥಿ ಪೋರ್ಟಲ್
ಕಳೆದ ವರ್ಷಗಳಿಂದ ಮೊಬೈಲ್ ಕಳ್ಳತನ ದೇಶದಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ”ಸಂಚಾರ್ ಸಾಥಿ ಪೋರ್ಟಲ್” ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆ್ಯಪಲ್ ಐಫೋನ್ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್ನಲ್ಲಿ ಕಾರ್ಯನಿರ್ವಹಿಸಲಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ