MANAS Mobile App: ಮಾನಸಿಕ ಸ್ವಾಸ್ಥ್ಯ ಕಾಪಾಡಲು ‘ಮನಸ್‘ ಆ್ಯಪ್ ಬಿಡುಗಡೆ

ಮಾನಸಿಕ ಆರೋಗ್ಯ ವ್ಯವಸ್ಥೆಯನ್ನು ಸೂಚಿಸುವ ಮನಸ್(MANAS) ಎಂಬ ಅಪ್ಲಿಕೇಶನ್ ಸಮಗ್ರವಾದ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಯೋಗಕ್ಷೇಮದ ವೇದಿಕೆಯಾಗಿದೆ ಎಂದು ತಿಳಿದು ಬಂದಿದೆ.

MANAS Mobile App: ಮಾನಸಿಕ ಸ್ವಾಸ್ಥ್ಯ ಕಾಪಾಡಲು ‘ಮನಸ್‘ ಆ್ಯಪ್ ಬಿಡುಗಡೆ
ಕೆ. ವಿಜಯರಾಘವನ್
Follow us
shruti hegde
|

Updated on: Apr 15, 2021 | 12:33 PM

ದೆಹಲಿ: ಎಲ್ಲಾ ವಯೋಮಾನದವರಲ್ಲಿ ಮಾನಸಿಕ ಸ್ವಾಸ್ಥ್ಯವನ್ನುಕಾಪಾಡಲು ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ. ವಿಜಯರಾಘವನ್ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಬುಧವಾರ ಪ್ರಧಾನ ವೈಜ್ಞಾನಿಕ ಸಲಹೆಗಾರರ ​​ಕಚೇರಿ ಮಾಹಿತಿ ನೀಡಿದೆ. ಮಾನಸಿಕ ಆರೋಗ್ಯದ ಬಗ್ಗೆ ತಿಳಿಸುವ ಮನಸ್ (MANAS) ಎಂಬ ಅಪ್ಲಿಕೇಶನ್ ಸಮಗ್ರವಾದ ವಿಚಾರಗಳನ್ನು ಒಳಗೊಂಡಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಯೋಗಕ್ಷೇಮಕ್ಕೆ ಸಂಬಂಧಿಸಿದ ಪೂರಕ ವೇದಿಕೆಯಾಗಿದೆ ಎಂದು ಹೇಳಲಾಗಿದೆ.

ಭಾರತೀಯ ನಾಗರಿಕರ ಮಾನಸಿಕ ಸ್ವಾಸ್ಥ್ಯವನ್ನು ಹೆಚ್ಚಿಸಲು ಈ ಮನಸ್​ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಧಾನ ವೈಜ್ಞಾನಿಕ ಸಲಹೆಗಾರರ ​​ಕಚೇರಿ ತಿಳಿಸಿದೆ. ಮನಸ್ ಆ್ಯಪ್​ಅನ್ನು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ​​ಕಚೇರಿ ಆರಂಭಿಸಿತು. ಇದನ್ನು ನಿಮ್ಹಾನ್ಸ್ ಬೆಂಗಳೂರು, ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು (ಎಎಫ್‌ಎಂಸಿ), ಪುಣೆ ಮತ್ತು ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್​ ಕಂಪ್ಯೂಟಿಂಗ್ (ಸಿ-ಡಿಎಸಿ) ಬೆಂಗಳೂರು ಜಂಟಿಯಾಗಿ ಕಾರ್ಯಗತಗೊಳಿಸಿವೆ ಎಂದು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ ತಿಳಿಸಿದೆ.

ಈ ಅಪ್ಲಿಕೇಶನ್ ​ಅನ್ನು ರಾಷ್ಟ್ರೀಯ ಆರೋಗ್ಯ ಮಿಷನ್, ಪೋಶನ್ ಅಭಿಯಾನ, ಇ-ಸಂಜೀವಿನಿ ಮತ್ತು ಇತರ ಸಾರ್ವಜನಿಕ ಆರೋಗ್ಯ ಯೋಜನೆಗಳೊಂದಿಗೆ ಸಂಯೋಜಿಸಬೇಕು. ಆದ್ದರಿಂದ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಇದಲ್ಲದೇ ಅರ್ಜಿಯನ್ನು ಬಹುಭಾಷೆಯಾಗಿ ಮಾಡಬೇಕು ಎಂದು ಮನಸ್​ ಆ್ಯಪ್​ ಬಿಡುಗಡೆಯ ಸಂದರ್ಭದಲ್ಲಿ ವಿಜಯರಾಘವನ್ ಹೇಳಿದ್ದಾರೆ.

ಪ್ರಧಾನ ಮಂತ್ರಿ ವಿಜ್ಞಾನ, ತಂತ್ರಜ್ಞಾನ ಮತ್ತು ಇನೋವೇಶನ್ ಅಡ್ವೈಸರಿ ಕೌನ್ಸಿಲ್ (ಪಿಎಂ-ಎಸ್‌ಟಿಐಎಸಿ) ಸದಸ್ಯ ಲೆಫ್ಟಿನೆಂಟ್ ಜನರಲ್ ಮಾಧುರಿ ಕನಿತ್ಕರ್ ಅವರು ಮನಸ್ ತಂತ್ರಾಂಶವು ಜೀವನ ಕೌಶಲ್ಯ ಮತ್ತು ಪ್ರಮುಖ ಮಾನಸಿಕ ಪ್ರಕ್ರಿಯೆಯನ್ನು ಆಧರಿಸಿದೆ ಎಂದರು. ಈ ಕುರಿತಂತೆ ಮಾತನಾಡಿದ ಅವರು ಮನಸ್​ನ ಆರಂಭಿಕ ಆವೃತ್ತಿಯು 15 ರಿಂದ35 ವರ್ಷ ವಯಸ್ಸಿನವರಲ್ಲಿ ಸಕಾರಾತ್ಮಕ ಮಾನಸಿಕ ಆರೋಗ್ಯವನ್ನು ಉತ್ತೇಜಿಸುವತ್ತ ಗಮನಹರಿಸುತ್ತದೆ ಎಂದು ಹೇಳಿದರು.

ಮಾನಸಿಕ ಆರೋಗ್ಯ ಎಂದರೇನು? ವಿಶ್ವ ಆರೋಗ್ಯ ಸಂಸ್ಥೆ ಮಾನಸಿಕ ಆರೋಗ್ಯವನ್ನು ಯೋಗಕ್ಷೇಮದ ಸ್ಥಿತಿ ಎಂದು ವ್ಯಾಖ್ಯಾನಿಸುತ್ತದೆ. ಇದರಲ್ಲಿ ವ್ಯಕ್ತಿಯು ತನ್ನ ಸ್ವಂತ ಸಾಮರ್ಥ್ಯಗಳನ್ನು ಅರಿತುಕೊಳ್ಳುತ್ತಾನೆ. ಇದರಿಂದ ವ್ಯಕ್ತಿಗೆ ಜೀವನದಲ್ಲಿನ ಸಾಮಾನ್ಯ ಒತ್ತಡಗಳನ್ನು ನಿಭಾಯಿಸಲು ಸಾಧ್ಯವಾಗುತ್ತದೆ.  ಮಾನಸಿಕ ಆರೋಗ್ಯವು ವ್ಯಕ್ತಿಯ ಜೀವನವನ್ನು ಖುಷಿಯಿಂದಡಲು ಸಹಕರಿಸುತ್ತದೆ. ಮತ್ತು ಮಾನಸಿಕ ನೆಮ್ಮದಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಒಟ್ಟಾರೆಯಾಗಿ ನಮ್ಮ ಮಾನಸಿಕ ಒತ್ತಡವನ್ನು  ಹೇಗೆ ಗ್ರಹಿಸುತ್ತೇವೆ? ಜೊತೆಗೆ ಹೇಗೆ ನಿಭಾಯಿಸುತ್ತೇವೆ ತುಂಬುದರ ಬಗ್ಗೆ ತಿಳುವಳಿಕೆಯನ್ನು ನೀಡುತ್ತದೆ.  2017  ಏಪ್ರಿಲ್ 7 ರಂದು ಭಾರತದಲ್ಲಿ ಮಾನಸಿಕ ಆರೋಗ್ಯ ಕಾಯ್ದೆಯನ್ನು ಅಂಗೀಕರಿಸಲಾಯಿತು. ಇದು 2018 ರ ಮೇ 29 ರಂದು ಜಾರಿಗೆ ಬಂದಿತು.

ಇದನ್ನೂ ಓದಿ: ಸಂಸ್ಕೃತ ಕಲಿಕೆಗಾಗಿ ಲಿಟಲ್ ಗುರು ಆ್ಯಪ್ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ