WhatsApp New Updates: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು: ಬಂದಿದೆ ಹೊಸ ಆಯ್ಕೆ

ಮೆಟಾ ಒಡೆತನದ ಈ ಆ್ಯಪ್ ”ಎಡಿಟ್ ಸೆಂಟ್ ಮೆಸೇಜ್” (Edit Sent Message) ಎಂಬ ನೂತನ ಅಪ್ಡೇಟ್ ಪರಿಚಯಿಸಿದೆ. ಈ ಬಗ್ಗೆ ಮೆಟಾ ಸಿಇಒ ಮಾರ್ಕ್ ಜುಕರ್ ಬರ್ಗ್ ತಮ್ಮ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

WhatsApp New Updates: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು: ಬಂದಿದೆ ಹೊಸ ಆಯ್ಕೆ
WhatsApp Edit Message
Follow us
Vinay Bhat
|

Updated on: May 23, 2023 | 10:24 AM

ವಿಶ್ವದಲ್ಲಿ ಇಂದು ಅತಿ ಹೆಚ್ಚು ಜನರು ಉಪಯೋಗಿಸುತ್ತಿರುವ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸಿದೆ. ಈ ಆ್ಯಪ್​ಗೆ ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಬಳಕೆದಾರರಿದ್ದಾರೆ. ಕ್ಷಣಾರ್ಧದಲ್ಲಿ ಸಂದೇಶಗಳ ಮೂಲಕ ಮಾತುಕತೆ ನಡೆಸಲು ಉಪಯೋಗಿಸುವ ವಾಟ್ಸ್​ಆ್ಯಪ್​ ಸಾಲು ಸಾಲು ಫೀಚರ್​ಗಳನ್ನು ಕೂಡ ಪರಿಚಯಿಸುತ್ತದೆ. ಸಾಮಾನ್ಯವಾಗಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಆದರೀಗ ಮೆಟಾ ಒಡೆತನದ ಈ ಆ್ಯಪ್ ”ಎಡಿಟ್ ಸೆಂಟ್ ಮೆಸೇಜ್” (Edit Sent Message) ಎಂಬ ನೂತನ ಅಪ್ಡೇಟ್ ಪರಿಚಯಿಸಿದೆ.

ಈ ಬಗ್ಗೆ ಮೆಟಾ ಸಿಇಒ ಮಾರ್ಕ್ ಜುಕರ್ ಬರ್ಗ್ ತಮ್ಮ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಡಿಟ್ ಸೆಂಟ್ ಮೆಸೇಜ್ ಆಯ್ಕೆಯ ಮೂಲಕ ಕಳುಹಿಸದ ಮೆಸೇಜ್ ಅನ್ನು ಎಡಿಟ್ (Edit Message) ಮಾಡಬಹುದಾಗಿದೆ. ಇದರ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ.

ಇದನ್ನೂ ಓದಿ
Image
Best AC in India: ಹೆಚ್ಚಾಗುತ್ತಿದೆ ಸೆಖೆಯ ಪ್ರಮಾಣ: ಇಲ್ಲಿದೆ ನೋಡಿ ಕಡಿಮೆ ಬೆಲೆಯ ಅತ್ಯುತ್ತಮ ಎಸಿಗಳು
Image
Oppo F23 5G: ಭಾರತದ ಗ್ಯಾಜೆಟ್ ಮಾರುಕಟ್ಟೆಗೆ ಬಿಡುಗಡೆಯಾಯ್ತು ಹೊಸ ಒಪ್ಪೊ ಫೋನ್
Image
Lava Agni 2 5G: ದೇಸಿ ಕಂಪನಿಯಿಂದ ಸೂಪರ್ ಬಜೆಟ್ ಲಾವಾ ಸ್ಮಾರ್ಟ್​ಫೋನ್ ಬಿಡುಗಡೆ
Image
Sony Xperia 10 V: ಸೂಪರ್ ಸ್ಟೈಲಿಶ್ ಫೋನ್ ಪರಿಚಯಿಸಿದ ಸೋನಿ ಎಕ್ಸ್​ಪೆರಿಯಾ

Galaxy A14 4G: ಯಾವುದೇ ಸೂಚನೆ ಇಲ್ಲದೆ ದಿಢೀರ್ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಸ್ಯಾಮ್​ಸಂಗ್

ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಈ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ಇಲ್ಲಿ ಗಮನಿಸ ಬೇಕಾದ ಸಂಗತಿ ಎಂದರೆ, ವಾಟ್ಸ್​ಆ್ಯಪ್​ನಲ್ಲಿ ನೀವು ಮೆಸೇಜ್ ಅನ್ನು ಡಿಲೀಟ್ ಮಾಡಿದರೆ ಹೇಗೆ ಚಾಟ್​ನಲ್ಲಿ ಮಾಹಿತಿ ನೀಡುತ್ತದೆಯೊ ಅದೇರೀತಿ ಎಡಿಟ್ ಮಾಡಿದರೆ ಕೂಡ ಕಳುಹಿಸಿದವರಿಗೆ ತಿಳಿಯುತ್ತದೆ. ಈ ಎಡಿಟ್ ಬಟನ್ ವೈಶಿಷ್ಟ್ಯದ ಮೇಲೆ ವಾಟ್ಸ್​ಆ್ಯಪ್​​ ಐದು ವರ್ಷಗಳ ಹಿಂದೆಯೇ ಗಮನಹರಿಸಲು ಆರಂಭಿಸಿದ್ದರೂ ಟ್ವಿಟರ್​ನಲ್ಲಿ ಈ ಕುರಿತು ವರದಿ ಬಂದ ಬೆನ್ನಿಗೆ ಅದನ್ನು ಕೈಬಿಟ್ಟಿತ್ತು.

ಚಾಟ್ ಲಾಕ್ ಹಾಗೂ ಹೈಡ್ ಮಾಡುಬಹುದು:

ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ (Hide) ಮಾಡಬಹುದು ಎಂದು ಹೇಳಿದೆ. ಈ ಆಯ್ಕೆ ಚಾಟ್​ನ ಕಾಂಟೆಕ್ಟ್ ಅಥವಾ ಗ್ರೂಪ್​ನ ಇನ್​ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್​ಗೆ ಹೋಗುತ್ತದೆ. ಸದ್ಯಕ್ಕೆ ಈ ಫೀಚರ್ಸ್‌ ಅಭಿವೃದ್ಧಿ ಹಂತದಲ್ಲಿದೆ. ಆಂಡ್ರಾಯ್ಡ್ ಬೀಟಾ ಆವೃತ್ತಿಯ 2.23.8.2 ಅಪ್ಡೇಟ್​ನಲ್ಲಿ ಪರೀಕ್ಷಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರು ಈ ಫೀಚರ್ಸ್‌ ಅನ್ನು ಬಳಕೆ ಮಾಡಬಹುದು ಎಂದು ತಿಳಿದುಬಂದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ