AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ಇನ್ನು ಒಂದೇ ವಾಟ್ಸ್​ಆ್ಯಪ್ ಖಾತೆ ನಾಲ್ಕು ಫೋನ್​ಗಳಲ್ಲಿ ಬಳಸಬಹುದು!

ಇಂದಿನಿಂದ (ಏಪ್ರಿಲ್ 25), ನೀವು ನಾಲ್ಕು ಫೋನ್‌ಗಳಲ್ಲಿ ಒಂದೇ ವಾಟ್ಸ್​​ಆ್ಯಪ್ ಖಾತೆಗೆ ಲಾಗ್ ಇನ್ ಮಾಡಿಕೊಳ್ಳಬಹುದು ಎಂದು ಮೆಟಾ ಸಿಇಒ ಮಾರ್ಕ್​ ಝುಕರ್​ಬರ್ಗ್ ತಿಳಿಸಿದ್ದಾರೆ.

WhatsApp New Feature: ಇನ್ನು ಒಂದೇ ವಾಟ್ಸ್​ಆ್ಯಪ್ ಖಾತೆ ನಾಲ್ಕು ಫೋನ್​ಗಳಲ್ಲಿ ಬಳಸಬಹುದು!
ವಾಟ್ಸ್​​ಆ್ಯಪ್
Ganapathi Sharma
|

Updated on:Apr 25, 2023 | 8:52 PM

Share

ಒಂದು ವಾಟ್ಸ್​​ಆ್ಯಪ್​ (WhatsApp) ಖಾತೆಯನ್ನು ಮೊಬೈಲ್, ಲ್ಯಾಪ್​ಟಾಪ್​, ಡೆಸ್ಕ್​ಟಾಪ್​​ಗಳಲ್ಲಿ ಬಳಸಲು ಅವಕಾಶವಿದ್ದರೆ ಒಂದಕ್ಕಿಂತ ಹೆಚ್ಚು ಸ್ಮಾರ್ಟ್​ಫೋನ್​ಗಳಲ್ಲಿ (Smartphone) ಬಳಸಲು ಈವರೆಗೆ ಅವಕಾಶವಿರಲಿಲ್ಲ. ಇದೀಗ ಮೆಸೇಜಿಂಗ್ ಆ್ಯಪ್ ಹೊಸ ಆಯ್ಕೆಯನ್ನು ಬಳಕೆದಾರರಿಗೆ ನೀಡಿದ್ದು, ಒಂದೇ ಬಾರಿಗೆ ನಾಲ್ಕು ಫೋನ್​ಗಳಲ್ಲಿ ಒಂದೇ ವಾಟ್ಸ್​​ಆ್ಯಪ್ ಖಾತೆಯನ್ನು ಬಳಸಬಹುದಾಗಿದೆ. ಈ ವಿಚಾರವಾಗಿ ವಾಟ್ಸ್​​ಆ್ಯಪ್ ಒಡೆತನ ಹೊಂದಿರುವ ಮೆಟಾ ಸಿಇಒ ಮಾರ್ಕ್​ ಝುಕರ್​ಬರ್ಗ್ (Mark Zuckerberg) ಫೇಸ್​​ಬುಕ್​ನಲ್ಲಿ ಮಾಹಿತಿ ನೀಡಿದ್ದಾರೆ. ಇಂದಿನಿಂದ, ನೀವು ನಾಲ್ಕು ಫೋನ್‌ಗಳಲ್ಲಿ ಒಂದೇ ವಾಟ್ಸ್​​ಆ್ಯಪ್ ಖಾತೆಗೆ ಲಾಗ್ ಇನ್ ಮಾಡಿಕೊಳ್ಳಬಹುದು ಎಂದು ಅವರು ಉಲ್ಲೇಖಿಸಿದ್ದಾರೆ.

ಬೇರೆ ಫೋನ್​ನಲ್ಲಿ ವಾಟ್ಸ್​ಆ್ಯಪ್ ಖಾತೆ ಬಳಸಬೇಕಿದ್ದರೆ ಹೊಸದಾಗಿ ಇನ್​​ಸ್ಟಾಲ್ ಮಾಡಿಕೊಳ್ಳಬೇಕು. ನಂತರ ಖಾತೆ ಸೆಟಪ್ ಮಾಡುವಾಗ ಫೋನ್ ನಂಬರ್ ನಮೂದಿಸುವ ಬದಲು ‘ಅಸ್ತಿತ್ವದಲ್ಲಿರುವ ಖಾತೆ (Existing Account)’ ಆಯ್ಕೆಯನ್ನು ಆಯ್ದುಕೊಳ್ಳಬೇಕು. ಆಗ ಕ್ಯುಆರ್ ಕೋಡ್ ಕಾಣಿಸುತ್ತದೆ. ನಂತರ ನೀವು ಈಗಾಗಲೇ ವಾಟ್ಸ್​ಆ್ಯಪ್ ಖಾತೆ ಹೊಂದಿರುವ ಫೋನ್​ನಿಂದ ಸ್ಕ್ಯಾನ್ ಮಾಡುವ ಮೂಲಕ ಲಾಗಿನ್ ಆಗಬಹುದು. ಹೊಸ ಆಯ್ಕೆಯು iOS ಮತ್ತು Android ಸ್ಮಾರ್ಟ್​​ಫೋನ್​ಗಳಲ್ಲಿ ಲಭ್ಯವಿದೆ.

ಮೊದಲು ವಾಟ್ಸ್​ಆ್ಯಪ್​ ಲಾಗಿನ್ ಆಗಿರುವ ಮೊಬೈಲ್​ಫೋನ್ ದೀರ್ಘಕಾಲದವರೆಗೆ ನಿಷ್ಕ್ರಿಯವಾಗಿದ್ದರೆ, ಆ ನಂತರ ವಾಟ್ಸ್​ಆ್ಯಪ್ ಲಾಗಿನ್ ಆಗಿರುವ ಎಲ್ಲ ಫೋನ್​ಗಳಿಂದ ಸ್ವಯಂಚಾಲಿತವಾಗಿ ಲಾಗೌಟ್ ಆಗಲಿದೆ. ಏಕ ಕಾಲಕ್ಕೆ ನಾಲ್ಕು ಫೋನ್​ಗಳಲ್ಲಿ ವಾಟ್ಸ್​​ಆ್ಯಪ್​ನ ಒಂದೇ ಖಾತೆ ಬಳಸುವ ಈ ಆಯ್ಕೆಯಿಂದ ಸಂದೇಶ ಕಳುಹಿಸುವ ಪ್ರಕ್ರಿಯೆ ಇನ್ನಷ್ಟು ಸರಳಗೊಳ್ಳಲಿದೆ. ಸೈನ್ ಔಟ್ ಮಾಡದೆಯೇ ಬೇರೆ ಫೋನ್​ನಿಂದ ಮೆಸೇಜ್ ಕಳುಹಿಸುವುದು, ಅರ್ಧಕ್ಕೆ ನಿಲ್ಲಿಸಿದ್ದ ಚಾಟ್​ಗಳನ್ನು ಮುಂದುವರಿಸಲು ಅನುಕೂಲವಾಗಲಿದೆ ಎಂದು ಕಂಪನಿ ತಿಳಿಸಿದೆ.

ಉದ್ಯಮಗಳಿಗೆ, ವ್ಯಾಪಾರಿಗಳಿಗೆ ಪ್ರಯೋಜನ

ಹೊಸ ಆಯ್ಕೆಯಿಂದ ಉದ್ಯಮ ಸಂಸ್ಥೆಗಳಿಗೆ, ವ್ಯಾಪಾರಿಗಳಿಗೆ ಪ್ರಯೋಜನವಾಗಲಿದೆ. ಉದ್ಯಮ ಸಂಸ್ಥೆಗಳ ಉದ್ಯೋಗಿಗಳು ಒಂದೇ ಖಾತೆಯನ್ನು ನಾಲ್ಕು ಮೊಬೈಲ್​ಗಳಲ್ಲಿ ಬಳಸುವ ಮೂಲಕ ಗ್ರಾಹಕರ ಜತೆ ಸಂವಹನ ನಡೆಸಲು ಅನುಕೂಲವಾಗಲಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ಅಪ್​ಡೇಟ್​ ವಿಶ್ವದಾದ್ಯಂತ ಎಲ್ಲ ಬಳಕೆದಾರರಿಗೆ ದೊರೆಯಲಿದೆ ಎಂದು ಕಂಪನಿ ತಿಳಿಸಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Tue, 25 April 23

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು