WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್

WhatsApp Banned Indian Accounts: 500 ಮಿಲಿಯನ್​ಗೂ ಅಧಿಕ ಬಳಕೆದಾರರನ್ನು ಹೊಂದಿರುವ ವಾಟ್ಸ್​ಆ್ಯಪ್ ಇದೀಗ ಸೆಪ್ಟೆಂಬರ್‌ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ ಆಶ್ಚರ್ಯಕರವಾದ 10,442 ದೂರು ವರದಿಗಳನ್ನು ಸ್ವೀಕರಿಸಿದೆ. ದರಂತೆ 71,11,000 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ.

WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್
WhatsApp
Follow us
Vinay Bhat
|

Updated on: Nov 03, 2023 | 2:42 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ (WhatsApp) ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸೆಪ್ಟೆಂಬರ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 71,11,000 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ.

ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೂಡ 74ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು. ವಾಟ್ಸ್​ಆ್ಯಪ್​ ಭಾರತದಲ್ಲಿ ಹೆಚ್ಚು ವ್ಯಾಪಕವಾಗಿ ಬಳಸಲಾಗುವ ಸಂದೇಶ ಕಳುಹಿಸುವ ಅಪ್ಲಿಕೇಶನ್ ಆಗಿದೆ. 500 ಮಿಲಿಯನ್​ಗೂ ಅಧಿಕ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಕೇವಲ ಸೆಪ್ಟೆಂಬರ್‌ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ ಆಶ್ಚರ್ಯಕರವಾದ 10,442 ದೂರು ವರದಿಗಳನ್ನು ಸ್ವೀಕರಿಸಿದೆ. ಈ ವರದಿಗಳಿಗೆ ಪ್ರತಿಕ್ರಿಯೆಯಾಗಿ, ವಾಟ್ಸ್​ಆ್ಯಪ್​ ಖಾತೆಯನ್ನು ಬ್ಯಾನ್ ಮಾಡಿದೆ.

Flipkart Diwali sale 2023: 14,900 ರೂ.: ಫ್ಲಿಪ್‌ಕಾರ್ಟ್ ದೀಪಾವಳಿ ಸೇಲ್​ನಲ್ಲಿ ಐಫೋನ್ 14 ಗೆ ಬಂಪರ್ ಡಿಸ್ಕೌಂಟ್

ಇದನ್ನೂ ಓದಿ
Image
ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗುತ್ತಿದೆ ಬರೋಬ್ಬರಿ 11 ಸ್ಮಾರ್ಟ್​ಫೋನ್​ಗಳು
Image
ಸ್ಮಾರ್ಟ್‌ಫೋನ್‌ನ ಬ್ಯಾಕ್ ಕ್ಯಾಮೆರಾ ಪಕ್ಕದಲ್ಲಿ ಈ ಸಣ್ಣ ಹೋಲ್ ಯಾಕಿದೆ?
Image
ನಥಿಂಗ್ ಫೋನ್ 2 ಮೇಲೆ ಧಮಾಕ ಆಫರ್:ದೀಪಾವಳಿ ಡಿಸ್ಕೌಂಟ್​ನಲ್ಲಿ ಇಂದೇ ಖರೀದಿಸಿ
Image
108MP ಕ್ಯಾಮೆರಾದ ಹೊಸ ಹುವೈ ನೋವಾ 11 SE ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ