WhatsApp Ban: ಏಪ್ರಿಲ್ ತಿಂಗಳಲ್ಲಿ ಭಾರತದ 74 ಲಕ್ಷ ವಾಟ್ಸ್‌ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ
ವಾಟ್ಸ್‌ಆ್ಯಪ್ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,452,500 ವಾಟ್ಸ್‌ಆ್ಯಪ್ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ.
ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್‌ಆ್ಯಪ್ ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್‌ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಏಪ್ರಿಲ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್‌ಆ್ಯಪ್ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,452,500 ವಾಟ್ಸ್‌ಆ್ಯಪ್ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಮಾರ್ಚ್ ತಿಂಗಳಲ್ಲಿ ಕೂಡ ಭಾರತದಲ್ಲಿ 47 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್‌ಆ್ಯಪ್ ಹೇಳಿತ್ತು.
ಬ್ಯಾನ್ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು.
Galaxy F54 5G: ಜೂನ್ 6ಕ್ಕೆ ಗ್ಯಾಲಕ್ಸಿ F54 5G ಬಿಡುಗಡೆ: ಭಾರತಕ್ಕೆ ಬರುತ್ತಿದೆ 108MP ಕ್ಯಾಮೆರಾದ ಹೊಸ ಫೋನ್
ವಾಟ್ಸ್‌ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್‌ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ. ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.
ವಿಡಿಯೋ ಕರೆಯಲ್ಲಿ ಹೊಸ ಅನುಭವ:
ಹೊಸ ಅಪ್ಡೇಟ್ ಕುರಿತು ವಾಟ್ಸ್‌ಆ್ಯಪ್ ಒಂದು ಸುದ್ದಿ ಪ್ರಕಟಿಸಿದೆ. ಇದರ ಮೂಲಕ ಬಳಕೆದಾರರು ವಿಡಿಯೋ ಕರೆಯಲ್ಲಿ ಹೊಸ ಅನುಭವವನ್ನು ಪಡೆಯಬಹುದು. ಕೆಲವೇ ದಿನಗಳಲ್ಲಿ ವಾಟ್ಸ್‌ಆ್ಯಪ್ ತನ್ನ ಆಂಡ್ರಾಯ್ಡ್ ಬಳಕೆದಾರರಿಗೆ ವಿಡಿಯೋ ಕರೆ ಸಮಯದಲ್ಲಿ ತಮ್ಮ ಸ್ಕ್ರೀನ್ ಅನ್ನು ಸುಲಭವಾಗಿ ಶೇರ್ ಮಾಡಬಹುದಾದ ಆಯ್ಕೆಯನ್ನು ನೀಡುತ್ತಿದೆ. ಬಳಕೆದಾರರು ಕರೆ ನಿಯಂತ್ರಣ ವೀಕ್ಷಣೆಯಲ್ಲಿ ಹೊಸ ಐಕಾನ್ ಅನ್ನು ಕಾಣುತ್ತಾರೆ. ಅದನ್ನು ಬಳಸಿಕೊಂಡು ಅವರ ಸ್ಕ್ರೀನ್ ಅನ್ನು ಶೇರ್ ಮಾಡಲು ಪ್ರೇರೇಪಿಸಲಾಗುತ್ತದೆ. ಸ್ಕ್ರೀನ್ ಅನ್ನು ಶೇರ್ ಮಾಡಿದಾಗ ರೆಕಾರ್ಡ್ ಮಾಡಲಾಗುತ್ತದೆ ಮತ್ತು ಸ್ವೀಕರಿಸುವವರೊಂದಿಗೆ ಹಂಚಿಕೊಳ್ಳಲಾಗುತ್ತದೆ. ಈ ಆಯ್ಕೆಯು ಆಂಡ್ರಾಯ್ಡ್ ಆವೃತ್ತಿ ಸಂಖ್ಯೆ 2.23.11.19 ಗಾಗಿ ವಾಟ್ಸ್‌ಆ್ಯಪ್ ಬೀಟಾದೊಂದಿಗೆ ಬರುತ್ತದೆ. ಹೀಗಾಗಿ ಪ್ರಸ್ತುತ ಆಂಡ್ರಾಯ್ಡ್ ಬೀಟಾ ಪರೀಕ್ಷಕರಿಗೆ ಲಭ್ಯವಿದೆ. ಸದ್ಯದಲ್ಲೇ ಎಲ್ಲ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ