AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mi 11X Pro: 108MP ಕ್ಯಾಮೆರಾದ Mi 11X Pro ಸ್ಮಾರ್ಟ್​ಫೋನ್ ಬೆಲೆಯಲ್ಲಿ ಇಷ್ಟೊಂದು ಕಡಿತವೇ?: ಇದು ದೀಪಾವಳಿ ಆಫರ್

Diwali with Mi sale: ಶವೋಮಿ ಕಂಪನಿ ದೀಪಾವಳಿ ವಿತ್ ಎಂಐ ಮಾರಾಟ ಆಯೋಜಿಸಿದೆ. ಇದರಲ್ಲಿ ಎಂಐ 11X ಪ್ರೊ ಸ್ಮಾರ್ಟ್‌ಫೋನಿನ 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಕೇವಲ 30,999 ರೂ.ಗಳಿಗೆ ಲಭ್ಯ ಆಗುತ್ತಿದೆ.

Mi 11X Pro: 108MP ಕ್ಯಾಮೆರಾದ Mi 11X Pro ಸ್ಮಾರ್ಟ್​ಫೋನ್ ಬೆಲೆಯಲ್ಲಿ ಇಷ್ಟೊಂದು ಕಡಿತವೇ?: ಇದು ದೀಪಾವಳಿ ಆಫರ್
Mi 11X Pro Diwali with Mi sale
TV9 Web
| Updated By: ಡಾ. ಭಾಸ್ಕರ ಹೆಗಡೆ|

Updated on:Oct 28, 2021 | 4:13 PM

Share

ಹಬ್ಬಗಳು ಬಂತೆಂದರೆ ಸಾಕು ಪ್ರಸಿದ್ಧ ಇ ಕಾಮರ್ಸ್​ ಸೈಟ್​ಗಳಲ್ಲಿ ಆಫರ್​ಗಳ ಮಳೆವೇ ಸುರಿಯುತ್ತದೆ. ಅದರಂತೆ ಸದ್ಯ ದೀಪಾವಳಿ (Deepavali) ಹಬ್ಬ ಹತ್ತಿರವಾಗುತ್ತಿದೆ. ಇದರ ಪ್ರಯಕ್ತ ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಕಂಪನಿ ದೀಪಾವಳಿ ವಿತ್ ಎಂಐ (Diwali with Mi sale) ಮಾರಾಟ ಆಯೋಜಿಸಿದೆ. ಈ ಸೇಲ್​ನಲ್ಲಿ ಕೆಲವು ಆಯ್ದ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ಪ್ರಮುಖವಾಗಿ ಅಮೋಘ ಫೀಚರ್​ಗಳಿಂದ ಸ್ಮಾರ್ಟ್​ಫೋನ್ ಪ್ರಿಯರ ನಿದ್ದೆ ಕದ್ದಿರುವ ಶವೋಮಿ ಎಂಐ 11ಎಕ್ಸ್ ಪ್ರೊ (Mi 11X Pro) ಸ್ಮಾರ್ಟ್‌ಫೋನ್‌ ಸದ್ಯ ಬಂಪರ್ ಡಿಸ್ಕೌಂಟ್​ನಲ್ಲಿ ಸಿಗುತ್ತಿದೆ. 108 ಮೆಗಾಫಿಕ್ಸೆಲ್ ಕ್ಯಾಮೆರಾ, ಭರ್ಜರಿ ಬ್ಯಾಟರಿ, ಅತ್ಯುತ್ತಮ ಪ್ರೊಸೆಸರ್ ಸೇರಿದಂತೆ ಅನೇಕ ಫೀಚರ್ಸ್​ನಿಂದ ಈ ಸ್ಮಾರ್ಟ್​ಫೋನ್ (Smartphone) ಕೂಡಿದೆ.

ಎಂಐ 11X ಪ್ರೊ ಸ್ಮಾರ್ಟ್‌ಫೋನಿನ 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ದೀಪಾವಳಿ ಹಬ್ಬದ ಸೇಲ್‌ನಲ್ಲಿ ಈಗ ಕೇವಲ 30,999 ರೂ.ಗಳಿಗೆ ಲಭ್ಯ ಆಗುತ್ತಿದೆ. ಹಾಗೆಯೇ ಗ್ರಾಹಕರು ಬರೋಬ್ಬರಿ 9,000 ರೂ.ಗಳ ಎಕ್ಸ್‌ಚೇಂಜ್ ಕೊಡುಗೆ ಅನ್ನು ಸಹ ಪಡೆಯುತ್ತಾರೆ ಎಂದು ಕಂಪನಿಯು ಘೋಷಿಸಿದೆ. ಇದಲ್ಲದೇ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳೊಂದಿಗೆ 3,000 ರೂ. ತ್ವರಿತ ರಿಯಾಯಿತಿ ಸಹ ಸಿಗಲಿದೆ.

ಈ ಪ್ರೊ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಹೊಂದಿದೆ. ಸಿನಿಮಾ, ಯೂಟ್ಯೂಬ್ ವೀಡಿಯೊಗಳು ವೀಕ್ಷಣೆ ಮಾಡಲು ಪೂರಕವೆನಿಸಿದೆ. ಬ್ರೈಟ್ನೆಸ್‌ ಸಹ ಅತ್ಯುತ್ತಮವಾಗಿದ್ದು, ಹೆಚ್ಚು ಪ್ರಕಾಶಮಾನವಾಗಿ ಕಾಣುತ್ತದೆ.

ಬಲಿಷ್ಠವಾಗಿರುವ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಪೋರ್ಟ್ರೇಟ್ ಮೋಡ್, ನೈಟ್ ಮೋಡ್, 30 ಎಫ್‌ಪಿಎಸ್‌ನಲ್ಲಿ 4 ಕೆ ವೀಡಿಯೊಗಳು, ಬ್ಯೂಟಿ ಮೋಡ್, ವ್ಲಾಗ್ ಮೋಡ್ ಆಯ್ಕೆಗಳನ್ನು ನೀಡಲಾಗಿದೆ.

ಎಂಐ 11X ಪ್ರೊ ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಅತ್ಯುತ್ತಮ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ವೈ-ಫೈ 6, ಜಿಪಿಎಸ್, ಎಜಿಪಿಎಸ್, ನ್ಯಾವಿಕ್ ಬೆಂಬಲ, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲ ಪಡೆದುಕೊಂಡರೆ, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಹೈ-ರೆಸ್ ಆಡಿಯೋ ಸೇರಿದಂತೆ ಇತ್ತೀಚೆಗಿನ ಎಲ್ಲ ಅಪ್ಡೇಟ್​ಗಳನ್ನು ನೀಡಲಾಗಿದೆ.

Flipkart Big Diwali Sale: ಫ್ಲಿಪ್​ಕಾರ್ಟ್ ಬಿಗ್ ದೀಪಾವಳಿ ಸೇಲ್‌: ಪೊಕೊ ಸ್ಮಾರ್ಟ್​ಫೋನ್ ಖರೀದಿಸಲು ಕ್ಯೂ ನಿಂತ ಜನರು

Infinix Smart 6: ಅತಿ ಕಡಿಮೆ ಬೆಲೆಗೆ ಬಿಡುಗಡೆ ಆಯ್ತು ಮತ್ತೊಂದು ಆಕರ್ಷಕ ಸ್ಮಾರ್ಟ್​ಫೋನ್: ಇಲ್ಲಿದೆ ಮಾಹಿತಿ

(Mi 11X Pro with Snapdragon 888 SoC 108MP Camera can be bought just Rs 30999 during Diwali with Mi sale)

Published On - 4:03 pm, Thu, 28 October 21

4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ