Micromax IN2c: ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ನಾಳೆ ಅಪ್ಪಳಿಸಲಿದೆ ಬೊಂಬಾಟ್ ಫೀಚರ್ಸ್​​ನ ದೇಶೀಯ ಫೋನ್

ಮೈಕ್ರೋಮ್ಯಾಕ್ಸ್ ಕಂಪನಿ ಇದೀಗ ಮೈಕ್ರೋಮ್ಯಾಕ್ಸ್ ಇನ್2ಸಿ (Micromax IN2c) ಫೋನನ್ನು ಅನಾವರಣ ಮಾಡಲು ಸಜ್ಜಾಗಿದೆ. ಈ ಫೋನ್ ಭಾರತದಲ್ಲಿ ಏಪ್ರಿಲ್ 26 ಮಂಗಳವಾರದಂದು ರಿಲೀಸ್ ಆಗಲಿದೆ.

Micromax IN2c: ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ನಾಳೆ ಅಪ್ಪಳಿಸಲಿದೆ ಬೊಂಬಾಟ್ ಫೀಚರ್ಸ್​​ನ ದೇಶೀಯ ಫೋನ್
Micromax IN2c
Follow us
TV9 Web
| Updated By: Vinay Bhat

Updated on: Apr 25, 2022 | 1:21 PM

ಸ್ಮಾರ್ಟ್‌ಫೋನ್ (Smartphone) ಬ್ರ್ಯಾಂಡ್‌ಗಳಿಗೆ ಸ್ಪರ್ಧೆ ಒಡ್ಡಲು ಮತ್ತು ದೇಸಿ ಬ್ರ್ಯಾಂಡ್ ಪ್ರಚಾರದೊಂದಿಗೆ ಮಾರುಕಟ್ಟೆ ಗೆಲ್ಲಲು ಮೈಕ್ರೋಮ್ಯಾಕ್ಸ್ ಮತ್ತೆ ಬಂದಿದೆ. ದೇಶದಲ್ಲಿ ಮೈಕ್ರೋಮ್ಯಾಕ್ಸ್‌ ಇನ್ ನೋಟ್ 2 (Micromax IN Note 2) ಬಿಡುಗಡೆ ಮಾಡಿ ಭಾರೀ ಸದ್ದು ಮಾಡಿದ್ದ ಕಂಪನಿ ಇದೀಗ ಮೈಕ್ರೋಮ್ಯಾಕ್ಸ್ ಇನ್2ಸಿ (Micromax IN2c) ಫೋನನ್ನು ಅನಾವರಣ ಮಾಡಲು ಸಜ್ಜಾಗಿದೆ. ಈ ಫೋನ್ ಭಾರತದಲ್ಲಿ ಏಪ್ರಿಲ್ 26 ಮಂಗಳವಾರದಂದು ರಿಲೀಸ್ ಆಗಲಿದೆ. ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮೈಕ್ರೋಮ್ಯಾಕ್ಸ್‌ ನಾಳೆ (ಏಪ್ರಿಲ್ 26) ತನ್ನ ನೂತನ ಮೈಕ್ರೋಮ್ಯಾಕ್ಸ್ IN2c ಸ್ಮಾರ್ಟ್‌ಫೋನನ್ನು ದೇಶದಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಬಗ್ಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಕೂಡ ಮಾಹಿತಿ ಹಂಚಿಕೊಂಡಿದೆ.

ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಮೈಕ್ರೋಮ್ಯಾಕ್ಸ್ IN2c UNISOC T610 ಚಿಪ್‌ಸೆಟ್ ಮತ್ತು ಬೃಹತ್ 5,000mAh ಬ್ಯಾಟರಿಯಿಂದ ಚಾಲಿತವಾಗಲಿದೆ ಎಂದು ಫ್ಲಿಪ್‌ಕಾರ್ಟ್ ಬಹಿರಂಗಪಡಿಸಿದೆ. ಇದು ಬಜೆಟ್ ಬೆಲೆಗೆ ಲಭ್ಯವಾಗಲಿದ್ದು 10,000 ರೂ. ಆಸುಪಾಸಿನಲ್ಲಿ ಇರಬಹುದು. 6.52-ಇಂಚಿನ HD+ ಡಿಸ್‌ಪ್ಲೇ ಜೊತೆಗೆ 420 nits ಬ್ರೈಟ್‌ನೆಸ್ ಮತ್ತು 89 ಪ್ರತಿಶತ ಪರದೆಯ ಸ್ಥಳವನ್ನು ಹೊಂದಿರಲಿದೆ ಎಂಬ ಮಾಹಿತಿಯಿದೆ.

ಇನ್ನು ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್ ಸೆಲ್ಫಿಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾದೊಂದಿಗೆ ಬರಲಿದೆ ಎನ್ನಲಾಗಿದೆ. ಅಂತೆಯೆ ಹಿಂಭಾಗವು 8 ಮೆಗಾಫಿಕ್ಸೆಲ್​ನ ಮುಖ್ಯ ಕ್ಯಾಮೆರಾ ಮತ್ತು VGA ಸಂವೇದಕವನ್ನು ಹೊಂದಿರಬಹುದು ಎಂದು ಹೇಳಿದೆ. 4GB ಮತ್ತು 6GB ಎಂಬ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಸಬಹುದು. ಮೈಕ್ರೋಮ್ಯಾಕ್ಸ್ IN2c ಸ್ಮಾರ್ಟ್​​ಫೋನ್​ನಲ್ಲಿ ಹೆಚ್ಚುವರಿ ಸಂಗ್ರಹಣೆಗಾಗಿ ಮೈಕ್ರೊ SD ಕಾರ್ಡ್ ಸ್ಲಾಟ್‌ನೊಂದಿಗೆ ಬರುತ್ತದೆ. Android 11 OS, USB-C ಪೋರ್ಟ್ ಮತ್ತು 3.5mm ಆಡಿಯೊ ಜ್ಯಾಕ್‌ನಂತಹ ಇತರ ವೈಶಿಷ್ಟ್ಯಗಳನ್ನು ಹೊಂದಿರುವ ಪೋನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಹೊಂದಿರುವುದಿಲ್ಲ ಎಂದು ತಿಳಿಸಲಾಗಿದೆ.

ಮೈಕ್ರೋಮ್ಯಾಕ್ಸ್ ಇನ್‌ ನೋಟ್‌ 1 ಹೇಗಿದೆ?:

ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕಪ್ ನೀಡಲಾಗಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4G, ಡ್ಯುಯಲ್-VOLTE, ಬ್ಲೂಟೂತ್ 5.0, GPS ಮತ್ತು USB ಟೈಪ್-ಸಿ ಪೋರ್ಟ್‌ ಅನ್ನು ಬೆಂಬಲಿಸುತ್ತದೆ. ಇದರ 6GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯದ ಫೋನಿಗೆ 11,999 ರೂ. ಇದೆ.

Best Smartphone: ಭರ್ಜರಿ ಸೇಲ್ ಕಾಣುತ್ತಿದೆ 20,000 ರೂ. ಒಳಗಿನ ಈ ಹೊಸ 4 ಸ್ಮಾರ್ಟ್​​ಫೋನ್​ಗಳು

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ