Micromax In 2c: ಮಾರುಕಟ್ಟೆಗೆ ಬಂತು ದೇಶೀಯ ಸ್ಮಾರ್ಟ್​​ಫೋನ್: ವಿದೇಶಿ ಬ್ರ್ಯಾಂಡ್​ಗಳಿಗೆ ಶುರುವಾಯ್ತು ನಡುಕ

ಮೈಕ್ರೋಮ್ಯಾಕ್ಸ್ ಕಂಪನಿ ಇದೀಗ ಮೈಕ್ರೋಮ್ಯಾಕ್ಸ್ ಇನ್2ಸಿ (Micromax IN2c) ಫೋನನ್ನು ಅನಾವರಣ ಮಾಡಿದೆ. ಈ ಫೋನ್ ಭಾರತದಲ್ಲಿ ಇಂದು ರಿಲೀಸ್ ಆಗಲಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಭಾರತದಲ್ಲಿ ಲಾಂಚ್‌ ಆಗಿದ್ದ ಮೈಕ್ರೋಮ್ಯಾಕ್ಸ್‌ In 2b ಮಾದರಿಯನ್ನು ಹೋಲುತ್ತದೆ.

Micromax In 2c: ಮಾರುಕಟ್ಟೆಗೆ ಬಂತು ದೇಶೀಯ ಸ್ಮಾರ್ಟ್​​ಫೋನ್: ವಿದೇಶಿ ಬ್ರ್ಯಾಂಡ್​ಗಳಿಗೆ ಶುರುವಾಯ್ತು ನಡುಕ
Micromax In 2c
Follow us
TV9 Web
| Updated By: Vinay Bhat

Updated on: Apr 26, 2022 | 3:20 PM

ಸ್ಮಾರ್ಟ್‌ಫೋನ್ (Smartphone) ಬ್ರ್ಯಾಂಡ್‌ಗಳಿಗೆ ಸ್ಪರ್ಧೆ ಒಡ್ಡಲು ಮತ್ತು ದೇಸಿ ಬ್ರ್ಯಾಂಡ್ ಪ್ರಚಾರದೊಂದಿಗೆ ಮಾರುಕಟ್ಟೆ ಗೆಲ್ಲಲು ಮೈಕ್ರೋಮ್ಯಾಕ್ಸ್ ಮತ್ತೆ ಬಂದಿದೆ. ದೇಶದಲ್ಲಿ ಮೈಕ್ರೋಮ್ಯಾಕ್ಸ್‌ ಇನ್ ನೋಟ್ 2 (Micromax IN Note 2) ಬಿಡುಗಡೆ ಮಾಡಿ ಭಾರೀ ಸದ್ದು ಮಾಡಿದ್ದ ಕಂಪನಿ ಇದೀಗ ಮೈಕ್ರೋಮ್ಯಾಕ್ಸ್ ಇನ್2ಸಿ (Micromax IN2c) ಫೋನನ್ನು ಅನಾವರಣ ಮಾಡಿದೆ. ಈ ಫೋನ್ ಭಾರತದಲ್ಲಿ ಇಂದು ರಿಲೀಸ್ ಆಗಲಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಭಾರತದಲ್ಲಿ ಲಾಂಚ್‌ ಆಗಿದ್ದ ಮೈಕ್ರೋಮ್ಯಾಕ್ಸ್‌ In 2b ಮಾದರಿಯನ್ನು ಹೋಲುತ್ತದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​​ಫೋನ್ ವಾಟರ್‌ಡ್ರಾಪ್ ಶೈಲಿಯ ಡಿಸ್‌ಪ್ಲೇ ನಾಚ್‌ನೊಂದಿಗೆ ಬರುತ್ತದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌, 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಆಯ್ಕೆಗಳನ್ನು ನೀಡಲಾಗಿದೆ. ಹಾಗಾದ್ರೆ ಮೈಕ್ರೋಮ್ಯಾಕ್ಸ್ ಇನ್ 2c ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಮೈಕ್ರೋಮ್ಯಾಕ್ಸ್‌ In 2c ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ರಿಲೀಸ್ ಆಗಿದೆ. ಇದರ 3GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕೆ 8,499 ರೂ. ನಿಗದಿ ಮಾಡಲಾಗಿದೆ. ವಿಶೇಷ ಆಫರ್ ಕೂಡ ಘೋಷಿಸಲಾಗಿದ್ದು ಲಾಂಚ್‌ ಆಫರ್‌ನ ಆರಂಭದಲ್ಲಿ 7,499 ರೂ. ಗಳಿಗೆ ನಿಮ್ಮದಾಗಿಸಬಹುದು. ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಮೈಕ್ರೋಮ್ಯಾಕ್ಸ್ ಅಧಿಕೃತ ಸೈಟ್‌ನಲ್ಲಿ ಮೇ 1 ರಿಂದ ಮೈಕ್ರೋಮ್ಯಾಕ್ಸ್ ಇನ್ 2c ಸೇಲ್ ಶುರುವಾಗಲಿದೆ.

ಏನು ವಿಶೇಷತೆ?:

ಮೈಕ್ರೋಮ್ಯಾಕ್ಸ್ ಇನ್ 2c ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಆಕ್ಟಾ-ಕೋರ್ ಯೂನಿಸೋಕ್‌ T610 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ ಪ್ರತ್ಯೇಕ ಡೆಪ್ತ್ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಫೇಸ್ ಬ್ಯೂಟಿ, ನೈಟ್ ಮೋಡ್ ಮತ್ತು ಪೋರ್ಟ್ರೇಟ್ ಮೋಡ್ ಫೀಚರ್ಸ್‌ಗಳನ್ನು ಬೆಂಬಲಿಸಲಿದೆ. ಮೈಕ್ರೋಮ್ಯಾಕ್ಸ್ ಇನ್‌ 2c ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಪ್ರಮಾಣಿತ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸಿಂಗಲ್‌ ಚಾರ್ಜ್‌ನಲ್ಲಿ 16 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅಥವಾ 50 ಗಂಟೆಗಳ ಟಾಕ್ ಟೈಮ್ ಅನ್ನು ನೀಡಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿದಂತೆ ನೂತನ ಮಾದರಿಯ ಎಲ್ಲ ಆಯ್ಕೆಗಳಿವೆ.

Nokia G21: ಬಿಡುಗಡೆಯಾದ ದಿನವೇ ಭರ್ಜರಿ ಸದ್ದು ಮಾಡುತ್ತಿದೆ ನೋಕಿಯಾದ ಹೊಸ ಸ್ಮಾರ್ಟ್​ಫೋನ್

WhatsApp: ವಾಟ್ಸ್​​ಆ್ಯಪ್​​ನಲ್ಲಿರುವ ಮಲ್ಟಿಡಿವೈಸ್ ಆಯ್ಕೆಯನ್ನು ಅನ್​ಲಿಂಕ್ ಮಾಡುವುದು ಹೇಗೆ?

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್