Micromax IN Note 2: ಚೀನಾ ಮೊಬೈಲ್​ಗಳಿಗೆ ಶಾಕ್ ಕೊಡಲು ರೆಡಿಯಾದ ಭಾರತೀಯ ಸ್ಮಾರ್ಟ್​ಫೋನ್: ಸದ್ಯದಲ್ಲೇ ರಿಲೀಸ್

ಭಾರತದಲ್ಲಿ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್‌ ನೋಟ್‌ 2 (Micromax IN Note 2) ಫೋನ್‌ ಬಿಡುಗಡೆಗೆ ಸಿದ್ದವಾಗಿದೆ. ಇದೇ ಜನವರಿ 25 ರಂದು ಈ ಫೋನ್ ಅನಾವರಣಗೊಳ್ಳಲಿದೆ.

Micromax IN Note 2: ಚೀನಾ ಮೊಬೈಲ್​ಗಳಿಗೆ ಶಾಕ್ ಕೊಡಲು ರೆಡಿಯಾದ ಭಾರತೀಯ ಸ್ಮಾರ್ಟ್​ಫೋನ್: ಸದ್ಯದಲ್ಲೇ ರಿಲೀಸ್
Micromax IN Note 2
Follow us
| Updated By: Vinay Bhat

Updated on: Jan 23, 2022 | 12:10 PM

ಚೀನಾ ಮೂಲದ ಸ್ಮಾರ್ಟ್‌ಫೋನ್ (Smartphone) ಬ್ರ್ಯಾಂಡ್‌ಗಳಿಗೆ ಸ್ಪರ್ಧೆ ಒಡ್ಡಲು ಮತ್ತು ದೇಸಿ ಬ್ರ್ಯಾಂಡ್ ಪ್ರಚಾರದೊಂದಿಗೆ ಮಾರುಕಟ್ಟೆ ಗೆಲ್ಲಲು ಮೈಕ್ರೋಮ್ಯಾಕ್ಸ್ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಇದರ ಮೊದಲ ಹೆಜ್ಜೆಯಾಗಿ ಕಳೆದ ವರ್ಷ ಬಿಡುಗಡೆ ಮಾಡಿದ್ದ ಮೈಕ್ರೋಮ್ಯಾಕ್ಸ್‌ ಇನ್ ನೋಟ್ 1 (Micromax IN Note 1) ಸರಣಿಯ ಮುಂದಿನ ಆವೃತ್ತಿ ಬಿಡುಗಡೆ ಮಾಡಲು ಕಂಪನಿ ತಯಾರಿ ಆರಂಭಿಸಿದೆ. ಹೌದು, ಭಾರತದಲ್ಲಿ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್‌ ನೋಟ್‌ 2 (Micromax IN Note 2) ಫೋನ್‌ ಬಿಡುಗಡೆಗೆ ಸಿದ್ದವಾಗಿದೆ. ಇದೇ ಜನವರಿ 25 ರಂದು ಈ ಫೋನ್ ಅನಾವರಣಗೊಳ್ಳಲಿದೆ. ಕಂಪನಿ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಬಗ್ಗೆ ಯಾವುದೇ ವಿವರವನ್ನು ಬಹಿರಂಗಪಡಿಸಿಲ್ಲ. ಆದರೆ ಟೀಸರ್ ಮೈಕ್ರೋಮ್ಯಾಕ್ಸ್‌ ಇನ್ ನೋಟ್ 2 ಡ್ಯಾಜ್ಲಿಂಗ್ ಗ್ಲಾಸ್ ಫಿನಿಶ್ ಅನ್ನು ಹೊಂದಿರುತ್ತದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಮೈಕ್ರೋಮ್ಯಾಕ್ಸ್‌ ಇನ್‌ ನೋಟ್‌ 2 ಸ್ಮಾರ್ಟ್‌ಫೋನ್‌ 6.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇದು ಮೀಡಿಯಾ ಟೆಕ್ ಹಿಲಿಯೋ G95 SoC ಪ್ರೊಸೆಸರ್‌ ಬಲವನ್ನು ಪಡೆದಿರುವ ಸಾಧ್ಯತೆ ಇದೆಯಂತೆ. ಜೊತೆಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಹಾಗೆಯೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರುವ ಸಾದ್ಯತೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಫೋನ್ ಬ್ರೌನ್ ಮತ್ತು ಬ್ಲ್ಯಾಕ್ ಕಲರ್‌ ಆಯ್ಕೆಯಲ್ಲಿ ಬರಲಿದೆ ಎಂದು ಕಂಪನಿಯು ಬಹಿರಂಗಪಡಿಸಿದೆ.

ಈ ಹಿಂದೆ ಬಿಡುಗಡೆ ಮಾಡಿದ್ದ ಮೈಕ್ರೋಮ್ಯಾಕ್ಸ್ ಇನ್ ನೋಟ್ 1 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕಪ್ ನೀಡಲಾಗಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4G, ಡ್ಯುಯಲ್-VOLTE, ಬ್ಲೂಟೂತ್ 5.0, GPS ಮತ್ತು USB ಟೈಪ್-ಸಿ ಪೋರ್ಟ್‌ ಅನ್ನು ಬೆಂಬಲಿಸುತ್ತದೆ. ಇದರ 6GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯದ ಫೋನಿಗೆ 11,999 ರೂ. ಇದೆ.

Xiaomi 11T Pro 5G: ಈ 120W ಹೈಪರ್ ಚಾರ್ಜರ್ ಫೋನ್ ಖರೀದಿಸಬಹುದೇ?: ಒಮ್ಮೆ ಇಲ್ಲಿ ಗಮನಿಸಿ

Samsung Galaxy S21 FE: ಬೊಂಬಾಟ್ ಕ್ಯಾಮೆರಾ-ಬ್ಯಾಟರಿಯ ಗ್ಯಾಲಕ್ಸಿ S21 FE 5G ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ