Microsoft Teams Down: ಮೈಕ್ರೋಸಾಫ್ಟ್ ಸರ್ವರ್ ಡೌನ್; ಭಾರತದ ಬಳಕೆದಾರರಿಗೆ ತೊಂದರೆ

ಸಮಸ್ಯೆ ಇರುವುದನ್ನು ಮೈಕ್ರೋಸಾಫ್ಟ್ ಒಪ್ಪಿಕೊಂಡಿದೆ. ಮೈಕ್ರೋಸಾಫ್ಟ್​​ 365ನ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗಿರುವ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಕಂಪನಿ ಟ್ವೀಟ್ ಮಾಡಿದೆ.

Microsoft Teams Down: ಮೈಕ್ರೋಸಾಫ್ಟ್ ಸರ್ವರ್ ಡೌನ್; ಭಾರತದ ಬಳಕೆದಾರರಿಗೆ ತೊಂದರೆ
ಮೈಕ್ರೋಸಾಫ್ಟ್Image Credit source: AFP
Follow us
Ganapathi Sharma
|

Updated on:Jan 25, 2023 | 3:10 PM

ನವದೆಹಲಿ: ಮೈಕ್ರೋಸಾಫ್ಟ್ (Microsoft) ಸೇವೆಗಳಾದ ಎಂಎಸ್ ಟೀಮ್ಸ್, ಔಟ್​​ಲುಕ್, ಅಜೂರ್ ಹಾಗೂ ಮೈಕ್ರೋಸಾಫ್ಟ್ 365 ಸರ್ವರ್​ ಡೌನ್ ಆಗಿದ್ದು, ಭಾರತದ ಬಳಕೆದಾರರಿಗೆ ತೊಂದರೆಯಾಗಿದೆ. ಟೀಮ್ಸ್​ ಸರ್ವರ್ ಡೌನ್ ಆಗಿರುವ ಬಗ್ಗೆ ಡೌನ್​ಡಿಟೆಕ್ಟರ್ (Downdetector) ತಾಣದಲ್ಲಿ ಸುಮಾರು 3,500ರಷ್ಟು ಮಂದಿ ವರದಿ ಮಾಡಿದ್ದಾರೆ. ಲಿಂಕ್ಡ್​ಇನ್ ಸರ್ವರ್ ಕೂಡ ಡೌನ್ ಆಗಿದೆ ಎಂದು ವರದಿಯಾಗಿದೆ. ಭಾರತದಲ್ಲಿನ ಸುಮಾರು 3,000 ಮಂದಿ ಔಟ್​ಲುಕ್ ಬಳಕೆದಾರರೂ ಸರ್ವರ್ ಡೌನ್ ಬಗ್ಗೆ ರಿಪೋರ್ಟ್ ಮಾಡಿದ್ದಾರೆ. ಸಮಸ್ಯೆ ಇರುವುದನ್ನು ಮೈಕ್ರೋಸಾಫ್ಟ್ ಒಪ್ಪಿಕೊಂಡಿದೆ. ಮೈಕ್ರೋಸಾಫ್ಟ್​​ 365ನ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗಿರುವ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಕಂಪನಿ ಟ್ವೀಟ್ ಮಾಡಿದೆ. ಮೈಕ್ರೋಸಾಫ್ಟ್ ಅಜೂರ್​ ಪಬ್ಲಿಕ್ ಕ್ಲೌಡ್ ಪ್ಲಾಟ್​ಫಾರ್ಮ್​ ಸರ್ವರ್ ಕೂಡ ಡೌನ್ ಆಗಿದೆ. ಮೈಕ್ರೋಸಾಫ್ಟ್​ನ ಅನೇಕ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನಿಗದಿಯಾಗಿರುವ ಕರೆಗಳನ್ನು ಸ್ವೀಕರಿಸಲೂ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಈ ಮಧ್ಯೆ, ಮೈಕ್ರೋಸಾಫ್ಟ್ ಸೇವೆಗಳು ಡೌನ್ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಸಂದೇಶಗಳು ಹರಿದಾಡುತ್ತಿವೆ. ಮೈಕ್ರೋಸಾಫ್ಟ್ ಅನ್ನು ಹಾಸ್ಯ ಮಾಡಿರುವ ಸಂದೇಶಗಳೂ ಟ್ವಿಟರ್​​ನಲ್ಲಿ ಪ್ರಕಟಗೊಂಡಿವೆ. ಮೈಕ್ರೋಸಾಫ್ಟ್ ತಪ್ಪಾಗಿ ಉದ್ಯೋಗಿಗಳನ್ನು ವಜಾಗೊಳಿಸಿದೆಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ‘ಮೈಕ್ರೋಸಾಫ್ಟ್ ಡೌನ್ ಆಗಿದೆ. ನನ್ನ ಕೆಲವು ಸಹೋದ್ಯೋಗಿಗಳು ಕೆಲಸದಿಂದ ವಜಾಗೊಂಡೆವೇ’ ಎಂದು ಭಾವಿಸಿದರು ಎಂದು ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದಾರೆ. ‘ರಾಷ್ಟ್ರಮಟ್ಟದ ರಜಾ ದಿನದ ಹಿಂದಿನ ದಿನವೇ ಮೈಕ್ರೋಸಾಫ್ಟ್ ಡೌನ್ ಆಗಿದೆ. ಇದು ಬೇಗನೇ ಲಾಗೌಟ್ ಆಗಿ ಎಂದು ದೇವರು ನೀಡಿರುವ ಸಂದೇಶವೇ’ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಎಲ್ಲೆಲ್ಲಿ ಮೈಕ್ರೋಸಾಫ್ಟ್ ಸರ್ವರ್ ಡೌನ್?

ಭಾರತ ಮಾತ್ರವಲ್ಲದೆ ಇತರ ಕೆಲವು ದೇಶಗಳಲ್ಲಿಯೂ ಮೈಕ್ರೋಸಾಫ್ಟ್ ಸರ್ವರ್ ಡೌನ್ ಆಗಿದೆ. ಜಪಾನ್​ನಲ್ಲಿ ಸುಮಾರು 900 ಮಂದಿ ಸರ್ವರ್ ಡೌನ್ ಆಗಿರುವ ಬಗ್ಗೆ ರಿಪೋರ್ಟ್ ಮಾಡಿದ್ದಾರೆ. ಉಳಿದಂತೆ ಆಸ್ಟ್ರೇಲಿಯಾ, ಬ್ರಿಟನ್, ಯುಎಇಯಲ್ಲಿ ಕೂಡ ಮೈಕ್ರೋಸಾಫ್ಟ್ ಸರ್ವರ್ ಡೌನ್ ಆಗಿದೆ ಎಂದು ವರದಿಯಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Wed, 25 January 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ