Mobile Blast: ಬಾಂಬ್​ನಂತೆ ಸ್ಪೋಟಗೊಂಡ ಶವೋಮಿ ಕಂಪನಿಯ ಸ್ಮಾರ್ಟ್​ಫೋನ್: ನಿಮ್ಮ ಬಳಿ ಇದೆಯೇ ಈ ಫೋನ್?

Vinay Bhat

|

Updated on:Mar 18, 2023 | 1:15 PM

Xiaomi 11 Lite NE 5G Blast: ಇತ್ತೀಚೆಗಷ್ಟೆ ಸ್ಯಾಮ್​ಸಂಗ್, ಒನ್​ಪ್ಲಸ್ ನಾರ್ಡ್ ಸ್ಮಾರ್ಟ್​ಫೋನ್​ಗಳು ಸ್ಪೋಟಗೊಂಡಿದ್ದು ಬಳಕೆದಾರರಲ್ಲಿ ಭಯ ಹುಟ್ಟಿಸಿತ್ತು. ಇದೀಗ ಶವೋಮಿ ಸರದಿ. ಶವೋಮಿ 2021 ರಲ್ಲಿ ಬಿಡುಗಡೆ ಮಾಡಿದ್ದ ಶವೋಮಿ 11 ಲೈಟ್ ಎನ್​ಇ 5ಜಿ ಸ್ಮಾರ್ಟ್​ಫೋನ್ ಬ್ಲಾಸ್ಟ್ ಆದ ಬಗ್ಗೆ ವರದಿ ಆಗಿದೆ.

Mobile Blast: ಬಾಂಬ್​ನಂತೆ ಸ್ಪೋಟಗೊಂಡ ಶವೋಮಿ ಕಂಪನಿಯ ಸ್ಮಾರ್ಟ್​ಫೋನ್: ನಿಮ್ಮ ಬಳಿ ಇದೆಯೇ ಈ ಫೋನ್?
xiaomi 11 lite ne 5g

ಇಂದು ಸ್ಮಾರ್ಟ್​ಫೋನ್​ಗಳನ್ನು ಬಳಸದಿರುವವರ ಸಂಖ್ಯೆ ತೀರಾ ಕಡಿಮೆ. ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳು ಸಿಗುತ್ತಿರುವ ಕಾರಣ ಮಾರುಕಟ್ಟೆಯಲ್ಲಿ ಮೊಬೈಲ್​ಗಳು ಎಗ್ಗಿಲ್ಲದೆ ಸೇಲ್ ಆಗುತ್ತದೆ. ಇದರ ಜೊತೆಗೆ ಕಳೆದ ಕೆಲವು ವರ್ಷಗಳಿಂದ ಸ್ಮಾರ್ಟ್​ಫೋನ್‌ಗಳು ಸ್ಫೋಟಗೊಳ್ಳುವ (Mobile Blast) ಸಂಗತಿಗಳು ಕೂಡ ಹೆಚ್ಚುತ್ತಿದೆ. ಮೊಬೈಲ್ ಸ್ಪೋಟಗೊಂಡ ಸುದ್ದಿ ಇತ್ತೀಚಿನ ದಿನಗಳಲ್ಲಿ ವರದಿ ಆಗುತ್ತಲೇ ಇದೆ. ಇದರಿಂದ ಜೀವ ಹಾನಿ ಸಂಭವಿಸಿದ್ದೂ ಇದೆ. ಇತ್ತೀಚೆಗಷ್ಟೆ ಸ್ಯಾಮ್​ಸಂಗ್ (Samsung), ಒನ್​ಪ್ಲಸ್ ನಾರ್ಡ್ ಸ್ಮಾರ್ಟ್​ಫೋನ್​ಗಳು ಸ್ಪೋಟಗೊಂಡಿದ್ದು ಬಳಕೆದಾರರಲ್ಲಿ ಭಯ ಹುಟ್ಟಿಸಿತ್ತು. ಇದೀಗ ಶವೋಮಿ ಸರದಿ. ಶವೋಮಿ ಕಂಪನಿ 2021 ರಲ್ಲಿ ಬಿಡುಗಡೆ ಮಾಡಿದ್ದ ಶವೋಮಿ 11 ಲೈಟ್ ಎನ್​ಇ 5ಜಿ (Xiaomi 11 Lite NE 5G) ಸ್ಮಾರ್ಟ್​ಫೋನ್ ಬ್ಲಾಸ್ಟ್ ಆದ ಬಗ್ಗೆ ವರದಿ ಆಗಿದೆ.

91ಮೊಬೈಲ್ಸ್‌ ಮಾಡಿರುವ ವರದಿಯ ಪ್ರಕಾರ, ಈ ಘಟನೆ ಬಿಹಾರದ ಭಾಗಲ್‌ಪುರ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಮೊಹಿಯುದ್ದೀನ್ ನಗರದಲ್ಲಿ ವಾಸಿಸುವ ವ್ಯಕ್ತಿಯ ಶವೋಮಿ ಫೋನ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಈ ವ್ಯಕ್ತಿಯು 91ಮೊಬೈಲ್ಸ್​ಗೆ ವಿಡಿಯೋವನ್ನು ಶೇರ್ ಮಾಡಿದ್ದು, ಇದರಲ್ಲಿ ಹಾಸಿಗೆಯ ಮೇಲಿರುವ ಫೋನ್​ಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಫೋನ್​ಗೆ ಬೆಂಕಿ ಹೊತ್ತಿಕೊಂಡಾ ಈ ಮೊಬೈಲ್ ಚಾರ್ಜರ್‌ಗೆ ಸಂಪರ್ಕಗೊಂಡಿರಲಿಲ್ಲ. ಹಾಸಿಗೆಯ ಮೇಲೆ ಇಟ್ಟಿದ್ದ ಶವೋಮಿ 11 ಲೈಟ್ NE 5G ಫೋನ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಹೊಗೆ ಬರಲು ಪ್ರಾರಂಭವಾಗಿದೆ.

Galaxy A54 5G: ಒಂದೇ ದಿನ ಎರಡು ಬೊಂಬಾಟ್ ಸ್ಮಾರ್ಟ್​ಫೋನ್ಸ್ ಬಿಡುಗಡೆ ಮಾಡಿದ ಸ್ಯಾಮ್​ಸಂಗ್: ಯಾವುವು?, ಏನು ವಿಶೇಷತೆ?

ಇದನ್ನೂ ಓದಿ

ಈ ಘಟನೆಯಿಂದ ಯಾರೂ ಗಾಯಗೊಂಡಿಲ್ಲ ಎಂದು ತಿಳಿದುಬಂದಿದೆ. ಆದರೆ, ಈ ಸ್ಮಾರ್ಟ್​ಫೋನ್​ನಲ್ಲಿ ಯಾವ ಕಾರಣಕ್ಕಾಗಿ ಬೆಂಕಿ ಕಾಣಿಸಿಕೊಂಡಿತು ಎಂಬುದು ಸ್ಪಷ್ಟವಾಗಿಲ್ಲ. ಸ್ಪೋಟದ ಬಗ್ಗೆ ತನಿಖೆ ನಡೆಸಿದ ನಂತರ, ಬ್ಯಾಟರಿಯಲ್ಲಿ ಪಂಕ್ಚರ್ ಗುರುತುಗಳು ಕಂಡುಬಂದಿವೆ. ಅಂದರೆ ಫೋನ್ ಸ್ಫೋಟಗೊಳ್ಳುವಲ್ಲಿ ಗ್ರಾಹಕರ ತಪ್ಪೇ ಹೊರತು ಕಂಪನಿಯ ತಪ್ಪಲ್ಲ ಎಂದು ಕಂಪನಿ ಹೇಳಿದೆ. ಅಚ್ಚರಿ ಎಂದರೆ ಭಾರತದಲ್ಲೇ ಈರೀತಿಯ ಪ್ರಕರಣಗಳು ಹೆಚ್ಚಾಗಿ ವರದಿ ಆಗುತ್ತಿದೆ. ಹಾಗಾದ್ರೆ ಯಾವುದೇ ಸ್ಮಾರ್ಟ್‌ಫೋನ್‌ ಬ್ಲಾಸ್ಟ್ ಆಗುವ ಮುನ್ನ ಅದರ ಲಕ್ಷಣಗಳು ಯಾವುವು? ಮತ್ತು ನಾವು ಸ್ಮಾರ್ಟ್‌ಫೋನ್ ಬ್ಲಾಸ್ಟ್ ಆಗದಂತೆ ಹೇಗೆ ಎಚ್ಚರ ವಹಿಸಬೇಕು ಎಂಬುದನ್ನು ನೋಡೋಣ.

ಸ್ಮಾರ್ಟ್‌ಫೋನ್ ಬ್ಲಾಸ್ಟ್ ಆಗದಂತೆ ಹೇಗೆ ಎಚ್ಚರ ವಹಿಸಬೇಕು?:

  • ನಿಮ್ಮ ಫೋನ್‌ನ ಬ್ಯಾಟರಿ ಬೇಗನೆ ಬಿಸಿಯಾಗುತ್ತಿದ್ದರೆ, ಅಥವಾ ನಿಮ್ಮ ಫೋನ್ ಹಿಂಬಾಗದಲ್ಲಿ ಬ್ಯಾಟರಿ ಊದಿಕೊಂಡಂತೆ ಕಾಣಿಸಿದರೆ ಅಂತಹ ಬ್ಯಾಟರಿಯನ್ನು ಕೂಡಲೇ ಬದಲಾಯಿಸಿಬಿಡಿ. ಏಕೆಂದರೆ, ಬ್ಯಾಟರಿ ಒಳಗಿನ ಸೆಲ್ಟ್ ತೀರ್ವತೆಯಿಂದ ಅದು ಯಾವಾಗ ಬೇಕಾದರು ಸ್ಪೋಟಗೊಳ್ಳಬಹುದು. ಹೆಚ್ಚಿನ ಮೊಬೈಲ್ ಸ್ಪೋಟಗೊಳ್ಳಲು ಮುಖ್ಯ ಕಾರಣ ಇದುವೇ ಆಗಿರುತ್ತದೆ.
  • ನಿಮ್ಮ ಫೋನ್‌ನಲ್ಲಿ ನೀಡಿರುವ ಚಾರ್ಜರ್ ಬಿಟ್ಟು ಇತರೆ ಚಾರ್ಜರ್ ಬಳಕೆ ಮಾಡಿದರೆ ಸ್ಮಾರ್ಟ್‌ಪೋನ್‌ಗಳು ಸ್ಪೋಟಗೊಳ್ಳುವ ಅವಕಾಶಗಳೇ ಹೆಚ್ಚು. ಒಂದು ಫೋನ್‌ಗೂ ಮತ್ತು ಇನ್ನೊಂದು ಫೋನ್‌ ಚಾರ್ಜಿಂಗ್ ಸ್ಟ್ರೆಂತ್ ಬದಲಾಗಿರುತ್ತದೆ. ಹೆಚ್ಚು ಚಾರ್ಜ್ ಪ್ರವಹಿಸುವ ಚಾರ್ಜರ್‌ನಿಂದ ಫೋನ್ ಸ್ಪೋಟಗೊಳ್ಳುವ ಸಾಧ್ಯತೆಯಿರುತ್ತದೆ.
  • ಈಗಂತು 200W ವರೆಗಿನ ಚಾರ್ಜರ್ ಮಾರುಕಟ್ಟೆಯಲ್ಲಿದೆ. ಇದು ನಿಮ್ಮ ಮೊಬೈಲ್​ಗೆ ಸಪೋರ್ಟ್ ಮಾಡುತ್ತದೆ ನಿಜ. ಆದರೆ, ಆ ವೇಗವನ್ನು ತಡೆದುಕೊಳ್ಳುವ ಶಕ್ತಿ ನಿಮ್ಮ ಮೊಬೈಲ್ ಬ್ಯಾಟರಿಗೆ ಇದೆಯೇ ಎಂಬುದನ್ನು ಪರಿಶೀಲಿಸಿ.
  • ನೇರವಾಗಿ ಸೂರ್ಯನ ಕಿರಣಗಳು ಬೀಳುವ ಜಾಗದಲ್ಲಿ ಫೋನನ್ನು ಇಟ್ಟು, ಚಾರ್ಜ್ ಮಾಡಬೇಡಿ. ಅಥವಾ ಬಿಸಿಯಾಗಿರುವ ಜಾಗಗಳು ಉದಾಹರಣೆಗೆ ಕಾರಿನ ಡ್ಯಾಶ್ ಬೋರ್ಡ್ ಬಳಿ ಇಟ್ಟು ಹೆಚ್ಚು ಘಂಟೆಗಳ ಕಾಲ ಮೊಬೈಲ್ ಚಾರ್ಜ್ ಮಾಡಬೇಡಿ. ಹೆಚ್ಚು ಬಿಸಿ ಇರುವ ಜಾಗದಲ್ಲಿ ಮೊಬೈಲ್ ಇಡುವುದು ಕೂಡ ಅಪಾಯ.
  • ಮೊಬೈಲ್ ಫೋನುಗಳು ಸಾಮಾನ್ಯವಾಗಿ ಸಹಿಸಿಕೊಳ್ಳುವುದು ಕೇವಲ 0 ಯಿಂದ 45 ಡಿಗ್ರಿ ಸೆಂಟಿಗ್ರೇಡ್ ನ ತಾಪವನ್ನು ಮಾತ್ರ. ಜಾಗರೂಕತೆ ಮಾರ್ಗಗಳಲ್ಲಿ ಪ್ರಮುಖವಾದ ವಿಚಾರವೆಂದರೆ ಪವರ್ ಸ್ಟ್ರಿಪ್ ಗಳನ್ನು ಬಳಸಿ ಅಥವಾ ಎಕ್ಸ್ ಟೆಷನ್ ಕಾರ್ಡ್ ಗಳನ್ನುಬಳಸಿ ಮೊಬೈಲ್ ಚಾರ್ಜ್ ಮಾಡಬೇಡಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada