AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ: ಎಂದಿಗೂ ಹೀಗೆ ಮಾಡಿದಿರಿ: ನಿಮ್ಮ ಮೊಬೈಲ್ ಕೂಡ ಬ್ಲಾಸ್ಟ್ ಆಗಬಹುದು

ನಿಮ್ಮ ಫೋನ್‌ನ ಬ್ಯಾಟರಿ ಬೇಗನೆ ಬಿಸಿಯಾಗುತ್ತಿದ್ದರೆ, ಅಥವಾ ನಿಮ್ಮ ಫೋನ್ ಹಿಂಬಾಗದಲ್ಲಿ ಬ್ಯಾಟರಿ ಊದಿಕೊಂಡತೆ ಕಾಣಿಸಿದರೆ ಅಂತಹ ಬ್ಯಾಟರಿಯನ್ನು ಕೂಡಲೇ ಬದಲಾಯಿಸಿಬಿಡಿ.

ಎಚ್ಚರ: ಎಂದಿಗೂ ಹೀಗೆ ಮಾಡಿದಿರಿ: ನಿಮ್ಮ ಮೊಬೈಲ್ ಕೂಡ ಬ್ಲಾಸ್ಟ್ ಆಗಬಹುದು
ಸಾಂದರ್ಭಿಕ ಚಿತ್ರ
TV9 Web
| Updated By: Vinay Bhat|

Updated on: Aug 22, 2021 | 3:22 PM

Share

ಈಗೀಗ ಮೊಬೈಲ್ ಬ್ಲಾಸ್ಟ್ (Mobile Blast) ಆಗುತ್ತಿರುವ ಸುದ್ದಿಗಳು ಹೆಚ್ಚಾಗುತ್ತಿವೆ. ಇದರಿಂದ ಜೋಬಿನಲ್ಲಿ ಫೋನ್ ಇಟ್ಟುಕೊಳ್ಳವುದೇ ಬಹುದೊಡ್ಡ ಹೆದರಿಕೆಯಾಗಿದೆ. ಯಾವ ಕ್ಷಣದಲ್ಲಿ ನನ್ನ ಮೊಬೈಲ್ ಕೂಡ ಬ್ಲಾಸ್ಟ್ ಆಗಿಬಿಡುತ್ತದೆಯೂ, ನನ್ನ ಫೊನ್ ಬ್ಲಾಸ್ಟ್ ಆದರೆ ಏನು ಕಥೆ? ಎಂಬ ಭಯ ಕಾಡುತ್ತಿರುತ್ತದೆ. ಮೊಬೈಲ್​ಗಳು ಹಾಗೆ ಸುಮ್ಮನೆ ಬ್ಲಾಸ್ಟ್ ಆಗುವುದಿಲ್ಲ. ಹಾಗಾದ್ರೆ ಯಾವುದೇ ಸ್ಮಾರ್ಟ್‌ಫೋನ್‌ ಬ್ಲಾಸ್ಟ್ ಆಗುವ ಮುನ್ನ ಅದರ ಲಕ್ಷಣಗಳು ಯಾವುವು? ಮತ್ತು ನಾವು ಸ್ಮಾರ್ಟ್‌ಫೋನ್ ಬ್ಲಾಸ್ಟ್ ಆಗದಂತೆ ಹೇಗೆ ಎಚ್ಚರ ವಹಿಸಬೇಕು ಎಂಬುದನ್ನು ತಿಳಿಸಿಕೊಳ್ಳೋಣ.

ನಿಮ್ಮ ಫೋನ್‌ನ ಬ್ಯಾಟರಿ ಬೇಗನೆ ಬಿಸಿಯಾಗುತ್ತಿದ್ದರೆ, ಅಥವಾ ನಿಮ್ಮ ಫೋನ್ ಹಿಂಬಾಗದಲ್ಲಿ ಬ್ಯಾಟರಿ ಊದಿಕೊಂಡತೆ ಕಾಣಿಸಿದರೆ ಅಂತಹ ಬ್ಯಾಟರಿಯನ್ನು ಕೂಡಲೇ ಬದಲಾಯಿಸಿಬಿಡಿ. ಏಕೆಂದರೆ, ಬ್ಯಾಟರಿ ಒಳಗಿನ ಸೆಲ್ಟ್ ತೀರ್ವತೆಯಿಂದ ಅದು ಯಾವಾಗ ಬೇಕಾದರು ಸ್ಪೋಟಗೊಳ್ಳಬಹುದು.

ನಿಮ್ಮ ಫೋನ್‌ನಲ್ಲಿ ನೀಡಿರುವ ಚಾರ್ಜರ್ ಬಿಟ್ಟು ಇತರೆ ಚಾರ್ಜರ್ ಬಳಕೆ ಮಾಡಿದರೆ ಸ್ಮಾರ್ಟ್‌ಪೋನ್‌ಗಳು ಸ್ಪೋಟಗೊಳ್ಳುವ ಅವಕಾಶಗಳೇ ಹೆಚ್ಚು. ಒಂದು ಫೋನ್‌ಗೂ ಮತ್ತು ಇನ್ನೊಂದು ಫೋನ್‌ಚಾರ್ಜಿಂಗ್ ಸ್ಟ್ರೆಂತ್ ಬದಲಾಗಿರುತ್ತದೆ. ಹೆಚ್ಚು ಚಾರ್ಜ್ ಪ್ರವಹಿಸುವ ಚಾರ್ಜರ್‌ನಿಂದ ಫೋನ್ ಸ್ಪೋಟಗೊಳ್ಳುವ ಸಾಧ್ಯತೆಯಿರುತ್ತದೆ.

ಇನ್ನೂ ಅತೀ ಹೆಚ್ಚು ಘಂಟೆಗಳ ಕಾಲ ಮೊಬೈಲ್ ಅನ್ನು ಚಾರ್ಜ್​ಗೆ ಹಾಕಿಡುವ ಅಭ್ಯಾಸ ಇದ್ದರೆ ಇಂದಿನಿಂದಲೇ ಬಿಟ್ಟುಬಿಡಿ. ನಿಮ್ಮ ಫೋನ್ ಶೇಕಡಾ 90ರಷ್ಟು ಚಾರ್ಜ್ ಆದ ಕೂಡಲೇ ಅನ್ ಪ್ಲಗ್ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.

ಅಂತೆಯೆ ನೇರವಾಗಿ ಸೂರ್ಯನ ಕಿರಣಗಳು ಬೀಳುವ ಜಾಗದಲ್ಲಿ ಫೋನನ್ನು ಇಟ್ಟು, ಚಾರ್ಜ್ ಮಾಡಬೇಡಿ. ಅಥವಾ ಬಿಸಿಯಾಗಿರುವ ಜಾಗಗಳು ಉದಾಹರಣೆಗೆ ಕಾರಿನ ಡ್ಯಾಶ್ ಬೋರ್ಡ್ ( ಬೆಳಗಿನ ಹೊತ್ತಿನಲ್ಲಿ) ಬಳಿ ಇಟ್ಟು ಹೆಚ್ಚು ಘಂಟೆಗಳ ಕಾಲ ಮೊಬೈಲ್ ಚಾರ್ಜ್ ಮಾಡಬೇಡಿ.

ಮೊಬೈಲ್ ಫೋನುಗಳು ಸಾಮಾನ್ಯವಾಗಿ ಸಹಿಸಿಕೊಳ್ಳುವುದು ಕೇವಲ 0 ಯಿಂದ 45 ಡಿಗ್ರಿ ಸೆಂಟಿಗ್ರೇಡ್ ನ ತಾಪವನ್ನು ಮಾತ್ರ. ಜಾಗರೂಕತೆ ಮಾರ್ಗಗಳಲ್ಲಿ ಪ್ರಮುಖವಾದ ವಿಚಾರವೆಂದರೆ ಪವರ್ ಸ್ಟ್ರಿಪ್ ಗಳನ್ನು ಬಳಸಿ ಅಥವಾ ಎಕ್ಸ್ ಟೆಷನ್ ಕಾರ್ಡ್ ಗಳನ್ನುಬಳಸಿ ಮೊಬೈಲ್ ಚಾರ್ಜ್ ಮಾಡಬೇಡಿ.ಯಾವುದೇ ಡಿವೈಸ್ ಆಗಿರಲಿ, ಅದರಲ್ಲಿರುವ ಯಾವುದೇ ಒಂದು ಕಾರ್ಡ್ ಎಫೆಕ್ಟ್ ಗೆ ಒಳಗಾದರೂ, ನಿಮ್ಮ ಸ್ಮಾರ್ಟ್ ಫೋನ್ ಗೂ ಡ್ಯಾಮೇಜ್ ತಂದೊಡ್ಡುತ್ತದೆ.

Micromax IN 2B: ಭಾರತದಲ್ಲಿ ಭರ್ಜರಿ ಸೇಲ್ ಕಾಣುತ್ತಿರುವ ದೇಶೀಯ ಸ್ಮಾರ್ಟ್​ಫೋನ್: ಬೆಲೆಯಲ್ಲಿ ಏರಿಕೆ!

ಬಿಎಸ್​ಎನ್​ಎಲ್, ಜಿಯೋ, ಏರ್ಟೆಲ್​ನಿಂದ ಒಂದೇ ದರದ ಪ್ಲಾನ್: ಎಷ್ಟು ಜಿಬಿ ಡೇಟಾ?, ವ್ಯಾಲಿಡಿಟಿ?

(Mobile blast Here is the reasons smartphone explode and how you can prevent it from happening)

ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ