ಒಂದು ಸಿಮ್​ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು?: ಈ ವಿಚಾರ ನಿಮಗೆ ತಿಳಿದಿರಲಿ

Mobile Number Portability: ಒಂದು ನೆಟ್‌ವರ್ಕ್‌ನಿಂದ ಮತ್ತೊಂದು ನೆಟ್‌ವರ್ಕ್‌ಗೆ ಮೊಬೈಲ್ ನಂಬರ್ ಅನ್ನು ನೀವು ಪೋರ್ಟ್ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ. ಅನೇಕರಿಗೆ ಈ ಬಗ್ಗೆ ತಿಳಿದಿರುವುದಿಲ್ಲ. ಈ ಸ್ಟೋರಿ.

ಒಂದು ಸಿಮ್​ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು?: ಈ ವಿಚಾರ ನಿಮಗೆ ತಿಳಿದಿರಲಿ
Mobile Number Port
Follow us
TV9 Web
| Updated By: Vinay Bhat

Updated on:Oct 12, 2021 | 2:38 PM

ಇಂದಿನ ಡಿಜಿಟಲ್ (Digital) ಯುಗದಲ್ಲಿ ಬಹುತೇಕ ಕೆಲಸಗಳು ಫೋನ್ (Phone) ಮೂಲಕವೇ ನಡೆಯುವುದರಿಂದ ಮೊಬೈಲ್​ನಲ್ಲಿ ಸಿಮ್ (Sim card), ನೆಟ್​ವರ್ಕ್ (Mobile Netwrok), ಡೇಟಾ (Mobile Data) ಬಹುಮುಖ್ಯ. ಆದರೆ, ಕೆಲವು ಸಿಮ್​ಗಳಲ್ಲಿ ನಿಧಾನಗತಿಯ ವೇಗ, ಕೆಲವೊಂದು ಪ್ರದೇಶದಲ್ಲಿ ಅಸಮರ್ಪಕ ನೆಟ್‌ವರ್ಕ್ ಕವರೇಜ್ ಅಥವಾ ಇತರೆ ಕಾರಣಗಳಿಗಾಗಿ ಬಳಕೆದಾರರು ಮೊಬೈಲ್‌ ನಂಬರ್ ಪೋರ್ಟ್‌ (Mobile Number Port) ಮಾಡಲು ಮುಂದಾಗುತ್ತಾರೆ. ಅಂದರೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸದೆ ಒಂದು ನೆಟವರ್ಕ್‌ನಿಂದ ಇನ್ನೊಂದು ನೆಟವರ್ಕ್‌ಗೆ ಸೇವೆಯನ್ನು ಬದಲಾಯಿಸುವ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ ಸೌಲಭ್ಯ. ಅನೇಕರಿಗೆ ಒಂದು ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು?, ಟ್ರಾಯ್ ಹೊಸ ನಿಯಮ ಏನು?, ಪೋರ್ಟ್ ಮಾಡಲು ಸುಲಭ ದಾರಿ ಯಾವುದು? ಎಂಬ ಬಗ್ಗೆ ತಿಳಿದಿರುವುದಿಲ್ಲ. ಹಾಗಿದ್ರೆ ಈ ಸ್ಟೋರಿ.

ಒಂದು ನೆಟ್‌ವರ್ಕ್‌ನಿಂದ ಮತ್ತೊಂದು ನೆಟ್‌ವರ್ಕ್‌ಗೆ ಮೊಬೈಲ್ ನಂಬರ್ ಅನ್ನು ನೀವು ಪೋರ್ಟ್ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ. ದೇಶದಲ್ಲಿ ಕಳೆದ ವರ್ಷದ ಅಂತ್ಯದಲ್ಲಿ ಹೊಸ ಎಂಎನ್‌ಪಿ, ಅಂದರೆ ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳನ್ನು ಜಾರಿಗೆ ತರಲಾಗಿತ್ತು. ಇದರಿಂದಾಗಿ ಗ್ರಾಹಕರು ಯಾವುದೇ ಸಮಸ್ಯೆಯಿಲ್ಲದೆ ಸುಲಭದಲ್ಲಿ ಮೊಬೈಲ್ ನಂಬರ್ ಪೋರ್ಟ್ ಮಾಡಿಕೊಳ್ಳಬಹುದು. ಅಲ್ಲದೆ ಒಂದು ಮೊಬೈಲ್ ಸಂಖ್ಯೆಯನ್ನು ನೀವು ಎಷ್ಟು ಬಾರಿ ಬೇಕಾದರೂ ಪೋರ್ಟ್ ಮಾಡಬಹುದು. ಇದಕ್ಕೆ ಯಾವುದೇ ನಿರ್ದಿಷ್ಟ ತಡೆಯಿಲ್ಲ.

ಆದರೆ, ನಿಮ್ಮ ಮೊಬೈಲ್ ನಂಬರ್ ಪೋರ್ಟ್ ಆಗಬೇಕು ಎಂದರೆ ಕೆಲವು ವಿಚಾರಗಳನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು. ನೀವು ಮೊಬೈಲ್ ನಂಬರ್ ಮತ್ತೊಂದು ನೆಟ್‌ವರ್ಕ್‌ಗೆ ಪೋರ್ಟ್ ಮಾಡಿಕೊಳ್ಳಲು ಬಯಸಿದ್ದರೆ, ಅದಕ್ಕೂ ಮುಂಚೆ ಹಳೆಯ ಕಂಪನಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲ ಬಿಲ್ ಮೊತ್ತವನ್ನು ಪಾವತಿಸಿರಬೇಕು. ಅಂದರೆ ವಿಶೇಷವಾಗಿ, ಪೋಸ್ಟ್ ಪೋಯ್ಡ್ ಗ್ರಾಹಕರು, ತಿಂಗಳ ಬಿಲ್ ಮೊತ್ತ ಬಾಕಿ ಉಳಿಸಿಕೊಂಡಿದ್ದರೆ, ಅದನ್ನು ಟೆಲಿಕಾಂ ಸೇವಾದಾರ ಕಂಪನಿಗೆ ಪಾಲಿಸುವುದು ಕಡ್ಡಾಯ. ಬಾಕಿ ಉಳಿಸಿಕೊಂಡಿದ್ದರೆ, ಪೋರ್ಟಿಂಗ್ ಸಾಧ್ಯವಾಗುವುದಿಲ್ಲ.

ಯಾವುದೇ ನೆಟ್‌ವರ್ಕ್‌ಗೆ ಪೋರ್ಟ್ ಆಗಬೇಕಾದರೂ, ಪ್ರಸ್ತುತ ಇರುವ ನೆಟ್‌ವರ್ಕ್‌ನಲ್ಲಿ ಕನಿಷ್ಟ 90 ದಿನ ಪೂರೈಸಬೇಕು. ಅದಕ್ಕೂ ಮುಂಚೆ ಮತ್ತೊಂದು ನೆಟ್‌ವರ್ಕ್‌ಗೆ ಪೋರ್ಟ್ ಸಾಧ್ಯವಿಲ್ಲ. ಅಲ್ಲದೆ, ಸಿಮ್ ಕಾರ್ಡ್ ಹೊಂದಿರುವ ವ್ಯಕ್ತಿ ಮತ್ತೋರ್ವ ವ್ಯಕ್ತಿಗೆ ಮಾಲಿಕತ್ವ ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದ್ದರೆ, ಅಂತಹ ಸಂದರ್ಭದಲ್ಲಿ ಎಂಎನ್‌ಪಿ ಸಾಧ್ಯವಾಗುವುದಿಲ್ಲ.

ಮೊಬೈಲ್‌ ನಂಬರ್ ಪೋರ್ಟ್ ಮಾಡಲು ಈ ಕ್ರಮಗಳನ್ನು ಅನುಸರಿಸಿ:

  • ಸಿಮ್ ಪೋರ್ಟ್‌ ಮಾಡಲು UPC (ಯೂನಿಕ್ ಪೋರ್ಟಿಂಗ್ ಕೋಡ್) ಅಗತ್ಯ.
  • ಅದಕ್ಕಾಗಿ ಮೊದಲು UPC (ಯೂನಿಕ್ ಪೋರ್ಟಿಂಗ್ ಕೋಡ್) ಜನರೇಟ್ ಮಾಡಬೇಕು.
  • ಕ್ಯಾಪಿಟಲ್ ಅಕ್ಷರಗಳಲ್ಲಿ PORT-ಸ್ಪೇಸ್‌-ನಿಮ್ಮ ನೊಬೈಲ್ ಸಂಖ್ಯೆ ನಮೂದಿಸಿ. 1900 ನಂಬರ್‌ಗೆ ಎಸ್‌ಎಮ್‌ಎಸ್‌ ಮಾಡಿ.
  • ಆ ಬಳಿಕ UPC ಎಸ್‌ಎಮ್‌ಎಸ್‌ ಲಭ್ಯವಾಗುತ್ತದೆ.
  • ಪೋರ್ಟ್ ಆಗ ಬಯಸುವ ಟೆಲಿಕಾಂ ಸಂಸ್ಥೆಯ ಸರ್ವೀಸ್ ಸೆಂಟರ್‌ಗೆ ಭೇಟಿ ನೀಡಿ.
  • Customer Acquisition Form (CAF) ತುಂಬುವುದು ಮತ್ತು ಕೆವೈಸಿ ದಾಖಲಾತಿ ನೀಡಬೇಕು.

ಟೆಲಿಕಾಂ ವಲಯದಲ್ಲಿ ಎಮ್‌ಎನ್‌ಪಿ ಸೌಲಭ್ಯವು ಚಂದಾದಾರರಿಗೆ ಉಪಯುಕ್ತವಾಗಿದ್ದು, ಒಂದು ಆಪರೇಟರ್‌ನಿಂದ ಇನ್ನೊಂದು ಟೆಲಿಕಾಂ ಆಪರೇಟರ್‌ಗೆ ಬದಲಾಯಿಸಬಹುದಾಗಿದೆ. ಈ ಎಮ್‌ಎನ್‌ಪಿ ಬದಲಾವಣೆಯು ಯಶಸ್ವಿಯಾಗಲು ಸುಮಾರು ಒಂದು ವಾರ ಆಗುತ್ತಿತ್ತು. ಆದ್ರೆ ಟ್ರಾಯ್‌ನ ಹೊಸ ಎಮ್‌ಎನ್‌ಪಿ ನಿಯಮ ಜಾರಿಯಿಂದ ಈಗ ಐದು ದಿನಗಳ ಬಳಗಾಗಿ ಸಿಮ್‌ ಫೋರ್ಟ್ ಆಗಲಿದೆ.

Flipkart Big Billion Days sale 2021: ಐಪೋನ್ ಖರೀದಿಸಲು ಈಗ ಹೆಚ್ಚು ಹಣ ಬೇಡ: ಕೇವಲ 30,000 ರೂ. ಇದ್ದರೆ ಸಾಕು

OnePlus 9RT: ಬಿಡುಗಡೆಗೆ ಸಜ್ಜಾದ ವಿಶೇಷ ವಿನ್ಯಾಸದ ಒನ್​ಪ್ಲಸ್ 9RT ಸ್ಮಾರ್ಟ್​ಫೋನ್: ಇದರಲ್ಲಿದೆ ಸಾಕಷ್ಟು ವಿಶೇಷತೆ

(Mobile number portability how many times one sim can be ported to ather network)

Published On - 2:38 pm, Tue, 12 October 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್