ಇಂದಿನ ಡಿಜಿಟಲ್ (Digital) ಯುಗದಲ್ಲಿ ಬಹುತೇಕ ಕೆಲಸಗಳು ಫೋನ್ (Phone) ಮೂಲಕವೇ ನಡೆಯುವುದರಿಂದ ಮೊಬೈಲ್ನಲ್ಲಿ ಸಿಮ್ (Sim card), ನೆಟ್ವರ್ಕ್ (Mobile Netwrok), ಡೇಟಾ (Mobile Data) ಬಹುಮುಖ್ಯ. ಆದರೆ, ಕೆಲವು ಸಿಮ್ಗಳಲ್ಲಿ ನಿಧಾನಗತಿಯ ವೇಗ, ಕೆಲವೊಂದು ಪ್ರದೇಶದಲ್ಲಿ ಅಸಮರ್ಪಕ ನೆಟ್ವರ್ಕ್ ಕವರೇಜ್ ಅಥವಾ ಇತರೆ ಕಾರಣಗಳಿಗಾಗಿ ಬಳಕೆದಾರರು ಮೊಬೈಲ್ ನಂಬರ್ ಪೋರ್ಟ್ (Mobile Number Port) ಮಾಡಲು ಮುಂದಾಗುತ್ತಾರೆ. ಅಂದರೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸದೆ ಒಂದು ನೆಟವರ್ಕ್ನಿಂದ ಇನ್ನೊಂದು ನೆಟವರ್ಕ್ಗೆ ಸೇವೆಯನ್ನು ಬದಲಾಯಿಸುವ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ ಸೌಲಭ್ಯ. ಅನೇಕರಿಗೆ ಒಂದು ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು?, ಟ್ರಾಯ್ ಹೊಸ ನಿಯಮ ಏನು?, ಪೋರ್ಟ್ ಮಾಡಲು ಸುಲಭ ದಾರಿ ಯಾವುದು? ಎಂಬ ಬಗ್ಗೆ ತಿಳಿದಿರುವುದಿಲ್ಲ. ಹಾಗಿದ್ರೆ ಈ ಸ್ಟೋರಿ.
ಒಂದು ನೆಟ್ವರ್ಕ್ನಿಂದ ಮತ್ತೊಂದು ನೆಟ್ವರ್ಕ್ಗೆ ಮೊಬೈಲ್ ನಂಬರ್ ಅನ್ನು ನೀವು ಪೋರ್ಟ್ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ. ದೇಶದಲ್ಲಿ ಕಳೆದ ವರ್ಷದ ಅಂತ್ಯದಲ್ಲಿ ಹೊಸ ಎಂಎನ್ಪಿ, ಅಂದರೆ ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳನ್ನು ಜಾರಿಗೆ ತರಲಾಗಿತ್ತು. ಇದರಿಂದಾಗಿ ಗ್ರಾಹಕರು ಯಾವುದೇ ಸಮಸ್ಯೆಯಿಲ್ಲದೆ ಸುಲಭದಲ್ಲಿ ಮೊಬೈಲ್ ನಂಬರ್ ಪೋರ್ಟ್ ಮಾಡಿಕೊಳ್ಳಬಹುದು. ಅಲ್ಲದೆ ಒಂದು ಮೊಬೈಲ್ ಸಂಖ್ಯೆಯನ್ನು ನೀವು ಎಷ್ಟು ಬಾರಿ ಬೇಕಾದರೂ ಪೋರ್ಟ್ ಮಾಡಬಹುದು. ಇದಕ್ಕೆ ಯಾವುದೇ ನಿರ್ದಿಷ್ಟ ತಡೆಯಿಲ್ಲ.
ಆದರೆ, ನಿಮ್ಮ ಮೊಬೈಲ್ ನಂಬರ್ ಪೋರ್ಟ್ ಆಗಬೇಕು ಎಂದರೆ ಕೆಲವು ವಿಚಾರಗಳನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು. ನೀವು ಮೊಬೈಲ್ ನಂಬರ್ ಮತ್ತೊಂದು ನೆಟ್ವರ್ಕ್ಗೆ ಪೋರ್ಟ್ ಮಾಡಿಕೊಳ್ಳಲು ಬಯಸಿದ್ದರೆ, ಅದಕ್ಕೂ ಮುಂಚೆ ಹಳೆಯ ಕಂಪನಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲ ಬಿಲ್ ಮೊತ್ತವನ್ನು ಪಾವತಿಸಿರಬೇಕು. ಅಂದರೆ ವಿಶೇಷವಾಗಿ, ಪೋಸ್ಟ್ ಪೋಯ್ಡ್ ಗ್ರಾಹಕರು, ತಿಂಗಳ ಬಿಲ್ ಮೊತ್ತ ಬಾಕಿ ಉಳಿಸಿಕೊಂಡಿದ್ದರೆ, ಅದನ್ನು ಟೆಲಿಕಾಂ ಸೇವಾದಾರ ಕಂಪನಿಗೆ ಪಾಲಿಸುವುದು ಕಡ್ಡಾಯ. ಬಾಕಿ ಉಳಿಸಿಕೊಂಡಿದ್ದರೆ, ಪೋರ್ಟಿಂಗ್ ಸಾಧ್ಯವಾಗುವುದಿಲ್ಲ.
ಯಾವುದೇ ನೆಟ್ವರ್ಕ್ಗೆ ಪೋರ್ಟ್ ಆಗಬೇಕಾದರೂ, ಪ್ರಸ್ತುತ ಇರುವ ನೆಟ್ವರ್ಕ್ನಲ್ಲಿ ಕನಿಷ್ಟ 90 ದಿನ ಪೂರೈಸಬೇಕು. ಅದಕ್ಕೂ ಮುಂಚೆ ಮತ್ತೊಂದು ನೆಟ್ವರ್ಕ್ಗೆ ಪೋರ್ಟ್ ಸಾಧ್ಯವಿಲ್ಲ. ಅಲ್ಲದೆ, ಸಿಮ್ ಕಾರ್ಡ್ ಹೊಂದಿರುವ ವ್ಯಕ್ತಿ ಮತ್ತೋರ್ವ ವ್ಯಕ್ತಿಗೆ ಮಾಲಿಕತ್ವ ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದ್ದರೆ, ಅಂತಹ ಸಂದರ್ಭದಲ್ಲಿ ಎಂಎನ್ಪಿ ಸಾಧ್ಯವಾಗುವುದಿಲ್ಲ.
ಮೊಬೈಲ್ ನಂಬರ್ ಪೋರ್ಟ್ ಮಾಡಲು ಈ ಕ್ರಮಗಳನ್ನು ಅನುಸರಿಸಿ:
ಟೆಲಿಕಾಂ ವಲಯದಲ್ಲಿ ಎಮ್ಎನ್ಪಿ ಸೌಲಭ್ಯವು ಚಂದಾದಾರರಿಗೆ ಉಪಯುಕ್ತವಾಗಿದ್ದು, ಒಂದು ಆಪರೇಟರ್ನಿಂದ ಇನ್ನೊಂದು ಟೆಲಿಕಾಂ ಆಪರೇಟರ್ಗೆ ಬದಲಾಯಿಸಬಹುದಾಗಿದೆ. ಈ ಎಮ್ಎನ್ಪಿ ಬದಲಾವಣೆಯು ಯಶಸ್ವಿಯಾಗಲು ಸುಮಾರು ಒಂದು ವಾರ ಆಗುತ್ತಿತ್ತು. ಆದ್ರೆ ಟ್ರಾಯ್ನ ಹೊಸ ಎಮ್ಎನ್ಪಿ ನಿಯಮ ಜಾರಿಯಿಂದ ಈಗ ಐದು ದಿನಗಳ ಬಳಗಾಗಿ ಸಿಮ್ ಫೋರ್ಟ್ ಆಗಲಿದೆ.
Flipkart Big Billion Days sale 2021: ಐಪೋನ್ ಖರೀದಿಸಲು ಈಗ ಹೆಚ್ಚು ಹಣ ಬೇಡ: ಕೇವಲ 30,000 ರೂ. ಇದ್ದರೆ ಸಾಕು
OnePlus 9RT: ಬಿಡುಗಡೆಗೆ ಸಜ್ಜಾದ ವಿಶೇಷ ವಿನ್ಯಾಸದ ಒನ್ಪ್ಲಸ್ 9RT ಸ್ಮಾರ್ಟ್ಫೋನ್: ಇದರಲ್ಲಿದೆ ಸಾಕಷ್ಟು ವಿಶೇಷತೆ
(Mobile number portability how many times one sim can be ported to ather network)
Published On - 2:38 pm, Tue, 12 October 21