ಭಾರತಕ್ಕೆ ಬಂದೇ ಬಿಡ್ತು 200MP ಕ್ಯಾಮೆರಾದ ಹಾನರ್ 90 ಫೋನ್: ಬೆಲೆ ಎಷ್ಟು ನೋಡಿ

|

Updated on: Sep 14, 2023 | 3:01 PM

Honor 90 5G was launched in India: ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆಯೊಂದಿಗೆ ಬಹುನಿರೀಕ್ಷಿತ ಹಾನರ್ 90 5G ಸ್ಮಾರ್ಟ್​ಫೋನ್ ಭಾರತೀಯ ಮಾರುಕಟ್ಟೆಗೆ ಅಪ್ಪಳಿಸಿದೆ. ಈ ಫೋನ್ ದೇಶದಲ್ಲಿ ಸೆಪ್ಟೆಂಬರ್ 18 ರಿಂದ ಮಧ್ಯಾಹ್ನ 12 ಗಂಟೆಗೆ ಹಾನರ್​ನ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.

ಭಾರತಕ್ಕೆ ಬಂದೇ ಬಿಡ್ತು 200MP ಕ್ಯಾಮೆರಾದ ಹಾನರ್ 90 ಫೋನ್: ಬೆಲೆ ಎಷ್ಟು ನೋಡಿ
Honor 90 5G
Follow us on

ಭಾರತದಲ್ಲಿ ಬಿಡುಗಡೆಗೂ ಮುನ್ನ, ಕಳೆದ ಒಂದು ತಿಂಗಳುಗಳಿಂದ ಸಾಕಷ್ಟು ಕುತೂಹಲ ಕೆರಳಿಸಿದ್ದ ಹಾನರ್ ಕಂಪನಿಯ ಬಹುನಿರೀಕ್ಷಿತ ಸ್ಮಾರ್ಟ್​ಫೋನ್ ಹಾನರ್ 90 5G (Honor 90 5G) ಇದೀಗ ಅನಾವರಣಗೊಂಡಿದೆ. ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆಯೊಂದಿಗೆ ಈ ಫೋನ್ ಭಾರತೀಯ ಮಾರುಕಟ್ಟೆಗೆ ಅಪ್ಪಳಿಸಿದೆ. ಇದು ಕ್ವಾಲ್ಕಂ ಸ್ನಾಪ್​ಡ್ರಾಗನ್​ನ ಬಲಿಷ್ಠ ಪ್ರೊಸೆಸರ್ ಹೊಂದಿದ್ದು, 66W ವೈರ್ಡ್ ಸೂಪರ್‌ಚಾರ್ಜ್ ತಂತ್ರಜ್ಞಾನದೊಂದಿಗೆ 5,000mAh ಬ್ಯಾಟರಿ ಕೂಡ ಇದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಹಾನರ್ 90 5G ಬೆಲೆ, ಲಭ್ಯತೆ:

ಭಾರತದಲ್ಲಿ ಹಾನರ್ 90 5G ಸ್ಮಾರ್ಟ್​ಫೋನ್ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 8GB + 256GB ರೂಪಾಂತರಕ್ಕೆ 37,999 ರೂ. ಇದೆ. ಅಂತೆಯೆ 12GB + 512GB ಸ್ಟೋರೇಜ್ ರೂಪಾಂತರದ ಬೆಲೆ 39,999 ರೂ. ಆಗಿದೆ. ಈ ಫೋನ್ ದೇಶದಲ್ಲಿ ಸೆಪ್ಟೆಂಬರ್ 18 ರಿಂದ ಮಧ್ಯಾಹ್ನ 12 ಗಂಟೆಗೆ ಹಾನರ್​ನ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.

ವಾಟ್ಸ್​ಆ್ಯಪ್​ನಲ್ಲಿ ನಿರೀಕ್ಷೆಗೂ ಮೀರಿದ ಫೀಚರ್: ಬರುತ್ತಿದೆ ಚಾಟ್ ಫಿಲ್ಟರ್ ಎಂಬ ಆಯ್ಕೆ

ಇದನ್ನೂ ಓದಿ
ಭಾರತದಲ್ಲಿ ಐಫೋನ್ 15 ಪ್ರೊ, 15 ಪ್ರೊ ಮ್ಯಾಕ್ಸ್ ಬೆಲೆ ಎಷ್ಟು?
ಭಾರತದಲ್ಲಿ ಐಫೋನ್ 15, ಐಫೋನ್ 15 ಪ್ಲಸ್ ಬೆಲೆ ಎಷ್ಟು?, ಫೀಚರ್ಸ್ ಏನಿದೆ?
Raksha QR: ತುರ್ತು ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಬಿಡುಗಡೆ
ಮೋಟೋ G54 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ: ಮೊದಲ ದಿನವೇ ಆಫರ್

ಮೊದಲ ಸೇಲ್ ಪ್ರಯುಕ್ತ ಇ-ಕಾಮರ್ಸ್ ಸೈಟ್​ನಲ್ಲಿ 2,000 ರೂ. ಗಳ ವಿನಿಮಯ ರಿಯಾಯಿತಿಯನ್ನು ನೀಡಲಾಗಿದೆ. ಜೊತೆಗೆ ಖರೀದಿಯ ಸಮಯದಲ್ಲಿ ಐಸಿಐಸಿಐ ಮತ್ತು ಎಸ್‌ಬಿಐ ಕಾರ್ಡ್‌ಗಳನ್ನು ಬಳಸುವ ಗ್ರಾಹಕರು 3,000 ರೂ. ಗಳ ಹೆಚ್ಚುವರಿ ತ್ವರಿತ ರಿಯಾಯಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಹಾನರ್ 90 5G ಅನ್ನು ಡೈಮಂಡ್ ಸಿಲ್ವರ್, ಎಮರಾಲ್ಡ್ ಗ್ರೀನ್ ಮತ್ತು ಮಿಡ್ನೈಟ್ ಬ್ಲಾಕ್ ಬಣ್ಣ ಆಯ್ಕೆಗಳಲ್ಲಿ ನಿಮ್ಮದಾಗಿಸಬಹುದು.

ಹಾನರ್ 90 5G ಫೀಚರ್ಸ್:

ಹಾನರ್ 90 5G ಸ್ಮಾರ್ಟ್​ಫೋನ್ 1.5K (2664 x 1200 ಪಿಕ್ಸೆಲ್‌ಗಳು) ರೆಸಲ್ಯೂಶನ್‌ನೊಂದಿಗೆ 6.7-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ವರೆಗೆ ರಿಫ್ರೆಶ್ ದರವನ್ನು ಮತ್ತು 1,600 nits ನ ಗರಿಷ್ಠ ಬ್ರೈಟ್​ನೆಸ್ ಅನ್ನು ನೀಡುತ್ತದೆ. ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 7 Gen 1 SoC ಯಿಂದ Adreno 644 GPU ನೊಂದಿಗೆ ಜೋಡಿಸಲ್ಪಟ್ಟಿದೆ, 12GB ಯ LPDDR5 RAM ಮತ್ತು 256GB ವರೆಗಿನ UFS 3.1 ಅಂತರ್ಗತ ಸಂಗ್ರಹಣೆ ಇದೆ. ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ, ಫೋನ್ ಆಂಡ್ರಾಯ್ಡ್ 13-ಆಧಾರಿತ ಮ್ಯಾಜಿಕ್ ಓಎಸ್ 7.1 ನೊಂದಿಗೆ ರನ್ ಆಗುತ್ತಿದೆ.

ಈ ಫೋನ್ ಹಾನರ್ ಇಮೇಜ್ ಎಂಜಿನ್ ಬೆಂಬಲದೊಂದಿಗೆ 200-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ನೀಡಲಾಗಿದೆ. ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ನೊಂದಿಗೆ 12-ಮೆಗಾಪಿಕ್ಸೆಲ್ ಸಂವೇದಕ ಮತ್ತು ಎಲ್ಇಡಿ ಫ್ಲ್ಯಾಷ್ ಯೂನಿಟ್ ಜೊತೆಗೆ ಮ್ಯಾಕ್ರೋ ಲೆನ್ಸ್‌ನೊಂದಿಗೆ 2-ಮೆಗಾಪಿಕ್ಸೆಲ್ ಸಂವೇದಕ ಕೂಡ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 50-ಮೆಗಾಪಿಕ್ಸೆಲ್ ಸಂವೇದಕವನ್ನು ಡಿಸ್ ಪ್ಲೇಯ ಮೇಲ್ಭಾಗದ ಮಧ್ಯದಲ್ಲಿ ಜೋಡಿಸಲಾದ ಪಂಚ್-ಹೋಲ್ ಸ್ಲಾಟ್‌ನಲ್ಲಿ ಇರಿಸಲಾಗಿದೆ.

ಹಾನರ್ 90 5G ಫೋನ್ 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಭದ್ರತೆಗಾಗಿ, ಫೋನ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ. ಇದು 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ 5.2, NFC, GPS ಮತ್ತು USB ಟೈಪ್-C ಸಂಪರ್ಕವನ್ನು ಬೆಂಬಲಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 14 September 23