ಭಾರತದಲ್ಲಿ ಆನ್‌ಲೈನ್ ಶಾಪಿಂಗ್ ಪ್ರಿಯರ ಪಾಲಿನ ನೆಚ್ಚಿನ ಪ್ಲಾಟ್‌ಫಾರ್ಮ್‌ಗಳಲ್ಲಿ ಫ್ಲಿಪ್‌ಕಾರ್ಟ್ (Flipkart) ಒಂದಾಗಿದೆ. ಫ್ಲಿಪ್‌ಕಾರ್ಟ್ ಕೂಡ ಆನ್‌ಲೈನ್ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ಸದ್ಯ ಇದೀಗ ಫ್ಲಿಪ್‌ಕಾರ್ಟ್ ಮೋಟೋರೊಲಾ ಮೊಬೈಲ್ ಸಂಸ್ಥೆಯ ಜೊತೆಗೂಡಿ ಗ್ರಾಹಕರಿಗೆ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಅದೆನೆಂದರೆ, ಮೋಟೋರೊಲಾ ಸಂಸ್ಥೆಯು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ನೊಂದಿಗಿನ ವಿಶೇಷ ಸಹಯೋಗದೊಂದಿಗೆ ‘ಮೋಟೋ ಡೇಸ್ ಸೇಲ್’ (Moto Days Sale) ಅನ್ನು ಆರಂಭಿಸಿದೆ. ಈಗಾಗಲೇ ಈ ಸೇಲ್ ಲೈವ್ ಆಗಿದ್ದು, ಗ್ರಾಹಕರಿಗಾಗಿ ವಿಶೇಷ ರಿಯಾಯಿತಿಗಳನ್ನು ಹೊತ್ತು ತಂದಿದೆ. ಈ ಸೇಲ್‌ನಲ್ಲಿ ಮೋಟೋ ಕಂಪನಿಯ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ಕೊಡುಗೆ ಲಭ್ಯ ಇವೆ. ಮೋಟೋ ಡೇಸ್ ಸೇಲ್ ಮೇ 14 ರಿಂದ ಆರಂಭವಾಗಿದ್ದು ಮೇ 18ರ ವರೆಗೂ ಚಾಲ್ತಿ ಇರಲಿದೆ. ಇದರಲ್ಲಿ ಮುಖ್ಯವಾಗಿ ಮೊಟೊ G, ಮೊಟೊ E ಮತ್ತು ಮೊಟೊ Edge (Moto Edge) ಸರಣಿ ಫೋನ್‌ಗಳು ಹೆಚ್ಚಿನ ರಿಯಾಯಿತಿ ಬೆಲೆಯಲ್ಲಿ ಖರೀದಿಸಬಹುದು.
ಕ್ಯಾಮೆರಾ ಪ್ರಿಯರಿಗೆ ಹೇಳಿ ಮಾಡಿಸಿರುವ ಮೋಟೋರೊಲಾ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್ ಮೋಟೋ ಡೇಸ್ ಸೇಲ್‌ನಲ್ಲಿ ಕೇವಲ 18,999 ರೂ. ಗಳ ಆಫರ್ ಬೆಲೆಯಲ್ಲಿ ಲಭ್ಯ ಆಗಲಿದೆ. ಇದು 6.7 ಇಂಚಿನ ಫುಲ್ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್ ಹೊಂದಿದೆ. ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಮೋಟೋ G60 ಸ್ಮಾರ್ಟ್‌ಫೋನ್ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಸೇಲ್‌ನಲ್ಲಿ ಈ ಫೋನ್ 14,999 ರೂ. ಗಳಿಗೆ ಲಭ್ಯ ಆಗಲಿದೆ.
ಮೋಟೋ E40 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಯೂನಿಸೋಕ್ T700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇನ್ನು ಮೋಟೋ ಡೇಸ್ ನಲ್ಲಿ ಈ ಫೋನ್ 9,999 ರೂ. ಗಳ ಆಫರ್ ಬೆಲೆಯಲ್ಲಿ ಲಭ್ಯ ಆಗಲಿದೆ.
ಮೋಟೋ G31 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.4 ಇಂಚಿನ ಪೂರ್ಣ ಹೆಚ್‌ಡಿ OLED ಡಿಸ್‌ಪ್ಲೇ ಪಡೆದಿದೆ. ಇನ್ನು ಇದು ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಹಾಗೆಯೇ ಮೋಟೋ G31 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಸೇಲ್‌ನಲ್ಲಿ ಈ ಫೋನ್ 10,999 ರೂ. ಗಳಿಗೆ ಲಭ್ಯ ಆಗಲಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ