Moto E20: ಬಹುನಿರೀಕ್ಷಿತ ಮೋಟೋ E20 ಸ್ಮಾರ್ಟ್ಫೋನಿನ ಮಾಹಿತಿ ಸೋರಿಕೆ: ಏನೆಲ್ಲ ವಿಶೇಷತೆ?
ವಿಭಿನ್ನ ಫೀಚರ್ಸ್ ಹೊಂದಿರುವ ಮೋಟೋ E20 ಸ್ಮಾರ್ಟ್ಫೋನ್ನಲ್ಲಿ ವಾಟರ್‌ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರದೆಯಂತೆ. ಅಲ್ಲದೆ ಡ್ಯುಯೆಲ್ ರಿಯರ್ ಕ್ಯಾಮೆರಾ, 4000mAh ಬ್ಯಾಟರಿ ಅಳವಡಿಸಲಾಗಿದೆ ಎಂದು ಹೇಳಲಾಗಿದೆ.

ಈ ವರ್ಷ ಮಾರುಕಟ್ಟೆಯಲ್ಲಿ ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿ ಯಶಸ್ಸು ಕಂಡಿರುವ ಜನಪ್ರಿಯ ಮೋಟೋರೊಲಾ (Motorola) ಕಂಪೆನಿ ಸದ್ಯ ಮತ್ತೊಂದು ಹೊಸ ಮೋಟೋ E20 (Moto E20) ಹೆಸರಿನ ಫೋನನ್ನು ಅನಾವರಣ ಮಾಡಲು ಸಜ್ಜಾಗಿದೆ. ಆದರೆ, ಅಧಿಕೃತ ಬಿಡುಗಡೆಗೆ ಮುಂಚಿತವಾಗಿ ಆನ್‌ಲೈನ್‌ನಲ್ಲಿ ಈ ಫೋನಿನ ಕುರಿತ ಕೆಲವು ಪ್ರಮುಖ ಮಾಹಿತಿಗಳು ಸೋರಿಕೆಯಾಗಿದೆ.
ವಿಭಿನ್ನ ಫೀಚರ್ಸ್ ಹೊಂದಿರುವ ಮೋಟೋ E20 ಸ್ಮಾರ್ಟ್ಫೋನ್ನಲ್ಲಿ ವಾಟರ್‌ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರದೆಯಂತೆ. ಅಲ್ಲದೆ ಡ್ಯುಯೆಲ್ ರಿಯರ್ ಕ್ಯಾಮೆರಾ, 4000mAh ಬ್ಯಾಟರಿ ಅಳವಡಿಸಲಾಗಿದೆ ಎಂದು ಹೇಳಲಾಗಿದೆ. ಇದೊಂದು ಎಂಟ್ರಿ ಲೆವೆಲ್ ಫೋನ್ ಆಗಿರಲಿದೆ.
ಸದ್ಯ ಲೀಕ್ ಆಗಿರುವ ಮಾಹಿತಿಯ ಪ್ರಕಾರ ಮೊಟೊ E20 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ 6.5 ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ SoC ಪ್ರೊಸೆಸರ್ ಬಲವನ್ನು ಪಡೆದಿರಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಬೆಂಬಲ ಇರಲಿದೆ ಎಂದು ನಿರೀಕ್ಷಿಸಲಾಗಿದೆ.
ಇನ್ನೂ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆಯಂತೆ. ಜೊತೆಗೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎಂದು ಹೇಳಲಾಗಿದೆ.
ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿರಲಿದೆ. ಆದರೆ, ಇದು ಎಷ್ಟು ವೋಲ್ಟ್ ಬೆಂಬಲ ಪಡದಿರಲಿದೆ ಎಂಬುದು ಬಹಿರಂಗವಾಗಿಲ್ಲ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಬ್ಲೂಟೂತ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಪ್ರಮುಖ ನೂತನ ವಿಶೇಷತೆಗಳು ಇರಲಿವೆಯಂತೆ.
ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಎಷ್ಟು ಸಿಮ್ ಲಿಂಕ್ ಆಗಿವೆ?: ಟೆಲಿಕಾಂ ಇಲಾಖೆಯಿಂದ ಹೊಸ ಪೋರ್ಟಲ್
ಸ್ಯಾನ್‌ಡಿಸ್ಕ್ ವೈರ್‌ಲೆಸ್ ಚಾರ್ಜರ್ ಬಿಡುಗಡೆ: ಇದರ ವಿಶೇಷತೆಗಳೇನು ಗೊತ್ತಾ?
(Moto E20 Specifications and Renders Leak Online Dual Rear Cameras and 4000mAh Battery Tipped)
Published On - 1:36 pm, Fri, 27 August 21