AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto E30: 48MP ಕ್ಯಾಮೆರಾ, 5000mAh ಬ್ಯಾಟರಿಯ ಹೊಸ ಮೋಟೋ E30 ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?

ಮೋಟೋ E30 ಸ್ಮಾರ್ಟ್‌ಫೋನ್‌ ಕೇವಲ ಒಂದು ಮಾದರಿಯಲ್ಲಷ್ಟೆ ಬಿಡುಗಡೆಯಾಗದೆ. 2GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕಾಗಿ COP 529,900. ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 10,200 ರೂ. ಇರಬಹುದು.

Moto E30: 48MP ಕ್ಯಾಮೆರಾ, 5000mAh ಬ್ಯಾಟರಿಯ ಹೊಸ ಮೋಟೋ E30 ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?
Moto E30
TV9 Web
| Updated By: Vinay Bhat|

Updated on: Nov 07, 2021 | 12:53 PM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್ (Samsung) ನಡುವೆ ತನ್ನದೇ ಆದ ವಿಶೇಷ ಸ್ಥಾನ ಸ್ಥಾಪಿಸಿರುವ ಮೋಟೋರೊಲಾ (Motorola) ಕಂಪನಿ ಇದೀಗ ತನ್ನ ಹೊಸ ಮೋಟೋ ಇ30 (Moto E30) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸ, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಈ ಸ್ಮಾರ್ಟ್​ಫೋನ್ ಒಳಗೊಂಡಿದೆ. ಬ್ಲೂ ಮತ್ತು ಅರ್ಬನ್‌ ಗ್ರೇ ಬಣ್ಣದ ಆಯ್ಕೆಗಳಲ್ಲಿ ಲಬ್ಯವಾಗಲಿದೆ.

ಮೋಟೋ E30 ಸ್ಮಾರ್ಟ್‌ಫೋನ್‌ ಕೇವಲ ಒಂದು ಮಾದರಿಯಲ್ಲಷ್ಟೆ ಬಿಡುಗಡೆಯಾಗದೆ. 2GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕಾಗಿ COP 529,900. ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 10,200 ರೂ. ಇರಬಹುದು. ಇದು ಕೊಲಂಬಿಯಾ ಮತ್ತು ಸ್ಲೋವಾಕಿಯಾ ಸೇರಿದಂತೆ ಕೆಲವು ದಕ್ಷಿಣ ಅಮೆರಿಕಾದ ಪ್ರದೇಶಗಳಲ್ಲಿ ನೀಲಿ ಮತ್ತು ಅರ್ಬನ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಫೋನ್ ಖರೀದಿಸಲು ಲಭ್ಯವಿದೆ. ಸದ್ಯದಲ್ಲೆ ಈ ಸ್ಮಾರ್ಟ್‌ಫೋನ್‌ ಭಾರತದಲ್ಲೂ ಬಿಡುಗಡೆ ಆಗಲಿದೆಯಂತೆ.

ಮೋಟೋ E30 ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಯೂನಿಸೋಕ್‌ T700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 Go ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲಿಸಲಿದೆ. ಸಿಂಗಲ್‌ ಚಾರ್ಜ್‌ನಲ್ಲಿ 40 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ಎಲ್‌ಟಿಇ, Wi-Fi 802.11 a/b/g/n, ಬ್ಲೂಟೂತ್ v5, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ರಿಯರ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

ಎರಡು ದಿನಗಳ ಹಿಂದೆಯಷ್ಟೆ ಮೋಟೋರೊಲಾ ಕಂಪನಿ ಮೋಟೋ ಜಿ51 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿತ್ತು. ಇದು. ಕಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480+ SoC ಪ್ರೊಸೆಸರ್‌, ಆಕರ್ಷಕ ಕ್ಯಾಮೆರಾ, 5000mAh ಬಲಿಷ್ಠ ಬ್ಯಾಟರಿಯನ್ನು ಈ ಫೋನ್ ಹೊಂದಿದೆ.

Galaxy A13 5G: ಭರ್ಜರಿ ಸೇಲ್ ಆಗುತ್ತಿರುವ ಗ್ಯಾಲಕ್ಸಿ A ಸರಣಿಯಲ್ಲಿ ಬರುತ್ತಿದೆ ಮತ್ತೊಂದು ಹೊಸ ಸ್ಮಾರ್ಟ್​ಫೋನ್

WhatsApp Web: ದೀಪಾವಳಿಗೆ ವಾಟ್ಸ್​ಆ್ಯಪ್​ನಿಂದ ಹೊಸ ಫೀಚರ್: ವಾಟ್ಸ್​ಆ್ಯಪ್ ವೆಬ್ ಬಳಸುತ್ತಿರುವವರು ಫುಲ್ ಖುಷ್

(Moto E30 Lenovo-owned company has launched the Moto E30 in the European market)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು