AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಸ್ಮಾರ್ಟ್‌ಫೋನ್‌: ಇದರ ಬೆಲೆ ಕೇವಲ 8,999 ರೂ.

ಮೋಟೋರೊಲಾ ಕಂಪನಿ ಸದ್ದಿಲ್ಲದೆ ಮೋಟೋ ಇ 32ಎಸ್ (Moto E32s) ಸ್ಮಾರ್ಟ್‌ಫೋನ್‌ ಅನ್ನು ದೇಶದಲ್ಲಿ ಲಾಂಚ್‌ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಬರುತ್ತದೆ. ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಬರುತ್ತದೆ. ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಬರುತ್ತದೆ.

Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಸ್ಮಾರ್ಟ್‌ಫೋನ್‌: ಇದರ ಬೆಲೆ ಕೇವಲ 8,999 ರೂ.
Moto E32s
TV9 Web
| Edited By: |

Updated on:Apr 01, 2026 | 4:18 PM

Share

ವಿಶ್ವದಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಹಾಗೂ ಒನ್​ಪ್ಲಸ್​ ನಂತಹ ಘಟಾನುಘಟಿ ಸ್ಮಾರ್ಟ್​​ಫೋನ್ ಬ್ರ್ಯಾಂಡ್​​ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲಾ (Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಭಾರತದಲ್ಲಿ ಕೂಡ ಮೋಟೋ ಕಂಪನಿಯ ಫೋನ್​ಗಳಿಗೆ ಅತ್ಯುತ್ತಮ ಬೇಡಿಕೆಯಿದೆ. ಇತ್ತೀಚೆಗಷ್ಟೆ ಮೋಟೋರೊಲಾ ಎಡ್ಜ್ 30 (Motorola Edge 30) ಸ್ಮಾರ್ಟ್‌ಫೋನ್ ಅನಾವರಣ ಮಾಡಿ ಭರ್ಜರಿ ಸುದ್ದಿ ಮಾಡಿತ್ತು. ಇದೀಗ ಸದ್ದಿಲ್ಲದೆ ಕಂಪನಿ ಮೋಟೋ ಇ 32ಎಸ್ (Moto E32s) ಸ್ಮಾರ್ಟ್‌ಫೋನ್‌ ಅನ್ನು ದೇಶದಲ್ಲಿ ಲಾಂಚ್‌ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಬರುತ್ತದೆ. ಇದರಲ್ಲಿ ಕ್ಯಾಮೆರಾ ಕೂಡ ಅದ್ಭುತವಾಗಿದ್ದು ಬಲಿಷ್ಠ ಬ್ಯಾಟರಿಯನ್ನು ಕೂಡ ಅಳವಡಿಸಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​​ ಇದೆ?, ಇಲ್ಲಿದೆ ನೋಡಿ ಮಾಹಿತಿ.

  1. ಮೋಟೋ E32s ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 3GB RAM ಮತ್ತು 32GB ಸ್ಟೋರೆಜ್ ಆಯ್ಕೆಗೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ. ಹಾಗೆಯೆ 4GB RAM ಮತ್ತು 64GB ಸ್ಟೋರೆಜ್ ರೂಪಾಂತರಕ್ಕೆ 9,999 ರೂ. ಇದೆ. ಜೂನ್ 6 ರಿಂದ ಈ ಫೋನ್ ಅನ್ನು ಫ್ಲಿಪ್​ಕಾರ್ಟ್​ ಮೂಲಕ ಖರೀದಿಸಬಹುದು.
  2. ಮೋಟೋ E32s ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ ಡಿಸ್​ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ.
  3. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  4. ಮೋಟೋ E32s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ.
  5. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
  6. ಈ ಸ್ಮಾರ್ಟ್‌ಫೋನ್​ಗೆ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ಅಳವಡಿಸಲಾಗಿದೆ. 10W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್, GPS/ A-GPS, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Thu, 2 June 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್