Kannada News Technology Moto E32s was launched in India price starts at just Rs 8999 check specs
Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಸ್ಮಾರ್ಟ್‌ಫೋನ್: ಇದರ ಬೆಲೆ ಕೇವಲ 8,999 ರೂ.
ಮೋಟೋರೊಲಾ ಕಂಪನಿ ಸದ್ದಿಲ್ಲದೆ ಮೋಟೋ ಇ 32ಎಸ್ (Moto E32s) ಸ್ಮಾರ್ಟ್‌ಫೋನ್ ಅನ್ನು ದೇಶದಲ್ಲಿ ಲಾಂಚ್ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಬರುತ್ತದೆ.
ವಿಶ್ವದಲ್ಲಿ ಶವೋಮಿ (Xiaomi), ಸ್ಯಾಮ್ಸಂಗ್, ರಿಯಲ್ ಮಿ ಹಾಗೂ ಒನ್ಪ್ಲಸ್ ನಂತಹ ಘಟಾನುಘಟಿ ಸ್ಮಾರ್ಟ್‌ಫೋನ್ ಬ್ರ್ಯಾಂಡ್ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲಾ(Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಭಾರತದಲ್ಲಿ ಕೂಡ ಮೋಟೋ ಕಂಪನಿಯ ಫೋನ್ಗಳಿಗೆ ಅತ್ಯುತ್ತಮ ಬೇಡಿಕೆಯಿದೆ. ಇತ್ತೀಚೆಗಷ್ಟೆ ಮೋಟೋರೊಲಾ ಎಡ್ಜ್ 30 (Motorola Edge 30) ಸ್ಮಾರ್ಟ್‌ಫೋನ್ ಅನಾವರಣ ಮಾಡಿ ಭರ್ಜರಿ ಸುದ್ದಿ ಮಾಡಿತ್ತು. ಇದೀಗ ಸದ್ದಿಲ್ಲದೆ ಕಂಪನಿ ಮೋಟೋ ಇ 32ಎಸ್ (Moto E32s) ಸ್ಮಾರ್ಟ್‌ಫೋನ್ ಅನ್ನು ದೇಶದಲ್ಲಿ ಲಾಂಚ್ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಬರುತ್ತದೆ. ಇದರಲ್ಲಿ ಕ್ಯಾಮೆರಾ ಕೂಡ ಅದ್ಭುತವಾಗಿದ್ದು ಬಲಿಷ್ಠ ಬ್ಯಾಟರಿಯನ್ನು ಕೂಡ ಅಳವಡಿಸಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ?, ಇಲ್ಲಿದೆ ನೋಡಿ ಮಾಹಿತಿ.
ಮೋಟೋ E32s ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 3GB RAM ಮತ್ತು 32GB ಸ್ಟೋರೆಜ್ ಆಯ್ಕೆಗೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ. ಹಾಗೆಯೆ 4GB RAM ಮತ್ತು 64GB ಸ್ಟೋರೆಜ್ ರೂಪಾಂತರಕ್ಕೆ 9,999 ರೂ. ಇದೆ. ಜೂನ್ 6 ರಿಂದ ಈ ಫೋನ್ ಅನ್ನು ಫ್ಲಿಪ್ಕಾರ್ಟ್ ಮೂಲಕ ಖರೀದಿಸಬಹುದು.
ಮೋಟೋ E32s ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಮೋಟೋ E32s ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ನಿಂದ ಕೂಡಿದೆ.
ಇದನ್ನೂ ಓದಿ
Redmi K50 Ultra: ಮಾರುಕಟ್ಟೆಗೆ ಬರುತ್ತಿದೆ 100W ಫಾಸ್ಟ್ ಚಾರ್ಜಿಂಗ್ನ ಹೊಸ ಫೋನ್: ಯಾವುದು?, ಬೆಲೆ ಎಷ್ಟು?
WhatsApp: ವಾಟ್ಸ್ಆ್ಯಪ್ನಲ್ಲಿ ಲೈವ್ ಲೊಕೇಶನ್ ಶೇರ್ ಮಾಡಲು ಈ ಟ್ರಿಕ್ ಉಪಯೋಗಿಸಿ
iQOO Neo 6: ಭಾರತಕ್ಕೆ ಬಂದೇ ಬಿಡ್ತು ಐಕ್ಯೂ ನಿಯೋ 6 5G: ಇಷ್ಟು ಕಡಿಮೆ ಬೆಲೆಗೆ ಎಂಥಾ ಸ್ಮಾರ್ಟ್‌ಫೋನ್
Airtel vs Jio: ಏರ್ಟೆಲ್ನಿಂದ ಹೊಸ ಆಲ್-ಇನ್-ಒನ್ ಬ್ರಾಡ್‌ಬ್ಯಾಂಡ್ ಯೋಜನೆ: ಜಿಯೋ-ಏರ್ಟೆಲ್ ಪ್ಲಾನ್ನಲ್ಲಿ ಯಾವುದು ಬೆಸ್ಟ್?
ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಈ ಸ್ಮಾರ್ಟ್ಫೋನ್ಗೆ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ಅಳವಡಿಸಲಾಗಿದೆ. 10W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್, GPS/ A-GPS, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.