AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಫೋನ್ ಮಾರಾಟ ಇಂದಿನಿಂದ ಆರಂಭ

Moto E32s Sale: ಇಂದು (ಜೂ. 6) ಮಧ್ಯಾಹ್ನ 12 ಗಂಟೆಯಿಂದ ಮೋಟೋ E32s ಫೋನ್ ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಫ್ಲಿಪ್​ಕಾರ್ಟ್​ ಮೂಲಕ ಖರೀದಿಸಬಹುದು.

Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಫೋನ್ ಮಾರಾಟ ಇಂದಿನಿಂದ ಆರಂಭ
Moto E32s
TV9 Web
| Updated By: Vinay Bhat|

Updated on: Jun 06, 2022 | 6:55 AM

Share

ವಿಶ್ವದಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಹಾಗೂ ಒನ್​ಪ್ಲಸ್​ ನಂತಹ ಘಟಾನುಘಟಿ ಸ್ಮಾರ್ಟ್​​ಫೋನ್ ಬ್ರ್ಯಾಂಡ್​​ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲಾ (Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಭಾರತದಲ್ಲಿ ಕೂಡ ಮೋಟೋ ಕಂಪನಿಯ ಫೋನ್​ಗಳಿಗೆ ಅತ್ಯುತ್ತಮ ಬೇಡಿಕೆಯಿದೆ. ಇತ್ತೀಚೆಗಷ್ಟೆ ಮೋಟೋರೊಲಾ ಕಂಪನಿ ಸದ್ದಿಲ್ಲದೆ ಮೋಟೋ ಇ 32ಎಸ್ (Moto E32s) ಸ್ಮಾರ್ಟ್‌ಫೋನ್‌ ಅನ್ನು ದೇಶದಲ್ಲಿ ಲಾಂಚ್‌ ಮಾಡಿತ್ತು. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿ ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ನೊಂದಿಗೆ ಇರುವ ಈ ಸ್ಮಾರ್ಟ್​​ಫೋನ್ ಇಂದಿನಿಂದ ಮಾರಾಟ ಕಾಣಲಿದೆ. ಇದರಲ್ಲಿ ಕ್ಯಾಮೆರಾ ಕೂಡ ಅದ್ಭುತವಾಗಿದ್ದು ಬಲಿಷ್ಠ ಬ್ಯಾಟರಿಯನ್ನು ಕೂಡ ಅಳವಡಿಸಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​​ ಇದೆ?, ಇಲ್ಲಿದೆ ನೋಡಿ ಮಾಹಿತಿ.

  1. ಮೋಟೋ E32s ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 3GB RAM ಮತ್ತು 32GB ಸ್ಟೋರೆಜ್ ಆಯ್ಕೆಗೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ. ಹಾಗೆಯೆ 4GB RAM ಮತ್ತು 64GB ಸ್ಟೋರೆಜ್ ರೂಪಾಂತರಕ್ಕೆ 9,999 ರೂ. ಇದೆ.
  2. ಇಂದು (ಜೂ. 6) ಮಧ್ಯಾಹ್ನ 12 ಗಂಟೆಯಿಂದ ಈ ಫೋನ್ ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಫ್ಲಿಪ್​ಕಾರ್ಟ್​ ಮೂಲಕ ಖರೀದಿಸಬಹುದು. ಜೊತೆಗೆ ರಿಲಯನ್ಸ್ ಡಿಜಿಟಲ್, ಮೋಟೋರೊಲಾ ವೆಬ್​ಸೈಟ್ ಹಾಘೂ ರಿಟೈನ್ ಸ್ಟೋರ್​ಗಳಲ್ಲಿ ಮಾರಾಟ ಕಾಣಲಿದೆ.
  3. ಮೋಟೋ E32s ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ ಡಿಸ್​ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ.
  4. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ ಬಾಕ್ಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  5. ಇದನ್ನೂ ಓದಿ
    Image
    ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಡಿಸ್ ಪ್ಲೇಯನ್ನು ಹೀಗೂ ಉಪಯೋಗಿಸಬಹುದು: ಒಮ್ಮೆ ಟ್ರೈ ಮಾಡಿ
    Image
    WhatsApp: ಇನ್ನುಂದೆ ವಾಟ್ಸ್​ಆ್ಯಪ್ ಚಾಟ್ ಡಿಲೀಟ್ ಆದ್ರೆ ಟೆನ್ಶನ್ ಬೇಡ: ರಿಕವರಿ ಮಾಡಬಹುದು, ಹೇಗೆ ನೋಡಿ
    Image
    Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್
    Image
    Best Smartphone: ಇಲ್ಲಿದೆ ನೋಡಿ 20,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್​​ಫೋನ್​ಗಳು
  6. ಮೋಟೋ E32s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ.
  7. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
  8. ಈ ಸ್ಮಾರ್ಟ್‌ಫೋನ್​ಗೆ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ಅಳವಡಿಸಲಾಗಿದೆ. 10W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್, GPS/ A-GPS, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್