AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G24 Power: 6,000mAh ಬ್ಯಾಟರಿಯ ಈ ಬಜೆಟ್ ಫೋನ್​ಗೆ ಕಾದು ಕುಳಿತ ಜನರು: ಮುಂದಿನ ವಾರ ರಿಲೀಸ್

ಮೋಟೋರೊಲಾ ತನ್ನ ಅಧಿಕೃತ X ಖಾತೆಯಲ್ಲಿ ಮೋಟೋ G24 ಪವರ್ ಭಾರತದಲ್ಲಿ ಜನವರಿ 30 ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ. ಇದು ಕಂಪನಿಯ ಅಧಿಕೃತ ವೆಬ್‌ಸೈಟ್, ಫ್ಲಿಪ್​ಕಾರ್ಟ್ ಮತ್ತು ಇತರ ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಮಾರಾಟವಾಗಲಿದೆ ಎಂದು ಖಚಿತಪಡಿಸಿದೆ.

Moto G24 Power: 6,000mAh ಬ್ಯಾಟರಿಯ ಈ ಬಜೆಟ್ ಫೋನ್​ಗೆ ಕಾದು ಕುಳಿತ ಜನರು: ಮುಂದಿನ ವಾರ ರಿಲೀಸ್
Moto G24 Power
Vinay Bhat
|

Updated on: Jan 25, 2024 | 12:33 PM

Share

ಮೋಟೋರೊಲಾ (Motorola) ಕಂಪನಿ ಹೊಸ ಸ್ಮಾರ್ಟ್​ಫೋನ್ ಮೂಲಕ ಭಾರತದಲ್ಲಿ ಧೂಳೆಬ್ಬಿಸಲು ಬರುತ್ತಿದೆ. ಮುಂದಿನ ವಾರ ಭಾರತದ ಮಾರುಕಟ್ಟೆಯಲ್ಲಿ ಮೋಟೋ G24 ಪವರ್ ಫೋನ್ ಅನಾವರಣಗೊಳ್ಳಲಿದೆ. ಚೀನಾದ ಸ್ಮಾರ್ಟ್‌ಫೋನ್ ಮಾರಾಟಗಾರರು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಹೊಸ ಮೋಟೋ ಜಿ ಸರಣಿಯ ಸ್ಮಾರ್ಟ್‌ಫೋನ್ ಬಿಡುಗಡೆ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಮೋಟೋರೊಲಾ ತನ್ನ ಭಾರತದ ವೆಬ್‌ಸೈಟ್‌ನಲ್ಲಿ ಹೊಸ ಫೋನಿನ ವಿನ್ಯಾಸ ಮತ್ತು ಕೆಲ ಫೀಚರ್ಸ್ ಬಗ್ಗೆ ಬಹಿರಂಗ ಪಡಿಸಿದೆ. ಇದು ಬರೋಬ್ಬರಿ 6,000mAh ಬ್ಯಾಟರಿಯೊಂದಿಗೆ ಬರುತ್ತದೆ.

ಮೋಟೋರೊಲಾ ತನ್ನ ಅಧಿಕೃತ X ಖಾತೆಯಲ್ಲಿ ಮೋಟೋ G24 ಪವರ್ ಭಾರತದಲ್ಲಿ ಜನವರಿ 30 ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ. ಇದು ಕಂಪನಿಯ ಅಧಿಕೃತ ವೆಬ್‌ಸೈಟ್, ಫ್ಲಿಪ್​ಕಾರ್ಟ್ ಮತ್ತು ಇತರ ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಮಾರಾಟವಾಗಲಿದೆ ಎಂದು ಖಚಿತಪಡಿಸಿದೆ. ಲೆನೊವೊ ಅಂಗಸಂಸ್ಥೆ ಮತ್ತು ಫ್ಲಿಪ್‌ಕಾರ್ಟ್ ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್​ಗೆ ಮೀಸಲಾದ ಮೈಕ್ರೋಸೈಟ್ ಮೂಲಕ ತಿಳಿಸಿದೆ.

Mobile Data Saver: ಮೊಬೈಲ್ ಇಂಟರ್​ನೆಟ್ ಬೇಗ ಖಾಲಿ ಆಗ್ತಾ ಇದ್ಯಾ? ಈ ಟ್ರಿಕ್ಸ್ ನೋಡಿ

ಇದನ್ನೂ ಓದಿ
Image
8 ಲಕ್ಷ ರೂ. ಗೆಲ್ಲುವ ಅವಕಾಶ: 1 ತಿಂಗಳು ಫೋನ್ ಇಲ್ಲದೆ ಇರಬಹುದೇ?
Image
ನೋಟ್ 50: ರಿಯಲ್ ಮಿಯಿಂದ ಬಂತು ಮೊಟ್ಟ ಮೊದಲ ನೋಟ್ ಸ್ಮಾರ್ಟ್​ಫೋನ್
Image
ಭಾರತದಲ್ಲಿ ಬಿಡುಗಡೆ ಆಗಿದೆ ಒನ್​ಪ್ಲಸ್ 12, 12R ಸ್ಮಾರ್ಟ್​ಫೋನ್ಸ್: ಬೆಲೆ?
Image
ಗೂಗಲ್ ಪೇ ಆ್ಯಪ್ ಬಳಕೆ ಮಾಡ್ತಾ ಇದ್ದೀರಾ?

ಮೋಟೋ G24 ಪವರ್ ಅನ್ನು ಗ್ಲೇಸಿಯರ್ ಬ್ಲೂ ಮತ್ತು ಇಂಕ್ ಬ್ಲೂ ಬಣ್ಣಗಳಲ್ಲಿ ನೀಡಲಾಗುವುದು ಎಂದು ದೃಢಪಡಿಸಲಾಗಿದೆ. ಇದು ಆಂಡ್ರಾಯ್ಡ್ 14 ಮೂಲಕ ರನ್ ಆಗುತ್ತದೆ. 90Hz ರಿಫ್ರೆಶ್ ದರದೊಂದಿಗೆ 6.56-ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಹ್ಯಾಂಡ್‌ಸೆಟ್ ಮೀಡಿಯಾಟೆಕ್ ಹಿಲಿಯೊ G85 SoC ನಿಂದ ಚಾಲಿತವಾಗಿದೆ, ಜೊತೆಗೆ 8GB ಯ RAM ಮತ್ತು 128GB ಸಂಗ್ರಹಣೆಯನ್ನು ಹೊಂದಿರುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬಂದರೆ, ಮೋಟೋ G24 ಪವರ್ ಡ್ಯುಯಲ್ ರಿಯರ್ ಕ್ಯಾಮೆರಾ ಘಟಕವನ್ನು ಹೊಂದಿದೆ. ಇದು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಜೊತೆಗೆ ಕ್ವಾಡ್ ಪಿಕ್ಸೆಲ್ ತಂತ್ರಜ್ಞಾನದೊಂದಿಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆ ಇದೆ. ಸೆಲ್ಫಿಗಳು ಮತ್ತು ವಿಡಿಯೋ ಚಾಟ್‌ಗಳಿಗಾಗಿ 16-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ನೀಡಲಾಗಿದೆ.

ಡಾಲ್ಬಿ ಅಟ್ಮಾಸ್‌ನಿಂದ ಬೆಂಬಲಿತವಾದ ಸ್ಟಿರಿಯೊ ಸ್ಪೀಕರ್‌ಗಳು ಇವೆ. ದೃಢೀಕರಣಕ್ಕಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಅಳವಡಿಸಲಾಗಿದೆ. 33W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 6,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಮೋಟೋ G24 ಪವರ್ ಬೆಲೆ ವಿವರಗಳು ಸದ್ಯಕ್ಕೆ ತಿಳಿದಿಲ್ಲ. ಆದಾಗ್ಯೂ, ಹ್ಯಾಂಡ್‌ಸೆಟ್‌ನ ಬೆಲೆ ಸುಮಾರು 10,000 ರೂ. ಎಂದು ನಾವು ನಿರೀಕ್ಷಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!