Moto G31: ಮಾರುಕಟ್ಟೆಯಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಮೋಟೋ G31 ಇಂದಿನಿಂದ ಖರೀದಿಗೆ ಲಭ್ಯ: ಬೆಲೆ ಎಷ್ಟು?

ಕಂಪನಿ ಕಳೆದ ವಾರವಷ್ಟೆ ಭಾರತದಲ್ಲಿ ಹೊಸದಾಗಿ ಬಿಡುಗಡೆ ಆಗಿರುವ ಮೋಟೋ ಜಿ31 (Moto G31) ಸ್ಮಾರ್ಟ್‌ಫೋನ್ ಇಂದು ಮೊದಲ ಸೇಲ್ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮಾರಾಟ ಪ್ರಾರಂಭಿಸಿದೆ.

Moto G31: ಮಾರುಕಟ್ಟೆಯಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಮೋಟೋ G31 ಇಂದಿನಿಂದ ಖರೀದಿಗೆ ಲಭ್ಯ: ಬೆಲೆ ಎಷ್ಟು?
Moto G31
Follow us
TV9 Web
| Updated By: Vinay Bhat

Updated on: Dec 06, 2021 | 1:24 PM

ಮೊಬೈಲ್ ಮಾರುಕಟ್ಟೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಮೋಟೋರೊಲಾ (Motorola) ಕಂಪನಿ ಈಗೀಗ ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು (Smartphone) ಪರಿಚಯಿಸಿ ಭದ್ರವಾಗಿ ನೆಲೆಯೂರಲು ಪ್ರಯತ್ನ ಪಡುತ್ತಿದೆ. ಹೆಚ್ಚಾಗಿ ಕಡಿಮೆ ಬೆಲೆಯ ಸ್ಮಾರ್ಟ್​ಫೋನ್​ಗಳಿಂದಲೇ ಭರ್ಜರಿ ಸುದ್ದಿಯಲ್ಲಿರುವ ಮೋಟೋ (Moto) ಕಂಪನಿ ಕಳೆದ ವಾರವಷ್ಟೆ ಭಾರತದಲ್ಲಿ ಹೊಸದಾಗಿ ಬಿಡುಗಡೆ ಆಗಿರುವ ಮೋಟೋ ಜಿ31 (Moto G31) ಸ್ಮಾರ್ಟ್‌ಫೋನ್ ಇಂದು ಮೊದಲ ಸೇಲ್ ಕಾಣುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ (Flipkart) ತಾಣದಲ್ಲಿ ಮಾರಾಟ ಪ್ರಾರಂಭಿಸಿದೆ. ಮೀಡಿಯಾ ಟೆಕ್ ಹಿಲಿಯೋ ಪ್ರೊಸೆಸರ್‌, ಅತ್ಯುತ್ತಮ ಬ್ಯಾಟರಿ, ಕ್ಯಾಮೆರಾ ಇರುವ ಈ ಸ್ಮಾರ್ಟ್​ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ನೋಡುವುದಾದರೆ…

ಮೋಟೋ G31 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.4 ಇಂಚಿನ ಪೂರ್ಣ ಹೆಚ್‌ಡಿ OLED ಡಿಸ್‌ಪ್ಲೇ ಪಡೆದಿದೆ. ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 4GB RAM + 64GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಫೊಟೊ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4G LTE, ಎಫ್‌ಎಮ್‌ ರೇಡಿಯೋ, 3.5mm ಆಡಿಯೋ ಜ್ಯಾಕ್, ಬ್ಲೂಟೂತ್ v5, ಡ್ಯುಯಲ್ ಬ್ಯಾಂಡ್ ವೈ-ಫೈ 802.11 ac, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ನಂತಹ ಸಾಮಾನ್ಯ ಸಂಪರ್ಕ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು?:

ಮೋಟೋ G31 ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಹಾಗೂ 6GB RAM + 128GB ಸ್ಟೋರೇಜ್‌ನ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಈ ಪೈಕಿ 4GB RAM + 64GB ಸ್ಟೋರೇಜ್‌ ವೇರಿಯಂಟ್‌ನ ಬೆಲೆಯು 12,999 ರೂ. ಆಗಿದೆ. 6GB RAM + 128GB ಸ್ಟೋರೇಜ್‌ ವೇರಿಯಂಟ್ ದರವು 14,999 ರೂ. ಆಗಿದೆ. ಗ್ರೇ ಮತ್ತು ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Best Smartphone: 15,000 ರೂ. ಒಳಗೆ ಹೊಸ ಸ್ಮಾರ್ಟ್​ಫೋನ್ ಬೇಕಿದ್ದರೆ ಇಲ್ಲೊಮ್ಮೆ ಗಮನಿಸಿ: ಇದು ಬಜೆಟ್ ಬೆಲೆಯ ಬೆಸ್ಟ್​ ಫೋನ್

Vodafone Idea Disney+ Hotstar Plans: ಬೆಲೆ ಏರಿಕೆ ಶಾಕ್ ನೀಡಿದ್ದ ಏರ್ಟೆಲ್, ಜಿಯೋ, ವಿಯಿಂದ ಈಗ ಆಫರ್ ಮೇಲೆ ಆಫರ್ ಘೋಷಣೆ

(Moto G31 will go on sale in India today for the first time on Flipkart)

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ