AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G32: ಭಾರತದಲ್ಲಿ ಸದ್ದಿಲ್ಲದೆ ಮೋಟೋ G32 ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಕೇವಲ 12,999 ರೂ.

ಮೋಟೋರೊಲಾ ಕಂಪನಿ ಸದ್ದಿಲ್ಲದೆ ಭಾರತದಲ್ಲಿ ತನ್ನ ಹೊಸ ಮೋಟೋ ಜಿ32 (Moto G32) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಇದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಕರ್ಷಕ ಕ್ಯಾಮೆರಾ, ಬ್ಯಾಟರಿ ಕೂಡ ನೀಡಲಾಗಿದೆ.

Moto G32: ಭಾರತದಲ್ಲಿ ಸದ್ದಿಲ್ಲದೆ ಮೋಟೋ G32 ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಕೇವಲ 12,999 ರೂ.
Moto G32
TV9 Web
| Edited By: |

Updated on:Aug 09, 2022 | 2:02 PM

Share

ಮೋಟೋರೊಲಾ (Motorola) ಕಂಪನಿಯ ಸ್ಮಾರ್ಟ್​​ಫೋನ್​ಗಳಿಗೆ ಈಗ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಬಜೆಟ್ ಬೆಲೆಯ ಜೊತೆಗೆ ಹೈರೇಂಜ್ ಮಾದರಿಯಲ್ಲಿ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುತ್ತಿರುವುದು ಇದಕ್ಕೆ ಕಾರಣ ಎನ್ನಬಹುದು. ಈಗಾಗಲೇ 200 ಮೆಗಾಫಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್​ಫೋನ್ ಅನ್ನು ತಯಾರು ಮಾಡುವ ಪ್ರಕ್ರಿಯೆಯಲ್ಲಿ ಮೋಟೋ ಬ್ಯುಸಿಯಾಗಿದೆ. ಹೀಗಿರುವಾಗ ಇದರ ನಡುವೆ ಮೋಟೋರೊಲಾ ಕಂಪನಿ ಸದ್ದಿಲ್ಲದೆ ಭಾರತದಲ್ಲಿ ತನ್ನ ಹೊಸ ಮೋಟೋ ಜಿ32 (Moto G32) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಇದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಕರ್ಷಕ ಕ್ಯಾಮೆರಾ, ಬ್ಯಾಟರಿ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್​ ಇದೆ ಎಂಬುದನ್ನು ನೋಡೋಣ.

  1. ಮೋಟೋ G32 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದ ಮಾರುಕಟ್ಟೆಯಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆಗೆ 12,999 ರೂ. ನಿಗದಿ ಮಾಡಲಾಗಿದೆ.
  2. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನ್ ಆಗಸ್ಟ್ 16 ರಿಂದ ಖರೀದಿಗೆ ಸಿಗಲಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಕೂಡ ನೀಡಲಾಗಿದ್ದು, HDFC ಬ್ಯಾಂಕ್ ಕಾರ್ಡ್ ಮೂಲಕ ಪಡೆದುಕೊಂಡರೆ ಶೇ. 10 ರಷ್ಟು ರಿಯಾಯಿತಿ ಸಿಗಲಿದೆ.
  3. ಈ ಫೋನ್ 6.5 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ದ ಜೊತೆಗೆ 90Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
  4. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  5. ಇದನ್ನೂ ಓದಿ
    Image
    WhatsApp Update: ಕೂಡಲೇ ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ: ಬಂದಿದೆ ವಿನೂತನ ಫೀಚರ್
    Image
    Best Smartphone: ಆಗಸ್ಟ್​ನಲ್ಲಿ ನೀವು ಖರೀದಿಸಬಹುದಾದ ಮಧ್ಯಮ ಬೆಲೆಯ ಬೆಸ್ಟ್ ಫೋನ್​ಗಳು ಇಲ್ಲಿದೆ ನೋಡಿ
    Image
    5G Service: ಶೀಘ್ರದಲ್ಲೇ ಹೈ-ಸ್ಪೀಡ್ 5G ಮೊಬೈಲ್ ಸೇವೆ ಭಾರತದಲ್ಲಿ ಲಭ್ಯ; 6G ತಂತ್ರಜ್ಞಾನದ ಆವಿಷ್ಕಾರಕ್ಕೂ ಹೆಜ್ಜೆ
    Image
    Google search down: ಗೂಗಲ್ ಸರ್ಚ್ ಇಂಜಿನ್ ಡೌನ್: ಸಾವಿರಾರು ಬಳಕೆದಾರರ ಪರದಾಟ
  6. ಮೋಟೋ G32 ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ F1.8 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ F2.2 ಲೆನ್ಸ್‌ ಹೊಂದಿರುವ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್‌ ಹೊಂದಿದೆ.
  7. ಈ ಫೋನ್​ನಲ್ಲಿರುವ ಮೂರನೇ ಕ್ಯಾಮೆರಾ F2 ಜೊತೆಗೆ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
  8. ಬಲಿಷ್ಠವಾದ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಯುಎಸ್​ಬಿ-C ಪೋರ್ಟ್ ಅನ್ನು ಅಳವಡಿಸಲಾಗಿದೆ.

Published On - 2:02 pm, Tue, 9 August 22