Moto G42: ಭಾರತದಲ್ಲಿ ಧೂಳೆಬ್ಬಿಸಲು ಬರುತ್ತಿದೆ ಮೋಟೋ G42 ಸ್ಮಾರ್ಟ್​​ಫೋನ್: ಜುಲೈ 4ಕ್ಕೆ ಬಿಡುಗಡೆ

ಕಳೆದ ತಿಂಗಳು ವಿದೇಶದಲ್ಲಿ ಬಿಡುಗಡೆ ಮಾಡಿ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದ್ದ ಮೋಟೋ ಜಿ42 (Moto G42) ಸ್ಮಾರ್ಟ್​​ಫೋನನ್ನು ಮೋಟೋರೊಲ ಕಂಪನಿ ಜುಲೈ 4 ರಂದು ಭಾರತದಲ್ಲಿ ರಿಲೀಸ್ ಮಾಡಲು ಮುಂದಾಗಿದೆ.

Moto G42: ಭಾರತದಲ್ಲಿ ಧೂಳೆಬ್ಬಿಸಲು ಬರುತ್ತಿದೆ ಮೋಟೋ G42 ಸ್ಮಾರ್ಟ್​​ಫೋನ್: ಜುಲೈ 4ಕ್ಕೆ ಬಿಡುಗಡೆ
Moto G42
Follow us
TV9 Web
| Updated By: Vinay Bhat

Updated on: Jun 28, 2022 | 2:17 PM

ಮುಂದಿನ ಜುಲೈ ತಿಂಗಳಲ್ಲಿ ಭಾರತದಲ್ಲಿ ಸಾಲು ಸಾಲು ಸ್ಮಾರ್ಟ್​​ಫೋನ್​ಗಳು ಬಿಡುಗಡೆ ಆಗುವುದರಲ್ಲಿದೆ. ಸ್ಯಾಮ್​ಸಂಗ್, ಶವೋಮಿ (Xiaomi), ರಿಯಲ್ ಮಿ, ಒನ್​ಪ್ಲಸ್​ನ ನಾರ್ಡ್​ 2T, ಒಪ್ಪೋ ಹೀಗೆ ಅನೇಕ ಕಂಪನಿಗಳ ಮೊಬೈಲ್ ಮುಂದಿನ ತಿಂಗಳು ದೇಶದಲ್ಲಿ ಅನಾವರಣಗೊಳ್ಳಲಿದೆ. ಇದೀಗ ಈ ಸಾಲಿಗೆ ಮೋಟೋರೊಲ ಕಂಪನಿ ಕೂಡ ಸೇರಿಕೊಂಡಿದೆ. ಹೌದು, ಕಳೆದ ತಿಂಗಳು ವಿದೇಶದಲ್ಲಿ ಬಿಡುಗಡೆ ಮಾಡಿ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದ್ದ ಮೋಟೋ ಜಿ42 (Moto G42) ಸ್ಮಾರ್ಟ್​​ಫೋನನ್ನು ಮೋಟೋರೊಲ ಕಂಪನಿ ಜುಲೈ 4 ರಂದು ಭಾರತದಲ್ಲಿ ರಿಲೀಸ್ ಮಾಡಲು ಮುಂದಾಗಿದೆ. ಈ ಬಗ್ಗೆ ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಫ್ಲಿಪ್​ಕಾರ್ಟ್ (Flipkart)​​ ಟೀಸರ್ ಒಂದನ್ನು ಬಿಟ್ಟಿದ್ದು ಕೆಲ ಫೀಚರ್​ಗಳು ಕೂಡ ರಿವೀಲ್ ಆಗಿದೆ. ಹಾಗಾದ್ರೆ ಈ ಫೋನಿನ ವಿಶೇಷತೆ ಏನು ಎಂಬುದನ್ನು ನೋಡೋಣ.

  1. ಮೋಟೋ G42 ಸ್ಮಾರ್ಟ್‌ಫೋನ್‌ 6.4 ಇಂಚಿನ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದೆ.
  2. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್‌ 12 ನ ಇತ್ತೀಚಿನ ಆವೃತ್ತಿಯ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  3. ಇದು 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಲಭ್ಯವಾಗಲಿದೆ.
  4. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಒಟ್ಟಾರೆ ಬ್ಯಾಟರಿ ಕಾರ್ಯಕ್ಷಮತೆಯಲ್ಲಿ 20 ಪ್ರತಿಶತದಷ್ಟು ವರ್ಧಕವನ್ನು ನೀಡುತ್ತದೆ ಎಂದು ಕಂಪನಿ ಹೇಳಿದೆ.
  5. ಇದನ್ನೂ ಓದಿ
    Image
    Poco F4 5G: 28,000 ರೂ. ಫೋನನ್ನು 23,999ಕ್ಕೆ ಖರೀದಿಸಿ: ಹೊಸ ಪೋಕೋ F4 5G ಮೇಲೆ ಭರ್ಜರಿ ಡಿಸ್ಕೌಂಟ್
    Image
    OnePlus Nord 2T: ಒನ್​ಪ್ಲಸ್ ನಾರ್ಡ್ 2T ಬಿಡುಗಡೆಗೆ ಕ್ಷಣಗಣನೆ: ಏನು ವಿಶೇಷತೆ?, ಬೆಲೆ ಎಷ್ಟು?
    Image
    Gmail: ಇದೀಗ ಇಂಟರ್ನೆಟ್ ಇಲ್ಲದೆಯೂ ಇಮೇಲ್ ಕಳುಹಿಸಿ: ಜಿಮೇಲ್​​ನಲ್ಲಿ ಬಂದಿದೆ ಹೊಸ ಆಯ್ಕೆ
    Image
    ಮೋಟೋ ಎಡ್ಜ್ 30 ಆಲ್ಟ್ರಾ ಫೋನಿನ ಮಾಹಿತಿ ಸೋರಿಕೆ: ಫೀಚರ್ಸ್​​ ಕಂಡು ದಂಗಾದ ಟೆಕ್ ಪ್ರಿಯರು
  6. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ.
  7. ಇದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿಯೊಂದಿಗೆ ಬರುತ್ತಿರುವುದು ವಿಶೇಷ. ಜೊತೆಗೆ ಲೋ ಲೈಟ್‌ ಸ್ಟೇಟಸ್‌ನಲ್ಲಿ ಫೋಟೋಗಳನ್ನು ಕ್ಲಿಕ್ ಮಾಡಲು ನೈಟ್ ವಿಷನ್ ಮೋಡ್ ಅನ್ನು ಒಳಗೊಂಡಿದೆ.
  8. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಯನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡಾಲ್ಬಿ ಅಟ್ಮೋಸ್‌ ಬೆಂಬಲದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ.
  9. ಮೋಟೋ G42 ಫೋನ್‌ ಬೆಲೆ ಭಾರತದಲ್ಲಿ ಎಷ್ಟೆಂದು ಇನ್ನೂ ತಿಳಿದುಬಂದಿಲ್ಲ. ಆದರೆ, ಮೂಲಗಳ ಪ್ರಕಾರ 20,000 ರೂ. ಒಳಗೆ ಮಾರಾಟ ಕಾಣಲಿದೆ ಎಂದು ಹೇಳಲಾಗಿದೆ.

Laptops Under Rs. 25000: ಬಜೆಟ್ ಬೆಲೆಯ ಬೆಸ್ಟ್​ ಲ್ಯಾಪ್​ಟಾಪ್ ಹುಡುಕುತ್ತಿದ್ದೀರಾ?: ಇಲ್ಲಿದೆ ನೋಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ