Moto G51 5G: ಮುಂದಿನ ವಾರ ರಿಲೀಸ್ ಆಗಲಿದೆ ಬಜೆಟ್ ಬೆಲೆಯ ಈ ಸ್ಮಾರ್ಟ್‌ಫೋನ್: ಖರೀದಿಗೆ ಕ್ಯೂ ಗ್ಯಾರಂಟಿ
Motorola: ಮೋಟೋರೊಲಾ ಜಿ51 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ಹೊಂದಿರುವ ಈ ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ 10 ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ.
ಮೊಬೈಲ್ ಮಾರುಕಟ್ಟೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಮೋಟೋರೊಲಾ (Motorola) ಕಂಪನಿ ಈಗೀಗ ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಪರಿಚಯಿಸಿ ಭದ್ರವಾಗಿ ನೆಲೆಯೂರಲು ಪ್ರಯತ್ನ ಪಡುತ್ತಿದೆ. ಹೆಚ್ಚಾಗಿ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ಗಳಿಂದಲೇ ಭರ್ಜರಿ ಸುದ್ದಿಯಲ್ಲಿರುವ ಮೋಟೋ (Moto) ಕಂಪನಿ ಇದೀಗ ತನ್ನ ಹೊಸ ಮೋಟೋರೊಲಾ ಜಿ51 5ಜಿ (Moto G51 5G) ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ (Qualcomm Snapdragon) ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ಹೊಂದಿರುವ ಈ ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ 10 ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ. ಈ ಫೊನಿನ ವಿಶೇಷತೆ ಬಗ್ಗೆ ಕಂಪನಿ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ಕೆಲವೊಂದು ವಿಚಾರಗಳು ತಿಳಿದುಬಂದಿದೆ.
ಮೋಟೋ G51 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿರಲಿದೆಯಂತೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.
ಇನ್ನೂ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ S5JKN1 ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.
5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಜೊತೆಗೆ 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು Dolby Atmos ಬೆಂಬಲದೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಇರಲಿದೆಯಂತೆ. ಭಾರತದಲ್ಲಿ ಮೋಟೋ G51 ಸ್ಮಾರ್ಟ್‌ಫೋನ್ 19,999 ರೂ.ಬೆ ಲೆಗೆ ಬರಲಿದೆ ಎಂದು ಊಹಿಸಲಾಗಿದೆ.
ಮುಂದಿನ ವರ್ಷ ಬರಲಿದೆ 200MP ಕ್ಯಾಮೆರಾದ ಫೋನ್:
ಹೌದು, ಮುಂದಿನ ವರ್ಷ ಆಕರ್ಷಕ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಮೋಟೋ ಈಗಿನಿಂದಲೇ ತಯಾರಿಯೊಂದನ್ನು ನಡೆಸುತ್ತಿದೆ. ವಿಶೇಷ ಎಂದರೆ ಈ ಫೋನ್ ಬರೋಬ್ಬರಿ 200 ಮೆಗಾಫಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒಳಗೊಂಡಿರಲಿದೆಯಂತೆ. ಈ ಫೋನ್ ಆದಾಗಲೇ ಟೆಕ್ ಪ್ರಿಯರಲ್ಲಿ ಕುತೂಹಲ ಕೆರಳಿಸುವಂತೆ ಮಾಡಿದೆ. ಕ್ಯಾಮೆರಾ ಜೊತೆಗೆ ಇನ್ನಷ್ಟು ಆಕರ್ಷಕ ಫೀಚರ್ಗಳು ಈ ಫೋನ್ನಲ್ಲಿ ಇರಲಿದೆಯಂತೆ. ಸ್ಯಾಮ್‌ಸಂಗ್ ತನ್ನ ಹೊಸ 200MP ISOCELL ಕ್ಯಾಮೆರಾ ಸೆನ್ಸಾರ್ ಅನ್ನು ಸೆಪ್ಟೆಂಬರ್‌ನಲ್ಲಿ ಪರಿಚಯಿಸಿತ್ತು. ಆದರೆ ಈ ಸೆನ್ಸಾರ್ ಅನ್ನು ಈಗ ಯಾವುದೇ ಸ್ಮಾರ್ಟ್‌ಫೋನ್ ಕಂಪನಿಯು ಬಳಸಿಲ್ಲ. ಇದೀಗ ಮೋಟೋರೊಲಾ ಕಂಪನಿ ಈ ಸ್ಯಾಮ್‌ಸಂಗ್‌ನ 200MP ISOCELL ಕ್ಯಾಮೆರಾ ಸೆನ್ಸಾರ್ ಬಳಸುವ ಮೊದಲ ಕಂಪನಿಯಾಗಲಿದೆ.
Airtel New Prepaid Plans: ಬೆಲೆ ಏರಿಕೆಯನ್ನೇ ಮರೆಸುತ್ತದೆ ಏರ್ಟೆಲ್ನ ಈ ಹೊಸ ಆಫರ್: ಬಳಕೆದಾರರು ಫುಲ್ ಖುಷ್
(Moto G51 5G Motorola is expected to launch its Moto G51 5G in India on December 10)