Moto G51: 5000mAh ಬ್ಯಾಟರಿ, 50MP ಕ್ಯಾಮೆರಾ: ಅತ್ಯಂತ ಕಡಿಮೆ ಬೆಲೆ ಮೋಟೋ G51 ಸ್ಮಾರ್ಟ್​ಫೋನ್ ರಿಲೀಸ್

ವರದಿಯ ಪ್ರಕಾರ ಹೊಸ ಮೋಟೋ G51 ಬೆಲೆ ಚೀನಾದಲ್ಲಿ CNY 1,499. ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 17,500 ರೂ. ಎನ್ನಬಹುದು. ಇದು ಬ್ಲೂ ಮತ್ತು ಬೂದು ಗ್ರೇಡಿಯಂಟ್ ವರ್ಣಗಳಲ್ಲಿ ಬಿಡುಗಡೆಯಾಗಿದೆ.

Moto G51: 5000mAh ಬ್ಯಾಟರಿ, 50MP ಕ್ಯಾಮೆರಾ: ಅತ್ಯಂತ ಕಡಿಮೆ ಬೆಲೆ ಮೋಟೋ G51 ಸ್ಮಾರ್ಟ್​ಫೋನ್ ರಿಲೀಸ್
Moto G51
Follow us
TV9 Web
| Updated By: Vinay Bhat

Updated on: Nov 05, 2021 | 1:02 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್ (Samsung) ನಡುವೆ ತನ್ನದೇ ಆದ ವಿಶೇಷ ಸ್ಥಾನ ಸ್ಥಾಪಿಸಿರುವ ಮೋಟೋರೊಲಾ (Motorola) ಕಂಪನಿ ಇದೀಗ ತನ್ನ ಹೊಸ ಮೋಟೋ ಜಿ51 (Moto G51) ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಕಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480+ SoC ಪ್ರೊಸೆಸರ್‌, ಆಕರ್ಷಕ ಕ್ಯಾಮೆರಾ, 5000mAh ಬಲಿಷ್ಠ ಬ್ಯಾಟರಿಯನ್ನು ಈ ಫೋನ್ ಹೊಂದಿದೆ. ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿರುವ ಮೋಟೋ G51 ಸದ್ಯದಲ್ಲೇ ಭಾರತಕ್ಕೂ ಕಾಲಿಡಲಿದೆ.

ವರದಿಯ ಪ್ರಕಾರ ಹೊಸ ಮೋಟೋ G51 ಬೆಲೆ ಚೀನಾದಲ್ಲಿ CNY 1,499. ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 17,500 ರೂ. ಎನ್ನಬಹುದು. ಇದು ಬ್ಲೂ ಮತ್ತು ಬೂದು ಗ್ರೇಡಿಯಂಟ್ ವರ್ಣಗಳಲ್ಲಿ ಬಿಡುಗಡೆಯಾಗಿದೆ.

ಮೊಟೊ G51 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೋಲ್‌-ಪಂಚ್‌ ಡಿಸ್‌ಪ್ಲೇ ನಾಚ್‌ ವಿನ್ಯಾಸವನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ವೀಡಿಯೋ ಕರೆ ಮತ್ತು ಗೇಮಿಂಗ್‌ಗೆ ಅನುಕೂಲಕರವಾದ ವಿನ್ಯಾಸಹೊಂದಿದೆ.

ವಿಶೇಷವಾಗಿ 2.2GHz ಆಕ್ಟಾ-ಕೋರ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ v11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ S5JKN1 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಆಟೋ ಫೋಕಸ್‌, ಫ್ಲ್ಯಾಶ್‌, ಅನ್ನು ಪಡೆದುಕೊಂಡಿದೆ.

ಮೋಟೋ G51 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಪಡೆದುಕೊಂಡಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಹೇಳಲಾಗಿದೆ. ಅಲ್ಲದೆ ಡಾಲ್ಬಿ ಅಟ್ಮಾಸ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಯರ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ, Wi-Fi 5, ಬ್ಲೂಟೂತ್ v5.2, GPS, USB ಟೈಪ್-C ಪೋರ್ಟ್ ಮತ್ತು 3.5mm ಆಡಿಯೋ ಜಾಕ್‌ ನೀಡಲಾಗಿದೆ.

Facebook: ಜನರ ಮಾತು ಕದ್ದಾಲಿಸುತ್ತಿದೆಯೇ ಫೇಸ್​ಬುಕ್: ಇಷ್ಟೊಂದು ಜನರಿಗೆ ಅನುಮಾನ ಬರಲು ಕಾರಣವಿದೆ

(Moto G51 has been launched in the mid-range category and comes with Best features)

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್